Homeಮುಖಪುಟಕೇರಳ: ವಿವಿ ಸೆನೆಟ್‌ಗೆ ಗವರ್ನರ್ ನೇಮಿಸಿದ್ದ ನಾಲ್ವರು ಎಬಿವಿಪಿ ಸದಸ್ಯರ ನಾಮನಿರ್ದೇಶನ ರದ್ದುಗೊಳಿಸಿದ ಹೈಕೋರ್ಟ್‌

ಕೇರಳ: ವಿವಿ ಸೆನೆಟ್‌ಗೆ ಗವರ್ನರ್ ನೇಮಿಸಿದ್ದ ನಾಲ್ವರು ಎಬಿವಿಪಿ ಸದಸ್ಯರ ನಾಮನಿರ್ದೇಶನ ರದ್ದುಗೊಳಿಸಿದ ಹೈಕೋರ್ಟ್‌

- Advertisement -
- Advertisement -

ಕೇರಳ ಗವರ್ನರ್ ಆರಿಫ್ ಮೊಹಮ್ಮದ್ ಖಾನ್‌ಗೆ ಭಾರೀ ಹಿನ್ನಡೆಯಾಗಿದ್ದು, ಕೇರಳ ವಿಶ್ವವಿದ್ಯಾಲಯದ ಸೆನೆಟ್‌ಗೆ ಮಾಡಿದ್ದ ನಾಲ್ವರು ಸದಸ್ಯರ ನಾಮನಿರ್ದೇಶನಗಳನ್ನು ಕೇರಳ ಹೈಕೋರ್ಟ್ ರದ್ದುಗೊಳಿಸಿದೆ.

ರಾಜ್ಯಪಾಲರು ಎಬಿವಿಪಿ ಜೊತೆ ನಂಟಿನ ವಿದ್ಯಾರ್ಥಿಯನ್ನು ವಿಶ್ವವಿದ್ಯಾಲಯದ ಸೆನೆಟ್‌ಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ವಿವಾದ ಭಗಿಲೆದ್ದಿತ್ತು. ಕುಲಪತಿಯಾಗಿ, ಸೆನೆಟ್‌ಗೆ ನೇಮಕಾತಿಗಳನ್ನು ಮಾಡುವುದು ಅವರ ವಿವೇಚನೆಯಾಗಿದೆ ಎಂಬ ರಾಜ್ಯಪಾಲರ ವಾದವನ್ನು ನ್ಯಾಯಾಲಯ ತಿರಸ್ಕರಿಸಿದೆ. ಅಧಿಕಾರದ ಯಾವುದೇ ಅನಿಯಂತ್ರಿತ ಬಳಕೆಯು ಭಾರತದ ಸಂವಿಧಾನದ 14ನೇ ಪರಿಚ್ಛೇದದಲ್ಲಿ ಪ್ರತಿಪಾದಿಸಲಾದ ‘ಸಮಾನತೆ’ ನಿಯಮವನ್ನು ಮಾತ್ರವಲ್ಲದೆ 16ನೇ ವಿಧಿಯಲ್ಲಿ ಅಂತರ್ಗತವಾಗಿರುವ ‘ತಾರತಮ್ಯ’ ನಿಯಮವನ್ನೂ ಉಲ್ಲಂಘಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಗವರ್ನರ್ ಸೆನೆಟ್‌ನಿಂದ ತೆಗೆದುಹಾಕಿರುವ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ(ಎಸ್‌ಎಫ್‌ಐ) ಜೊತೆ ನಂಟಿನ ನಾಲ್ವರು ವಿದ್ಯಾರ್ಥಿಗಳು ‘1974ರ ಕೇರಳ ವಿಶ್ವವಿದ್ಯಾಲಯ ಕಾಯ್ದೆಯ ಸೆಕ್ಷನ್ 17ರ’ ಅಡಿಯಲ್ಲಿ ಸಲ್ಲಿಸಿದ ಎರಡು ರಿಟ್ ಅರ್ಜಿಗಳನ್ನು ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ. ಆರಿಫ್ ಮೊಹಮ್ಮದ್ ಖಾನ್ ಅವರು ನಾಮನಿರ್ದೇಶನಕ್ಕೆ ಸಾಮಾನ್ಯ ವಿಧಾನವನ್ನು ಅನುಸರಿಸಿಲ್ಲ ಮತ್ತು ಯಾವುದೇ ಅರ್ಹತೆ ಇಲ್ಲದ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಕೇರಳ ವಿಶ್ವವಿದ್ಯಾನಿಲಯ ಕಾಯಿದೆಯ ಸೆಕ್ಷನ್ 17ರ ಪ್ರಕಾರ ಕುಲಪತಿಗಳು ನಾಲ್ವರು ವಿದ್ಯಾರ್ಥಿಗಳನ್ನು ಸೆನೆಟ್‌ಗೆ ನಾಮನಿರ್ದೇಶನ ಮಾಡುವ ಅಧಿಕಾರವನ್ನು ಹೊಂದಿದ್ದಾರೆ, ಮಾನವಿಕ, ವಿಜ್ಞಾನ, ಕ್ರೀಡೆ ಮತ್ತು ಲಲಿತಕಲೆಗಳಲ್ಲಿ ಅವರ ಅಸಾಧಾರಣ ಶೈಕ್ಷಣಿಕ ಸಾಮರ್ಥ್ಯಗಳಿಂದ ಗುರುತಿಸಿ ಅವರನ್ನು ಸೆನೆಟ್‌ಗೆ ನೇಮಕ ಮಾಡಲಾಗುತ್ತದೆ.

ವಿದ್ಯಾರ್ಥಿಗಳಾದ ಮಾಳವಿಕಾ ಉದಯನ್(ಲಲಿತಕಲೆ), ಸುಧಿ ಸದನ್(ಕ್ರೀಡೆ), ಧ್ರುವಿನ್ ಎಸ್‌ಎಲ್(ವಿಜ್ಞಾನ), ಮತ್ತು ಅಭಿಷೇಕ್ ಡಿ ನಾಯರ್(ಮಾನವೀಯ) ವಿಭಾಗದಿಂದ ರಾಜ್ಯಪಾಲರು ವಿವಿ ಸೆನೆಟ್‌ಗೆ ನಾಮನಿರ್ದೇಶನ ಮಾಡಿದ್ದಾರೆ. ಈ ಎಲ್ಲರೂ ಎಬಿವಿಪಿಯ ಸದಸ್ಯರಾಗಿದ್ದರು.

ನ್ಯಾಯಮೂರ್ತಿ ಸಿ.ಪಿ.ಮುಹಮ್ಮದ್ ನಿಯಾಸ್ ಅವರಿದ್ದ ಏಕಸದಸ್ಯ ಪೀಠ, ನಾಲ್ವರು ನಾಮನಿರ್ದೇಶಿತರ ನಾಮನಿರ್ದೇಶನವನ್ನು ಅನೂರ್ಜಿತಗೊಳಿಸಿದ್ದು, ಆರು ವಾರಗಳಲ್ಲಿ ಹೊಸ ಪಟ್ಟಿಯನ್ನು ಸಲ್ಲಿಸುವಂತೆ ರಾಜ್ಯಪಾಲರಿಗೆ ಸೂಚಿಸಿದೆ.

ಈ ಬಗ್ಗೆ ಎಸ್‌ಎಫ್‌ಐನ ಕೇರಳ ರಾಜ್ಯ ಕಾರ್ಯದರ್ಶಿ ಪಿಎಂ ಅರ್ಶೋ ಮಾತನಾಡಿದ್ದು, ನಾವು ನ್ಯಾಯಾಲಯದ ಆದೇಶವನ್ನು ಸ್ವಾಗತಿಸುತ್ತೇವೆ, ಇದು ಕಾನೂನು ಮಾತ್ರವಲ್ಲದೆ ರಾಜ್ಯಪಾಲರಿಗೆ ರಾಜಕೀಯ ಹಿನ್ನಡೆಯೂ ಆಗಿದೆ. ಅವರು ತಮ್ಮ ಸಾಂವಿಧಾನಿಕ ಸ್ಥಾನವನ್ನು ರಾಜಕೀಯವಾಗಿ ಬಳಸಿಕೊಂಡರು ಮತ್ತು ಕೇರಳದ ಕ್ಯಾಂಪಸ್‌ಗಳಲ್ಲಿ ಆರೆಸ್ಸೆಸ್ ಅಜೆಂಡಾವನ್ನು ಜಾರಿಗೆ ತರಲು ಪ್ರಯತ್ನಿಸಿದ್ದರು, ಆದರೆ ಇದೀಗ ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಕೋಲ್ಕತ್ತಾ: ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಸಂಸದನ ಮೃತದೇಹ ತುಂಡರಿಸಿದ ಸ್ಥಿತಿಯಲ್ಲಿ ಪತ್ತೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...