Homeಮುಖಪುಟವಿಧಿ 370 ರದ್ದತಿ ಎತ್ತಿಹಿಡಿದ ಸುಪ್ರೀಂಕೋರ್ಟ್‌ ತೀರ್ಪು ಮರುಪರಿಶೀಲನೆ ಕೋರಿ ಸಲ್ಲಿಸಿದ ಅರ್ಜಿ ವಜಾ

ವಿಧಿ 370 ರದ್ದತಿ ಎತ್ತಿಹಿಡಿದ ಸುಪ್ರೀಂಕೋರ್ಟ್‌ ತೀರ್ಪು ಮರುಪರಿಶೀಲನೆ ಕೋರಿ ಸಲ್ಲಿಸಿದ ಅರ್ಜಿ ವಜಾ

- Advertisement -
- Advertisement -

ಸಂವಿಧಾನದ 370ನೇ ವಿಧಿ ರದ್ದತಿ ಮೂಲಕ ಜಮ್ಮು ಮತ್ತು ಕಾಶ್ಮೀರ ರಾಜ್ಯದ ವಿಶೇಷ ಸ್ಥಾನಮಾನವನ್ನು ಕೊನೆಗೊಳಿಸುವ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿಆರ್ ಗವಾಯಿ, ಸೂರ್ಯಕಾಂತ್ ಮತ್ತು ಎಎಸ್ ಬೋಪಣ್ಣ ಅವರನ್ನೊಳಗೊಂಡ ಪೀಠವು, ಮರುಪರಿಶೀಲಿಸಲು ಯಾವುದೇ ಕಾರಣವಿಲ್ಲ ಎಂದು ಹೇಳಿದೆ. ಮೇ 1ರಂದು ಕೋರ್ಟ್ ಆದೇಶ ನೀಡಿದ್ದು, ಮಂಗಳವಾರದಂದು ತೀರ್ಪನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ.

ಮರುಪರಿಶೀಲನಾ ಅರ್ಜಿಗಳನ್ನು ಪರಿಶೀಲಿಸಿದಾಗ, ಜಮ್ಮು ಮತ್ತು ಕಾಶ್ಮೀರ ರಾಜ್ಯದ ವಿಶೇಷ ಸ್ಥಾನಮಾನವನ್ನು ಕೊನೆಗೊಳಿಸುವ ಸರ್ಕಾರದ ನಿರ್ಧಾರವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ದೋಷ ಕಂಡು ಬಂದಿಲ್ಲ ಎಂದು ಹೇಳಿದೆ.

ಅವಾಮಿ ನ್ಯಾಷನಲ್ ಕಾನ್ಫರೆನ್ಸ್ ಈ ಕುರಿತು ಮರುಪರಿಶೀಲನಾ ಅರ್ಜಿಯನ್ನು ಸಲ್ಲಿಸಿತ್ತು. 2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವ ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಕೇಂದ್ರದ ನಿರ್ಧಾರವನ್ನು ಎತ್ತಿಹಿಡಿಯುವ ಸುಪ್ರೀಂಕೋರ್ಟ್ ತೀರ್ಪನ್ನು ಪ್ರಶ್ನಿಸಿತ್ತು.

ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ಸಂವಿಧಾನ ಪೀಠವು ಈ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ 20 ಕ್ಕೂ ಹೆಚ್ಚು ಅರ್ಜಿಗಳ ಕುರಿತು ವಾದವನ್ನು ಆಲಿಸಿದ ನಂತರ ತೀರ್ಪು ಪ್ರಕಟಿಸಿತ್ತು. 370ನೇ ವಿಧಿ ತಾತ್ಕಾಲಿಕ ನಿಬಂಧನೆ ಎಂದು ಪೀಠ ತೀರ್ಪು ನೀಡಿತ್ತು.

ರಾಜ್ಯದಲ್ಲಿನ ಯುದ್ಧದ ಪರಿಸ್ಥಿತಿಗಳ ಕಾರಣದಿಂದಾಗಿ 370ನೇ ವಿಧಿಯು ಮಧ್ಯಂತರ ಪರಿಹಾರವಾಗಿತ್ತು. ಆರ್ಟಿಕಲ್ 370 ತಾತ್ಕಾಲಿಕ ನಿಬಂಧನೆಯಾಗಿದೆ. 370ನೇ ವಿಧಿಯ ಉದ್ದೇಶವು ಜಮ್ಮು ಮತ್ತು ಕಾಶ್ಮೀರವನ್ನು ನಿಧಾನವಾಗಿ ಭಾರತದ ಇತರ ರಾಜ್ಯಗಳಿಗೆ ಸರಿಸಮನಾಗಿ ತರುವುದಾಗಿತ್ತು ಎಂದು ನ್ಯಾಯಮೂರ್ತಿ ಕೌಲ್ ಅವರು ತೀರ್ಪಿನ ವೇಳೆ ಹೇಳಿದ್ದರು. ಇದಲ್ಲದೆ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸಲು ಮತ್ತು ಸೆಪ್ಟೆಂಬರ್ 30ರೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರಕಾರಕ್ಕೆ ಆದೇಶವನ್ನು ಕೂಡ ನೀಡಿತ್ತು.

ಇದನ್ನು ಓದಿ: ಭಾರತಕ್ಕೆ ಆಗಮಿಸಿದ್ದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ನಾಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...