Homeಕರ್ನಾಟಕಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವಂತೆ ಪ್ರಧಾನಿಗೆ ಸಿದ್ದರಾಮಯ್ಯ ಪತ್ರ

ಪ್ರಜ್ವಲ್ ರೇವಣ್ಣ ಪಾಸ್‌ಪೋರ್ಟ್‌ ರದ್ದು ಮಾಡುವಂತೆ ಪ್ರಧಾನಿಗೆ ಸಿದ್ದರಾಮಯ್ಯ ಪತ್ರ

- Advertisement -
- Advertisement -

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದು ಮಾಡುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಸರಕಾರ ತನಿಖೆಗೆ ಎಸ್‌ಐಟಿ ತಂಡವನ್ನು ರಚಿಸಿದೆ. ಲುಕ್‌ ಔಟ್‌ ನೊಟೀಸ್‌, ಬ್ಲೂಕಾರ್ನರ್‌ ನೊಟೀಸ್‌ ಹೊರತಾಗಿಯೂ ಪ್ರಜ್ವಲ್‌ ರೇವಣ್ಣ ಇನ್ನೂ ತಲೆ ಮರೆಸಿಕೊಂಡಿದ್ದಾನೆ. ಪ್ರಜ್ವಲ್‌ ವಿರುದ್ಧ ಅತ್ಯಾಚಾರ, ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ, ಬೆದರಿಕೆ ಸೇರಿ ವಿವಿಧ ಆರೋಪಗಳಿವೆ. ಆದ್ದರಿಂದ 1967ರ ಪಾಸ್‌ಪೋರ್ಟ್‌ ಆಕ್ಟ್‌ ಪ್ರಕಾರ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದು ಮಾಡುವಂತೆ ಆಗ್ರಹಿಸುತ್ತೇನೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಹಾಗೂ ತ್ವರಿತ ಮತ್ತು ಸಂಘಟಿತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕೇಂದ್ರಕ್ಕೆ ಪತ್ರ ಬರೆದಿದ್ದ ಎಸ್‌ಐಟಿ

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ)  ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಮೂಲಕ ಕೇಂದ್ರ ಸರ್ಕಾರಕ್ಕೆ ಈ ಮೊದಲು ಪತ್ರ ಬರೆದಿತ್ತು.

ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿಕೆ

ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್‌ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಸ್‌ಐಟಿ ಪತ್ರ ಬರೆದಿದೆ. ಆದರೆ, ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದ್ದಾರೆ.

ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ಜಿ.ಪರಮೇಶ್ವರ್‌, ಕೇಂದ್ರ ಸರ್ಕಾರವು ಕಾನೂನಿನ ಚೌಕಟ್ಟಿನಲ್ಲಿ ಸಹಾಯ ಮಾಡಬೇಕು. ಬರೀ ಟೀಕೆ ಮಾಡಿದರೆ ಅರ್ಥವಿಲ್ಲ. ಪ್ರಜ್ವಲ್‌ ವಿರುದ್ಧ ವಾರಂಟ್‌ ಜಾರಿ ಮಾಡಿರುವುದನ್ನು ಕೇಂದ್ರದ ಗಮನಕ್ಕೆ ತರಲಾಗಿದೆ. ವಾರಂಟ್‌ ಜಾರಿಯಾದ ಬಳಿಕ ಪಾಸ್‌ಪೋರ್ಟ್‌ ರದ್ದುಗೊಳಿಸುವುದು ಕೇಂದ್ರ ಸರ್ಕಾರದ ಕರ್ತವ್ಯ ಎಂದು ಹೇಳಿದ್ದಾರೆ.

ಇದನ್ನು ಓದಿ: ಕೋಲ್ಕತ್ತಾದಲ್ಲಿ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಂ ಕೊಲೆ ಪ್ರಕರಣ: ಮೂವರ ಬಂಧನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...