Homeಕರ್ನಾಟಕಕಾಂಗ್ರೆಸ್‌ ಮುಖಂಡ, ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ನಿಧನ

ಕಾಂಗ್ರೆಸ್‌ ಮುಖಂಡ, ಮಾಜಿ ಸಂಸದ ಇಕ್ಬಾಲ್ ಅಹ್ಮದ್ ಸರಡಗಿ ನಿಧನ

- Advertisement -
- Advertisement -

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಮಾಜಿ ಸಂಸದ, ವಿಧಾನ ಪರಿಷತ್ ಮಾಜಿ ಸದಸ್ಯ ಇಕ್ಬಾಲ್ ಅಹ್ಮದ್ ಸರಡಗಿ ನಿಧನರಾಗಿದ್ದಾರೆ.

80ರ ಹರೆಯದ ಇಕ್ಬಾಲ್ ಅಹ್ಮದ್ ಸರಡಗಿ ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.

1944ರ ಜೂ.5ರಂದು ಕಲಬುರಗಿಯಲ್ಲಿ ಜನಿಸಿದ್ದ ಇಕ್ಬಾಲ್ ಅಹ್ಮದ್ ಸರಡಗಿ, ಎಲ್.ಎಲ್.ಬಿ ಶಿಕ್ಷಣ ಪಡೆದಿದ್ದರು. ಸರಡಗಿ 1999ರಿಂದ 2009ರವರೆಗೆ ಎರಡು ಅವಧಿಗೆ ಕಲಬುರಗಿ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. 2014ರಿಂದ 2020ರವರೆಗೆ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿದ್ದರು. ಈ ಅವಧಿಯಲ್ಲಿ ಸರಕಾರದ ವಿವಿಧ ಸಮಿತಿಗಳ ಸದಸ್ಯರಾಗಿಯೂ ಸೇವೆ ಸಲ್ಲಿಸಿದರು.

ಮೃತರು ಪತ್ನಿ ಸೇರಿ ಓರ್ವ ಪುತ್ರ ಮತ್ತು ಮಗಳನ್ನು ಅಗಲಿದ್ದಾರೆ. ಇಂದು ಸಂಜೆ 5 ಗಂಟೆಗೆ ಹಫತ್ ಗುಂಬಜ್ ಪ್ರದೇಶದ ನ್ಯಾಷನಲ್ ಕಾಲೇಜು ಸಮೀಪದ ಮಸೀದಿಯಲ್ಲಿ ಅಂತಿಮ ಪ್ರಾರ್ಥನೆ ನಡೆದು ಬಳಿಕ ದಫನ ಕಾರ್ಯ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.

ಇಕ್ಬಾಲ್ ಅಹ್ಮದ್ ಸರಡಗಿ ನಿಧನದ ಬಗ್ಗೆ ಎಕ್ಸ್‌ನಲ್ಲಿ ಸಂತಾಪ ಸೂಚಿಸಿ ಪೋಸ್ಟ್‌ ಮಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನನ್ನ ಆತ್ಮೀಯ ಗೆಳೆಯ, ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಗುಲ್ಬರ್ಗದ ಮಾಜಿ ಸಂಸದ ಶ್ರೀ ಇಕ್ಬಾಲ್ ಅಹಮದ್ ಸರಡಗಿ ಅವರ ನಿಧನದಿಂದ ತೀವ್ರ ನೋವಾಗಿದೆ. ಶಿಕ್ಷಣತಜ್ಞ ಮತ್ತು ಪರೋಪಕಾರಿ, ಅವರು ಗುಲ್ಬರ್ಗದ ಜನರ ಉನ್ನತಿಗಾಗಿ ಅವಿರತವಾಗಿ ಶ್ರಮಿಸಿದರು ಮತ್ತು ಎಲ್ಲರಿಗೂ ಕಲ್ಯಾಣಕ್ಕಾಗಿ ಶ್ರಮಿಸಿದವರು. ಅವರ ಕೌನ್ಸಿಲರ್ ದಿನಗಳಿಂದ ಅವರು ಗುಲ್ಬರ್ಗದ ಸಂಸದರಾದ ಸಮಯದವರೆಗೆ ಮತ್ತು ನಂತರ ನಾವು ಈ ರಾಜಕೀಯ ಕ್ಷೇತ್ರದಲ್ಲಿ ಒಟ್ಟಾಗಿ ಪ್ರಯಾಣಿಸಿದ್ದೇವೆ, ಆದ್ದರಿಂದ ಇದು ನನಗೆ ವೈಯಕ್ತಿಕವಾಗಿ ದೊಡ್ಡ ನಷ್ಟವಾಗಿದೆ. ಈ ದುಃಖದ ಸಮಯದಲ್ಲಿ, ಅವರ ಕುಟುಂಬ, ಸ್ನೇಹಿತರು ಮತ್ತು ಅನುಯಾಯಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಎಂದು ಹೇಳಿದ್ದಾರೆ.

ಇದನ್ನು ಓದಿ: ಭಾರತಕ್ಕೆ ಆಗಮಿಸಿದ್ದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...