Homeಕರ್ನಾಟಕಪ್ರಜ್ವಲ್ ಪಾಸ್‌ಪೋರ್ಟ್ ರದ್ದತಿ ವಿಚಾರದಲ್ಲಿ ಕೇಂದ್ರದಿಂದ ಯಾವುದೇ ಸ್ಪಂದನೆಯಿಲ್ಲ: ಗೃಹ ಸಚಿವ ಪರಮೇಶ್ವರ್‌

ಪ್ರಜ್ವಲ್ ಪಾಸ್‌ಪೋರ್ಟ್ ರದ್ದತಿ ವಿಚಾರದಲ್ಲಿ ಕೇಂದ್ರದಿಂದ ಯಾವುದೇ ಸ್ಪಂದನೆಯಿಲ್ಲ: ಗೃಹ ಸಚಿವ ಪರಮೇಶ್ವರ್‌

- Advertisement -
- Advertisement -

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರೂ, ಈವರೆಗೂ ಸ್ಪಂದಿಸಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ತಿಳಿಸಿದರು.

ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದು ಮಾಡುವಂತೆ ಮುಖ್ಯಮಂತ್ರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಎಸ್ಐಟಿ ಕೂಡ ಪತ್ರ ಬರೆದಿದೆ. ಈವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ‌” ಎಂದರು.

“ಕೇಂದ್ರ ಸರ್ಕಾರವು ಕಾನೂನಿನ ಚೌಕಟ್ಟಿನಲ್ಲಿ ಸಹಾಯ ಮಾಡಬೇಕು. ಬರೀ ಟೀಕೆ ಮಾಡಿದರೆ ಅರ್ಥವಿಲ್ಲ. ಪ್ರಜ್ವಲ್ ರೇವಣ್ಣ ಅವರ ಮೇಲೆ ವಾರೆಂಟ್ ಜಾರಿ ಮಾಡಿರುವುದನ್ನು ತಿಳಿಸಲಾಗಿದೆ. ವಾರೆಂಟ್ ಜಾರಿಯಾದ ನಂತರ ಪಾಸ್‌ಪೋರ್ಟ್ ರದ್ದುಗೊಳಿಸುವುದು ಕೇಂದ್ರ ಸರ್ಕಾರದ ಕರ್ತವ್ಯ” ಎಂದು ಪರಮೇಶ್ವರ್ ಹೇಳಿದರು.

ಉಪಮುಖ್ಯಮಂತ್ರಿಯವರದ್ದು ಎನ್ನಲಾದ ಆಡಿಯೋ ಕುರಿತು ಹೆಚ್.ಡಿ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, “ಕುಮಾರಸ್ವಾಮಿ ಅವರು ಪ್ರತಿಯೊಂದಕ್ಕೂ ಮಾತನಾಡುತ್ತಿದ್ದಾರೆ. ಕಾನೂನಿನ ಚೌಕಟ್ಟಿನಲ್ಲಿ ಎಸ್ಐಟಿ ಏನೆಲ್ಲ ಕೆಲಸ ಮಾಡಬೇಕೋ ಅದನ್ನು ಮಾಡುತ್ತಿದೆ. ಕುಮಾರಸ್ವಾಮಿ ಅವರು ತನಿಖೆ ಹೀಗೆ ನಡೆಯಬೇಕು, ಹಾಗೇ ಮಾಡಬೇಕು ಅಂತ ಹೇಳಿದ ಹಾಗೇ ಕಾಣುತ್ತಿದೆ” ಎಂದು ಕುಟುಕಿದರು.

ಬಿಜೆಪಿಯವರ ಆರೋಪದ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವರು “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ ಎಂಬುವುದರ ಬಗ್ಗೆ ನಾನು ಮತ್ತು ಮುಖ್ಯಮಂತ್ರಿಯವರು ಅಂಕಿ-ಅಂಶವನ್ನು ಪ್ರಕಟಿಸಿದ್ದೇವೆ. ಯಾರ ಕಾಲದಲ್ಲಿ ಕೊಲೆ ಪ್ರಕರಣಗಳು ಹೆಚ್ಚಾಗಿದ್ದವು ಎಂಬುವುದಕ್ಕೆ ಅಂಕಿ-ಅಂಶಗಳಿವೆ. ಅದಕ್ಕೆ, ಬಿಜೆಪಿಯವರು ಮೊದಲು ಉತ್ತರ ನೀಡಲಿ” ಎಂದು ಸವಾಲು ಹಾಕಿದರು.

“ಖಾಸಗಿ ವಲಯದಲ್ಲಿ ಮೀಸಲಾತಿ‌ ನೀಡಬೇಕೆಂದು ಬಹಳ ಹಿಂದಿನಿಂದಲೂ ಒತ್ತಾಯಿಸಿದವರು ನಾವು. ಲಕ್ಷಾಂತರ ಹುದ್ದೆಗಳನ್ನು ಯಾರಿಗೂ ಗೊತ್ತಿಲ್ಲದೆ ನೇಮಕ ಮಾಡಿಕೊಳ್ಳುತ್ತಿದ್ದರು. ಹೀಗಾಗಿ, ಹೊರಗುತ್ತಿಗೆ ಹುದ್ದೆಗಳಿಗೆ ಮೀಸಲಾತಿ ನೀಡಲಾಗುತ್ತಿದೆ. ನೇಮಕ ಮಾಡಿಕೊಳ್ಳುವಾಗ ಮೆರಿಟ್‌ನಲ್ಲಿ ಹೊಂದಾಣಿಕೆಯಾಗುವುದು ಬೇಡ. ದಲಿತ ಸಮುದಾಯದ ಪದವೀದರರು ಮೆರಿಟ್‌ನಲ್ಲಿ ಬರುತ್ತಿದ್ದಾರೆ” ಎಂದರು.

“ಸ್ಥಳೀಯ ಸಂಸ್ಥೆಯ ಚುನಾವಣೆ ನೆನೆಗುದಿಗೆ ಬಿದ್ದಿವೆ. ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಾದರೆ ಸ್ಥಳೀಯ ಸಂಸ್ಥೆಗಳಲ್ಲಿ ಜನಪ್ರಿತಿನಿಧಿಗಳು ಬೇಕು. ಕೋರ್ಟ್‌ನ ಆದೇಶ ಯಾವಾಗ ಬೇಕಾದರು ಬರಬಹುದು. ಇದನ್ನು ಗಮನದಲ್ಲಿಟ್ಟುಕೊಂಡು ಚುನಾವಣೆಗೆ ತಯಾರಿ ಮಾಡಿಕೊಳ್ಳುವಂತೆ ಕೆಪಿಸಿಸಿ ಅಧ್ಯಕ್ಷರು ತಿಳಿಸಿದ್ದಾರೆ” ತಿಳಿಸಿದರು.

ಇದನ್ನೂ ಓದಿ : ಪಶ್ಚಿಮ ಬಂಗಾಳದಲ್ಲಿ 2010ರ ನಂತರ ನೀಡಲಾದ ಎಲ್ಲಾ ಒಬಿಸಿ ಪ್ರಮಾಣಪತ್ರಗಳು ರದ್ದು: ಹೈಕೋರ್ಟ್ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...