Homeಫ್ಯಾಕ್ಟ್‌ಚೆಕ್FACT CHECK : 2014ಕ್ಕಿಂತ ಮೊದಲು ಭಾರತದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬುವುದು ಸುಳ್ಳು

FACT CHECK : 2014ಕ್ಕಿಂತ ಮೊದಲು ಭಾರತದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬುವುದು ಸುಳ್ಳು

- Advertisement -
- Advertisement -

“ನವ ಭಾರತ ವೇಗವಾಗಿ ಮುನ್ನೆಡೆಯುತ್ತಿದೆ. 2014ರಲ್ಲಿ ಭಾರತದಲ್ಲಿ ಇದ್ದದ್ದು ಕೇವಲ 300 ಸ್ಟಾರ್ಟ್‌ ಅಪ್‌ಗಳು, ಈಗ 1 ಲಕ್ಷಕ್ಕೂ ಅಧಿಕ ಸ್ಟಾರ್ಟ್‌ ಅಪ್‌ಗಳು ಭಾರತದಲ್ಲಿವೆ. ಅದಕ್ಕೆ ದೇಶದಲ್ಲಿ ಮೋದಿಜಿ ಇದ್ದರೆ ಎಲ್ಲವೂ ಸಾಧ್ಯ” ಎಂದು ಪೋಸ್ಟ್ ಕಾರ್ಟ್ ಕನ್ನಡ ತನ್ನ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟರ್ ಹಂಚಿಕೊಂಡಿದೆ.

ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಅವರು ಕೂಡ, “2014ರಲ್ಲಿ ದೇಶದಲ್ಲಿ ಕೇವಲ 350 ಸ್ಟಾರ್ಟ್‌ ಅಪ್‌ಗಳಿದ್ದವು. ಮೋದಿ ಪ್ರಧಾನಿಯಾದ ನಂತರ 300 ಪಟ್ಟು ಬೆಳವಣಿಗೆಯಾಗಿದೆ” ಎಂದಿದ್ದರು. ಈ ಕುರಿತು ಎಕಾನಾಮಿಕ್ಸ್ ಟೈಮ್ಸ್ 28, ಏಪ್ರಿಲ್ 2024ರಂದು ವರದಿ ಮಾಡಿತ್ತು.

“ಮೋದಿ ಪ್ರಧಾನಿಯಾಗುವ ಮುನ್ನ ದೇಶದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು. ಈಗ ಒಂದು ಲಕ್ಷಕ್ಕೂ ಅಧಿಕ ಆಗಿವೆ” ಎಂದು ಯೂಟ್ಯೂಬರ್ ಗೌರವ್ ಚೌಧರಿ ಹೇಳಿದ್ದರು. ಈ ಕುರಿತು ಮೇ 20, 2024ರಂದು ಎಎನ್‌ಐ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದೆ.

ಫ್ಯಾಕ್ಟ್‌ಚೆಕ್ : 2014ಕ್ಕಿಂತ ಮುನ್ನ ದೇಶದಲ್ಲಿ ಕೇವಲ 300 ಸ್ಟಾರ್ಟ್‌ ಅಪ್‌ಗಳಿದ್ದದ್ದು ನಿಜವೇ? ಎಂದು ನಾವು ಗೂಗಲ್‌ನಲ್ಲಿ ಮಾಹಿತಿ ಹುಡುಕಿದಾಗ ಸ್ಟ್ಯಾಟಿಸ್ಟ ಅಂಕಿ ಅಂಶಗಳ ಎಂಬ ವೆಬ್‌ಸೈಟ್‌ನಲ್ಲಿ ಭಾರತದ ಸ್ಟಾರ್ಟ್ ಅಪ್‌ಗಳ ಕುರಿತು ಮಾಹಿತಿ ಲಭ್ಯವಾಗಿದೆ. ಸ್ಟ್ಯಾಟಿಸ್ಟ ಹೇಳಿದಂತೆ 2012ನೇ ವರ್ಷದಲ್ಲಿ ಭಾರತದಲ್ಲಿ 5,000 ಸ್ಟಾರ್ಟ್‌ ಅಪ್‌ಗಳು ನೋಂದಾಯಿಸಿಕೊಂಡಿದ್ದವು. 2013ರಲ್ಲಿ ಈ ಸಂಖ್ಯೆ ಕುಸಿದು 3,000 ಹೊಸ ಸ್ಟಾರ್ಟ್‌ ಅಪ್‌ಗಳು ನೋಂದಣಿ ಮಾಡಿಕೊಂಡಿತ್ತು. 2014ರಲ್ಲಿ 4,500 ಮತ್ತು 2015ರಲ್ಲಿ ಬರೋಬ್ಬರಿ 8,000 ಹೊಸ ಸ್ಟಾರ್ಟ್‌ ಅಪ್‌ಗಳು ಭಾರತದಲ್ಲಿ ಪ್ರಾರಂಭಗೊಂಡಿವೆ.

ಈ ಅಂಕಿ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಹೇಳುವುದಾದರೆ 2014ರಲ್ಲಿ ಅಥವಾ ಅದಕ್ಕಿಂತ ಮುನ್ನ ದೇಶದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬ ಹೇಳಿಕೆ ಸುಳ್ಳು.

ಸ್ಟ್ಯಾಟಿಸ್ಟದ ಅಂಕಿ ಅಂಶಗಳ ಪ್ರಕಾರ, 2019ರ ಬಳಿಕ ದೇಶದಲ್ಲಿ ಹೊಸ ಸ್ಟಾರ್ಟ್‌ ಅಪ್‌ಗಳ ನೋಂದಣಿ ಸಂಪೂರ್ಣ ಕುಸಿದಿದೆ. 2019ರಲ್ಲಿ 3,500, 2020ರಲ್ಲಿ 1,250, 2021ರಲ್ಲಿ 1,436, 2022ರಲ್ಲಿ 652 ಮತ್ತು 2023ರಲ್ಲಿ ಕೇವಲ 489 ಸ್ಟಾರ್ಟ್‌ ಅಪ್‌ಗಳು ನೋಂದಣಿ ಮಾಡಿಕೊಂಡಿವೆ.

ಸ್ಟ್ಯಾಟಿಸ್ಟದ ಅಂಕಿ ಅಂಶಗಳು ನಂಬಲು ಅರ್ಹವಾಗಿದೆ. ಏಕೆಂದರೆ, ಈ ವೆಬ್‌ಸೈಟ್‌ನ ಅಂಕಿ ಅಂಶಗಳನ್ನು ಪ್ರಮುಖ ಕಂಪನಿಗಳಾದ ಗೂಗಲ್, ಅಡೋಬ್, ಪಿ&ಜಿ ಸ್ಯಾಮ್‌ಸಂಗ್ ಕೂಡ ಪರಿಗಣಿಸುತ್ತವೆ.

ಸದ್ಯ ಭಾರತದಲ್ಲಿ 1,12,718 ಸ್ಟಾರ್ಟ್‌ ಅಪ್‌ಗಳಿವೆ ಎಂದು ಇನ್ವೆಸ್ಟ್ ಇಂಡಿಯಾ ವರದಿ ಮಾಡಿದೆ. ಆದರೆ ಅವುಗಳಲ್ಲಿ ಶೇ.95ಗಿಂತಲೂ ಹೆಚ್ಚಿನ ಸ್ಟಾರ್ಟ್‌ ಅಪ್‌ಗಳು ವಿಫಲವಾಗಿವೆ ಎಂದು ತಜ್ಞರ ಹೇಳಿಕೆಯನ್ನು ಆಧರಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿತ್ತು.
ಒಟ್ಟಾರೆಯಾಗಿ ಹೇಳುವುದಾದರೆ, ನಮಗೆ 2014ರ ಬಳಿಕ, ಅಂದರೆ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸ್ಟಾರ್ಟ್‌ ಅಪ್‌ ಇಂಡಿಯಾ, ಡಿಜಿಟಿಲ್ ಇಂಡಿಯಾದಂತಹ ಯೋಜನೆಗಳನ್ನು ಬಳಸಿಕೊಂಡು ಅನೇಕ ಸ್ಟಾರ್ಟ್‌ ಅಪ್‌ಗಳು ಪ್ರಾರಂಭಗೊಂಡಿರುವುವುದು ನಿಜ. ಆದರೆ, ಇದೇ ರೀತಿ 2014ಕ್ಕಿಂತ ಮುನ್ನ ಕಾಂಗ್ರೆಸ್ ಸರ್ಕಾರದ ಅಧಿಕಾರವದಿಯಲ್ಲೂ ಅನೇಕ ಸ್ಟಾರ್ಟ್‌ ಅಪ್‌ಗಳು ನೋಂದಣಿ ಮಾಡಿಕೊಂಡಿವೆ. 2014ರಲ್ಲಿ ದೇಶದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳು ಮಾತ್ರ ಇತ್ತು ಎಂಬ ಹೇಳಿಕೆ ಸುಳ್ಳು.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿ ಪ್ರದರ್ಶಿಸಿದ್ದು ‘ಚೀನಾ ಸಂವಿಧಾನದ’ ಪ್ರತಿಯಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...