Homeಮುಖಪುಟಲೈಂಗಿಕ ಕಿರುಕುಳ ಆರೋಪ| ತಾನು ನಿರ್ದೋಷಿ ಎಂದ ಬ್ರಿಜ್ ಭೂಷಣ್ ಸಿಂಗ್: ವಿಚಾರಣಾ ಹಂತ ತಲುಪಿದ...

ಲೈಂಗಿಕ ಕಿರುಕುಳ ಆರೋಪ| ತಾನು ನಿರ್ದೋಷಿ ಎಂದ ಬ್ರಿಜ್ ಭೂಷಣ್ ಸಿಂಗ್: ವಿಚಾರಣಾ ಹಂತ ತಲುಪಿದ ಪ್ರಕರಣ

- Advertisement -
- Advertisement -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದಲ್ಲಿ ತಾನು ನಿರ್ದೋಷಿ ಎಂದು ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಒಕ್ಕೂಟ (ಡಬ್ಲ್ಯುಎಫ್‌ಐ)ದ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಮಂಗಳವಾರ ದೆಹಲಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರಾದ ಸಿಂಗ್‌, ತಾನು ಯಾವುದೇ ಅಪರಾಧ ಮಾಡಿಲ್ಲ ಎಂದಿದ್ದಾರೆ.

“ನೀವು ತಪ್ಪಿತಸ್ಥರು ಎಂದು ಒಪ್ಪಿಕೊಳ್ಳುತ್ತೀರಾ?’ ಎಂದು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಪ್ರಿಯಾಂಕಾ ರಾಜ್‌ಪೂತ್ ಸಿಂಗ್ ಅವರು ಪ್ರಶ್ನಿಸಿದಾಗ, “ಆ ಪ್ರಶ್ನೆಯೇ ಉದ್ಭವಿಸದು. ನಾನು ಯಾವುದೇ ತಪ್ಪೆಸಗಿಲ್ಲ” ಎಂದು ಬ್ರಿಜ್ ಭೂಷಣ್ ಹೇಳಿದ್ದಾರೆ.

ಸಹ ಆರೋಪಿ ವಿನೋದ್ ತೋಮರ್ ಕೂಡ ತಾನು ನಿರಪರಾಧಿ ಎಂದಿದ್ದು, ಪರಿಣಾಮ ಪ್ರಕರಣದಲ್ಲಿ ಆರೋಪವನ್ನು ಹೊತ್ತಿರುವವರು ದೋಷಿಗಳೋ ಅಲ್ಲವೋ? ಎನ್ನುವುದನ್ನು ನಿರ್ಧರಿಸಲು ವಿಚಾರಣೆ ಆರಂಭವಾಗಲಿದೆ.

ಐವರು ಮಹಿಳಾ ಕುಸ್ತಿಪಟುಗಳು ಸಿಂಗ್‌ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಘನತೆಗೆ ಕುತ್ತು ತಂದ ಆರೋಪ ಮಾಡಿದ್ದರು. ಈ ಹಿನ್ನೆಲೆ, ನ್ಯಾಯಾಲಯ ಮೇ 10 ರಂದು ಅವರ ವಿರುದ್ಧ ಆರೋಪ ನಿಗದಿಪಡಿಸಿತ್ತು.

ಐಪಿಸಿ ಸೆಕ್ಷನ್‌ಗಳಾದ 354 (ಮಹಿಳೆಯ ಘನತೆಗೆ ಧಕ್ಕೆ), 354ಎ (ಲೈಂಗಿಕ ಅವಾಚ್ಯ ಶಬ್ದ ಬಳಕೆ) ಮತ್ತು ಇಬ್ಬರು ಕುಸ್ತಿಪಟುಗಳಿಗೆ ಸಂಬಂಧಿಸಿದಂತೆ ಐಪಿಸಿಯ ಸೆಕ್ಷನ್ 506(1) (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಸಿಂಗ್‌ ವಿರುದ್ಧ ಆರೋಪ ನಿಗದಿಪಡಿಸಲು ಸಾಕಷು ಸಾಕ್ಷ್ಯಗಳಿವೆ ಎಂದು ನ್ಯಾ. ಪ್ರಿಯಾಂಕಾ ತಿಳಿಸಿದ್ದರು.

ಪ್ರಕರಣದ ಮೊದಲನೇ ಸಂತ್ರಸ್ತೆಗೆ ಕ್ರಿಮಿನಲ್‌ ಬೆದರಿಕೆಯೊಡ್ಡಿದ್ದಕ್ಕಾಗಿ ಕುಸ್ತಿ ಒಕ್ಕೂಟದ ಮಾಜಿ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ವಿರುದ್ಧ ಆರೋಪ ನಿಗದಿಪಡಿಸಲಾಗಿತ್ತು.

ಇದನ್ನೂ ಓದಿ : ಮಮತಾ ಬ್ಯಾನರ್ಜಿಗೆ ಅವಹೇಳನ: ಅಭಿಜಿತ್ ಗಂಗೋಪಾಧ್ಯಾಯ ಚುನಾವಣಾ ಪ್ರಚಾರಕ್ಕೆ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...