Homeಮುಖಪುಟಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ಬಿಜೆಪಿಯ12 ಸಭೆ: ದಾಖಲೆ ಕೇಳಿದ ಕಾಂಗ್ರೆಸ್

ಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ಬಿಜೆಪಿಯ12 ಸಭೆ: ದಾಖಲೆ ಕೇಳಿದ ಕಾಂಗ್ರೆಸ್

- Advertisement -
- Advertisement -

ಬಿಜೆಪಿ ಚೀನಾದೊಂದಿಗೆ ನಿಕಟ ಸಂಪರ್ಕ ಹೊಂದಿದೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದ್ದು, 2008 ರಿಂದ ಬಿಜೆಪಿ ನಾಯಕರು ಮತ್ತು ಚೀನಾದ ಅಧಿಕಾರಿಗಳ ನಡುವೆ 12 ಉನ್ನತ ಮಟ್ಟದ ಸಭೆಗಳು ನಡೆದಿವೆ ಎಂದು ಆರೋಪಿಸಿದೆ. ಆ ಸಭೆಗಳಲ್ಲಿ ಏನಾಗಿದೆ ಎಂಬುವುದರ ಸಂಪೂರ್ಣ ದಾಖಲೆ ನೀಡುವಂತೆ ಕೇಳಿದೆ.

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು ಹೇಳಿಕೆ ಬಿಡುಗಡೆ ಮಾಡಿದ್ದು, “ಬಿಜೆಪಿಯು ಚೀನಾದೊಂದಿಗೆ ನಿಕಟ ಸಂಬಂಧ ಹೊಂದಿದೆಯೇ? ಉಭಯ ಪಕ್ಷಗಳ ನಡುವಿನ ಸಭೆಗಳ ಫಲಿತಾಂಶ ಏನು?” ಎಂದು ಪ್ರಶ್ನಿಸಿದ್ದಾರೆ.

“ಜೂನ್ 2020ರಿಂದ ಪ್ರಧಾನಿ ನರೇಂದ್ರ ಮೋದಿಯವರು ಚೀನಾವು ಲಡಾಖ್‌ನಲ್ಲಿ ಮಾಡಿದ ಕಾರ್ಯಗಳಿಗೆ ಕ್ಲೀನ್ ಚಿಟ್ ನೀಡಿದ ನಂತರ, ಚೀನಾದ ವಿರುದ್ಧ ನಿಲ್ಲಲು ಬಿಜೆಪಿಗೆ ಏಕೆ ಇಷ್ಟವಿರಲಿಲ್ಲ? ಎಂದು ಭಾರತದ ಜನರು ಕೇಳುತ್ತಿದ್ದಾರೆ. ಬಿಜೆಪಿ ಮತ್ತು ಚೀನಾದ ಕಮ್ಯುನಿಸ್ಟ್ ಪಕ್ಷದ ನಡುವಿನ ನಿಕಟ ಸಂಪರ್ಕಗಳು ಇದಕ್ಕೆ ಕಾರಣವೇ? ಎಂದು ಕಾಂಗ್ರೆಸ್ ಪವನ್ ಖೇರಾ ಕೇಳಿದ್ದಾರೆ.

“2008ರಿಂದ ಈವರೆಗೆ ಕನಿಷ್ಠ 12 ಸಭೆಗಳು ನಡೆದಿವೆ. ಬಿಜೆಪಿಯ ರಾಜಕಾರಣಿಗಳು ಚೀನಾದ ಕಮ್ಯುನಿಸ್ಟ್ ಪಕ್ಷದ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ. ಅದು ಕೂಡಾ ಬಹುತೇಕ ಸಭೆ, ಭೇಟಿ ಚೀನಾದಲ್ಲಿಯೇ ನಡೆದಿದೆ” ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕ ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಸಭೆಯಲ್ಲಿ ನಡೆದ ಚರ್ಚೆಗಳ ಬಗ್ಗೆ ಮಾಹಿತಿಯನ್ನು ನೀಡುವಂತೆ ಕೇಳಿರುವ ಪವನ್ ಖೇರಾ ‘ಪದೇ ಪದೇ ಸಭೆ’ ನಡೆಸುವ ಹಿಂದಿರುವ ಕಾರಣ ತಿಳಿಸುವಂತೆ ಹೇಳಿದ್ದಾರೆ. ಹಾಗೆಯೇ 2017ರಲ್ಲಿ ಡೋಕ್ಲಾಮ್ ಘರ್ಷಣೆಯ ನಂತರ ಈ ಭೇಟಿಗಳ ಹಿಂದಿರುವ ಕಾರಣವೇನು? ಎಂದು ಪ್ರಶ್ನಿಸಿದ್ದಾರೆ.

ಸಭೆಗಳ ವಿವರಗಳನ್ನು ನೀಡುತ್ತಾ ಖೇರಾ ಅವರು, ಅಕ್ಟೋಬರ್ 2008ರಲ್ಲಿ 15 ಸದಸ್ಯರ ಚೀನಾದ ಕಮ್ಯುನಿಸ್ಟ್ ಪಕ್ಷದ ನಿಯೋಗ ಬಿಜೆಪಿಯ ಕೇಂದ್ರ ಕಚೇರಿಗೆ ಭೇಟಿ ನೀಡಿತ್ತು. ನಂತರ ರಾಜನಾಥ್ ಸಿಂಗ್ ಅವರು ‘”ಬಿಜೆಪಿ ಯಾವಾಗಲೂ ಚೀನಾದೊಂದಿಗೆ ಸಕಾರಾತ್ಮಕ ಸಂಬಂಧವನ್ನು ಬೆಳೆಸಲು ಒಲವು ಹೊಂದಿದೆ” ಎಂದಿದ್ದರು ಎಂದು ತಿಳಿಸಿದ್ದಾರೆ.

ಜನವರಿ 2009ರಲ್ಲಿ, ಬಿಜೆಪಿ-ಆರ್‌ಎಸ್‌ಎಸ್ ತಂಡವು ಬೀಜಿಂಗ್ ಮತ್ತು ಶಾಂಘೈಗೆ ಐದು ದಿನಗಳ ಪ್ರವಾಸ ಕೈಗೊಂಡು ಚೀನಾದ ಕಮ್ಯುನಿಸ್ಟ್‌ ಪಕ್ಷದ ಪಾಲಿಟ್‌ಬ್ಯೂರೊ ಸದಸ್ಯರು ಸೇರಿದಂತೆ ಪ್ರಮುಖರನ್ನು ಭೇಟಿ ಮಾಡಿತ್ತು. ಜನವರಿ 2011ರಲ್ಲಿ, ಆಗಿನ ಬಿಜೆಪಿ ಅಧ್ಯಕ್ಷ ನಿತಿನ್ ಗಡ್ಕರಿ ಅವರು ಚೀನಾಕ್ಕೆ ತೆರಳಿ ಕಮ್ಯುನಿಸ್ಟ್ ಪಕ್ಷದ ನಾಯಕರನ್ನು ಭೇಟಿಯಾಗಿದ್ದರು. ನವೆಂಬರ್ 2014ರಲ್ಲಿ 13 ಸದಸ್ಯರ ಬಿಜೆಪಿ ತಂಡ ಕಮ್ಯುನಿಸ್ಟ್ ‘ಪಾರ್ಟಿ ಸ್ಕೂಲ್’ ನಿಂದ ಕಲಿಯಲು ಚೀನಾಕ್ಕೆ ಭೇಟಿ ನೀಡಿತ್ತು. ಆಗ ಬಿಜೆಪಿ ಸಂಸದರಾಗಿದ್ದ ಭಗತ್ ಸಿಂಗ್ ಕೊಶ್ಯಾರಿ ಅವರು ಚೀನಾದ ಪೀಪಲ್ಸ್ ಪೊಲಿಟಿಕಲ್ ಕನ್ಸಲ್ಟೇಟಿವ್ ಕಾನ್ಫರೆನ್ಸ್‌ನ ರಾಷ್ಟ್ರೀಯ ಸಮಿತಿಯ ಉಪಾಧ್ಯಕ್ಷರನ್ನು ಭೇಟಿಯಾಗಿದ್ದರು ಎಂದು ಪವನ್ ಖೇರಾ ಹೇಳಿದ್ದಾರೆ.

ಫೆಬ್ರವರಿ 2015ರಲ್ಲಿ ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಸಚಿವರು ಅಮಿತ್ ಶಾ ಅವರನ್ನು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿದ್ದರು. ಅಕ್ಟೋಬರ್ 2015 ರಲ್ಲಿ ಬಿಜೆಪಿ ಉಪಾಧ್ಯಕ್ಷ ವಿನಯ್ ಸಹಸ್ರಬುದ್ಧೆ ಚೀನಾದಲ್ಲಿ ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಅಂತಾರಾಷ್ಟ್ರೀಯ ವಿಭಾಗದ ಉಪ ಮಂತ್ರಿ ಚೆನ್ ಫೆಂಗ್‌ಕ್ಸಿಯಾಂಗ್ ಅವರನ್ನು ಭೇಟಿಯಾಗಿದ್ದರು.

ಜೂನ್ 2017 ರಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು ಚೀನಾದ ಫುಝೌನಲ್ಲಿ ಕಮ್ಯುನಿಸ್ಟ್ ಪಕ್ಷದ ಗುವೊ ಯೆಝೌ ಅವರನ್ನು ಭೇಟಿ ಮಾಡಿದ್ದರು. ಮೇ 2018 ರಲ್ಲಿ, ಬಿಜೆಪಿ ನಾಯಕ ಅನಿರ್ಬನ್ ಗಂಗೂಲಿ ಅವರು ಚೀನಾದ ಶೆನ್ಜೆನ್ನಲ್ಲಿ ಕಮ್ಯುನಿಸ್ಟ್ ಪಕ್ಷದ ಗುವೊ ಯೆಝೌ ಅವರನ್ನು ಭೇಟಿ ಮಾಡಿದ್ದರು. ಆಗಸ್ಟ್ 2018 ರಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು ಚೀನಾದ ಬೀಜಿಂಗ್‌ನಲ್ಲಿ ಕಮ್ಯುನಿಸ್ಟ್ ಪಕ್ಷದ ಸಚಿವರನ್ನು ಭೇಟಿ ಮಾಡಿದ್ದರು. ಸೆಪ್ಟೆಂಬರ್ 2018 ರಲ್ಲಿ ಕಮ್ಯುನಿಸ್ಟ್ ಪಕ್ಷದ ಪಾಲಿಟ್‌ಬ್ಯೂರೋ ಸದಸ್ಯ ಹುವಾಂಗ್ ಕುನ್ಮಿಂಗ್ ಅವರು ಬಿಜೆಪಿ ನಾಯಕ ಮತ್ತು ನಂತರ ಜಾರ್ಖಂಡ್ ಮುಖ್ಯಮಂತ್ರಿ ರಘುಬರ್ ದಾಸ್ ಅವರನ್ನು ಭೇಟಿಯಾಗಿದ್ದರು ಎಂದು ಪವನ್ ಖೇರಾ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಆಗಸ್ಟ್ 2019ರಲ್ಲಿ, ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ನೇತೃತ್ವದ ಬಿಜೆಪಿ ನಿಯೋಗವು ಚೀನಾಕ್ಕೆ ಭೇಟಿ ನೀಡಿತ್ತು. ಬಿಜೆಪಿ ಕೇಡರ್ ಅಧ್ಯಯನ ಗುಂಪು ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಅಂತಾರಾಷ್ಟ್ರೀಯ ವಿಭಾಗದ ಉಪ ಸಚಿವ ಗುವೊ ಯೆಝೌ ಅವರೊಂದಿಗೆ ಮಾತುಕತೆ ನಡೆಸಿತ್ತು. ಸೆಪ್ಟೆಂಬರ್ 2019 ರಲ್ಲಿ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರು ಚೀನಾ ರಾಯಭಾರಿಯನ್ನು ಭೇಟಿ ಮಾಡಿದ್ದರು ಎಂದು ಪವನ್ ಖೇರಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ‘ಬಿಜೆಪಿ ಟಿಕೆಟ್ ಆಮಿಷ ನೀಡಿ ರಾಜೀನಾಮೆ ಕೊಡಿಸಿ ವಂಚಿಸಿದ್ರು’: ಮಣಿಪುರ ಹಿಂಸಾಚಾರದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ತಂಡದ ನೇತೃತ್ವ ವಹಿಸಿದ್ದ ಅಧಿಕಾರಿ ಸ್ಪೋಟಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...