Homeಮುಖಪುಟಅಸ್ಸಾಂ: ಕಳ್ಳತನ ಆರೋಪದಲ್ಲಿ ಬಂಧಿತ ಕಸ್ಟಡಿಯಲ್ಲಿ ಸಾವು; ಭುಗಿಲೆದ್ದ ಪ್ರತಿಭಟನೆ

ಅಸ್ಸಾಂ: ಕಳ್ಳತನ ಆರೋಪದಲ್ಲಿ ಬಂಧಿತ ಕಸ್ಟಡಿಯಲ್ಲಿ ಸಾವು; ಭುಗಿಲೆದ್ದ ಪ್ರತಿಭಟನೆ

- Advertisement -
- Advertisement -

ಅಸ್ಸಾಂನ ಲಕಿಂಪುರ್ ಜಿಲ್ಲೆಯಲ್ಲಿ ಮೊಬೈಲ್‌ ಪೋನ್‌ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ 42 ವರ್ಷದ ವ್ಯಕ್ತಿಯೊಬ್ಬರು ಪೊಲೀಸ್‌ ಕಸ್ಟಡಿಯಲ್ಲಿ ಮೃತಪಟ್ಟಿದ್ದು, ಪೊಲೀಸರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸ್ಥಳೀಯರು ಪ್ರತಿಭಟನೆಯನ್ನು ನಡೆಸಿದ್ದಾರೆ.

ಮೊಬೈಲ್ ಕಳ್ಳತನ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಗುಂಪಿನಲ್ಲಿದ್ದ ಅರ್ಸಬ್ ಅಲಿ ಬುಧವಾರ ತಡರಾತ್ರಿ ಹಠಾತ್ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ ಆ ಬಳಿಕ ಭುಗಿಲೆದ್ದ ಪ್ರತಿಭಟನೆಯಿಂದ ಖೇಲ್ಮತಿ ಔಟ್‌ಪೋಸ್ಟ್‌ನ ಉಸ್ತುವಾರಿ ವಹಿಸಿದ್ದ ಪೊಲೀಸ್ ಅಧಿಕಾರಿ ಮತ್ತು ಸಾವಿನ ಸಮಯದಲ್ಲಿ ಔಟ್‌ಪೋಸ್ಟ್‌ನಲ್ಲಿದ್ದ ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಅಸ್ಸಾಂನ ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಲಖಿಂಪುರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಲ್‌ಕೆ ದೇಕಾ ಈ ಕುರಿತು ಮಾಹಿತಿಯನ್ನು ನೀಡಿದ್ದು, ಪೊಲೀಸ್ ಠಾಣೆಯ ಒಳಗೆ ಬೆಂಚ್ ಮೇಲೆ ಕುಳಿತಿದ್ದ ಆರೋಪಿಯು ಹಠಾತ್ತನೆ ಕೆಳಗೆ ಬಿದ್ದಿದ್ದಾರೆ, ತಕ್ಷಣವೇ ಅವರನ್ನು ಸಿವಿಲ್ ಆಸ್ಪತ್ರೆಗೆ ಸಾಗಿಸಲಾಗಿದೆ. ವೈದ್ಯರು ಅವರನ್ನು ಪರಿಶೀಲಿಸಿ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಘಟನೆಯ ಬಗ್ಗೆ ಮ್ಯಾಜಿಸ್ಟ್ರಿಯಲ್ ವಿಚಾರಣೆಗೆ ಆದೇಶಿಸಲಾಗಿದೆ ಮತ್ತು ಸಾವಿನ ನಿಖರವಾದ ಕಾರಣವನ್ನು ಕಂಡುಹಿಡಿಯಲು ವೈದ್ಯರ ಸಮಿತಿಯು ಮರಣೋತ್ತರ ಪರೀಕ್ಷೆಯನ್ನು ವೀಡಿಯೊಗ್ರಾಫ್ ಮಾಡಲಿದೆ ಎಂದು ದೇಕಾ ಹೇಳಿದ್ದಾರೆ.

ಅರ್ಸಬ್ ಅಲಿ ಅವರ ಕುಟುಂಬವು, ಅವರು ನಿರಪರಾಧಿ, ಅವರು ಮಾಡದ ಅಪರಾಧವನ್ನು ಒಪ್ಪಿಕೊಳ್ಳುವಂತೆ  ಚಿತ್ರಹಿಂಸೆ ನೀಡಿದ್ದರಿಂದ ಮೃತಪಟ್ಟಿದ್ದಾರೆ ಎಂದು ಆರೋಪಿಸಿದೆ. ಇಂದು ಬೆಳಿಗ್ಗೆ ಪೊಲೀಸ್ ಔಟ್‌ಪೋಸ್ಟ್‌ಗೆ ಬಂದು ಕಸ್ಟಡಿ ಸಾವನ್ನು ಖಂಡಿಸಿ ಅಲಿ ಕುಟುಂಬಸ್ಥರು ಮತ್ತು ಸ್ಥಳೀಯರು ಪ್ರತಿಭಟನೆಯನ್ನು ನಡೆಸಿದ್ದಾರೆ. ಈ ವೇಳೆ ಪೊಲೀಸ್‌ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಗುಂಪನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಮೂರು ಸುತ್ತು ಗುಂಡುಗಳನ್ನು ಹಾರಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿದ ಅಸ್ಸಾಂ ಪೊಲೀಸ್ ಮಹಾನಿರ್ದೇಶಕ ಜ್ಞಾನೇಂದ್ರ ಪ್ರತಾಪ್ ಸಿಂಗ್  ಅವರ ಕಚೇರಿಯು, ಘಟನೆಗೆ ಸಂಬಂಧಿಸಿ ಹೊರಠಾಣೆ ಉಸ್ತುವಾರಿ ಸೇರಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿರುವುದಾಗಿ ಘೋಷಿಸಿದ್ದಾರೆ. ಹೆಚ್ಚುವರಿ ಎಸ್ಪಿ ಬಿಸ್ವನಾಥ್ ಅವರು ಈ ಕುರಿತು ಸ್ವತಂತ್ರ ತನಿಖೆಗೆ ಆದೇಶಿಸಿದ್ದಾರೆ. ಇದಲ್ಲದೆ ಗುರುವಾರ ಬೆಳಗ್ಗೆ ಔಟ್‌ಪೋಸ್ಟ್ ಮೇಲೆ ನಡೆದ ದಾಳಿಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನು ಓದಿ: ಕಲ್ಲಿದ್ದಲು ಹಗರಣ: ಅದಾನಿ ವಿರುದ್ಧ ED, CBI ಕ್ರಮ ಯಾಕಿಲ್ಲ? ಮೋದಿ ವಿರುದ್ಧ ಪ್ರತಿಪಕ್ಷಗಳು ವಾಗ್ಧಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...