Homeಮುಖಪುಟಮಧ್ಯ ಪ್ರದೇಶ ನರ್ಸಿಂಗ್ ಕಾಲೇಜು ಹಗರಣ: ಪ್ರತಿ ಸಂಸ್ಥೆಯಿಂದ 2-10 ಲಕ್ಷ ರೂ. ಲಂಚ ಪಡೆದ...

ಮಧ್ಯ ಪ್ರದೇಶ ನರ್ಸಿಂಗ್ ಕಾಲೇಜು ಹಗರಣ: ಪ್ರತಿ ಸಂಸ್ಥೆಯಿಂದ 2-10 ಲಕ್ಷ ರೂ. ಲಂಚ ಪಡೆದ ಸಿಬಿಐ ಅಧಿಕಾರಿಗಳು!

- Advertisement -
- Advertisement -

ಮಧ್ಯ ಪ್ರದೇಶದ ನರ್ಸಿಂಗ್ ಕಾಲೇಜು ಹಗರಣಕ್ಕೆ ಸಂಬಂಧಿಸಿದಂತೆ ನಡೆಸಿದ ಪರಿಶೀಲನೆಯಲ್ಲಿ ತಮ್ಮ ಅಧಿಕಾರಿಗಳೇ ಪೂರಕ ವರದಿ ನೀಡಲು ಪ್ರತಿ ಸಂಸ್ಥೆಯಿಂದ 2-10 ಲಕ್ಷ ರೂಪಾಯಿಗಳನ್ನು ಸಂಗ್ರಹಿಸಿರುವುದು ಬಯಲಾಗಿದೆ ಎಂದು ಕೇಂದ್ರೀಯ ತನಿಖಾ ತಂಡ (ಸಿಬಿಐ) ಹೇಳಿದೆ.

ಮಧ್ಯ ಪ್ರದೇಶ ಪೊಲೀಸ್ ಇಲಾಖೆಯಿಂದ ಸಿಬಿಐಗೆ ನಿಯೋಜನೆ ಮೇಲೆ ಬಂದಿರುವ ಇನ್ಸ್‌ಪೆಕ್ಟರ್‌ಗಳಾದ ರಾಹುಲ್ ರಾಜ್, ಸುಶೀಲ್ ಕುಮಾರ್ ಮಜೋಕಾ ಮತ್ತು ರಿಷಿ ಕಾಂತ್ ಅಸಾಥೆ ಸೇರಿದಂತೆ 22 ಮಂದಿಯ ವಿರುದ್ದ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ. ರಾಹುಲ್‌ ರಾಜ್‌ನನ್ನು ಭಾನುವಾರ ಬಂಧಿಸಿದೆ ಎಂದು ಸಿಬಿಐನ ಉಪ ಪೊಲೀಸ್ ವರಿಷ್ಠಾಧಿಕಾರಿ ಆಶಿಶ್ ಪ್ರಸಾದ್ ತಿಳಿಸಿದ್ದಾರೆ.

ಸಿಬಿಐ ಎಫ್‌ಐಆರ್‌ನಲ್ಲಿ ನರ್ಸಿಂಗ್ ಕೋರ್ಸ್‌ಗಳನ್ನು ನೀಡುತ್ತಿರುವ 8 ಕಾಲೇಜುಗಳ ನಿರ್ದೇಶಕರು, ಅಧ್ಯಕ್ಷರು ಮತ್ತು ತಪಾಸಣಾ ತಂಡಗಳ ಪರವಾಗಿ ಲಂಚ ಸಂಗ್ರಹಿಸಿದ ಸಿಬ್ಬಂದಿ ಮತ್ತು ಮಧ್ಯವರ್ತಿಗಳನ್ನು ಹೆಸರಿಸಿದೆ.

ಸಿಬಿಐ ದಾಖಲಿಸಿದ ಪ್ರಕರಣ, ಸಂಸ್ಥೆ ಭ್ರಷ್ಟಾಚಾರದ ವಿರುದ್ದ ಶೂನ್ಯ-ಸಹಿಷ್ಣು ನೀತಿಯನ್ನು ಹೊಂದಿದೆ. ಸಂಸ್ಥೆಯ ಮೌಲ್ಯಗಳಿಂದ ವಿಮುಖರಾಗುವ ತನ್ನ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲೂ ಹಿಂಜರಿಯುವುದಿಲ್ಲ ಎಂಬುವುದನ್ನು ತೋರಿಸುತ್ತದೆ ಎಂದು ಸಿಬಿಐ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶದ ಮೇರೆಗೆ ರಾಜ್ಯದ ನರ್ಸಿಂಗ್ ಕಾಲೇಜುಗಳಲ್ಲಿ ತಪಾಸಣೆ ನಡೆಸಲು ಸಿಬಿಐ ತಂಡವನ್ನು ರಚಿಸಿತ್ತು. ಇದರಲ್ಲಿ ಸಿಬಿಐ ಅಧಿಕಾರಿಗಳ ಜೊತೆಗೆ ಭಾರತೀಯ ನರ್ಸಿಂಗ್ ಕೌನ್ಸಿಲ್‌ನಿಂದ ನಾಮನಿರ್ದೇಶನಗೊಂಡ ಸಿಬ್ಬಂದಿ ಮತ್ತು ರಾಜ್ಯದ ಅಧಿಕಾರಿಗಳು ಇದ್ದಾರೆ.

ನರ್ಸಿಂಗ್ ಕಾಲೇಜು ಹಗರಣಕ್ಕೆ ಸಂಬಂಧಿಸಿದಂತೆ ಸಂಸ್ಥೆಗಳಿಗೆ ಪೂರಕವಾಗಿ ವರದಿ ನೀಡಲು ತಮ್ಮ ಅಧಿಕಾರಿಗಳೇ ಲಂಚ ಪಡೆದಿದ್ದಾರೆ ಎಂಬ ಮಾಹಿತಿ ಮೇರೆಗೆ ಪರಿಶೀಲನೆ ನಡೆಸಿದ ತಪಾಸಣೆ ತಂಡ ಎಫ್‌ಐಆರ್ ದಾಖಲಿಸಿದೆ.

ಪ್ರತಿ ನರ್ಸಿಂಗ್ ಕಾಲೇಜಿನಿಂದ ಮಧ್ಯವರ್ತಿಗಳ ಮೂಲಕ 2 ರಿಂದ 10 ಲಕ್ಷದವರೆಗೆ ಹಣ ಸಂಗ್ರಹಿಸುತ್ತಿದ್ದ ಸಿಬಿಐ ಅಧಿಕಾರಿಗಳು, ಮಧ್ಯವರ್ತಿಗಳಿಗೆ 25 ರಿಂದ 50 ಸಾವಿರದವರೆಗೆ ನೀಡುತ್ತಿದ್ದರು ಎಂದು ತನಿಖೆಯಲ್ಲಿ ಗೊತ್ತಾಗಿದೆ.

ಇದನ್ನೂ ಓದಿ : ಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ಬಿಜೆಪಿಯ12 ಸಭೆ: ದಾಖಲೆ ಕೇಳಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...