Homeಮುಖಪುಟಪ್ರತಿ ಮತಗಟ್ಟೆಯ ಮತದಾನದ ಅಂಕಿ-ಅಂಶ ಒದಗಿಸಬೇಕೆಂದು ಕಾನೂನಿನಲ್ಲಿ ನಿರ್ದೇಶನವಿಲ್ಲ: ಚು.ಆಯೋಗ

ಪ್ರತಿ ಮತಗಟ್ಟೆಯ ಮತದಾನದ ಅಂಕಿ-ಅಂಶ ಒದಗಿಸಬೇಕೆಂದು ಕಾನೂನಿನಲ್ಲಿ ನಿರ್ದೇಶನವಿಲ್ಲ: ಚು.ಆಯೋಗ

- Advertisement -
- Advertisement -

ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ದಾಖಲಾದ ಮತಗಳ ದಾಖಲೆಯನ್ನು ಒಳಗೊಂಡಿರುವ ನಮೂನೆ 17ಸಿ ಯನ್ನು ಅಭ್ಯರ್ಥಿಗಳು ಅಥವಾ ಅವರ ಏಜೆಂಟರಿಗೆ ಮಾತ್ರ ನೀಡಬಹುದು ಹೊರತು ಅದನ್ನು ಸಾರ್ವಜನಿಕಗೊಳಿಸಲು ಯಾವುದೇ ಕಾನೂನು ನಿರ್ದೇಶನವಿಲ್ಲ ಎಂದು ಭಾರತೀಯ ಚುನಾವಣಾ ಆಯೋಗವು ಸುಪ್ರೀಂಕೋರ್ಟ್‌ಗೆ ಹೇಳಿದೆ.

ಸಂಪೂರ್ಣ ಮತದಾರರ ಸಂಖ್ಯೆಯನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಸರ್ಕಾರೇತರ ಸಂಸ್ಥೆ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ನಡೆಸುತ್ತಿದೆ. ಮೊದಲ ಎರಡು ಹಂತದ ಮತದಾನದ ಡೇಟಾವನ್ನು ಪ್ರಕಟಿಸಲು ವಿಳಂಬವಾದ ನಂತರ ಈ ಅರ್ಜಿ ಸಲ್ಲಿಸಲಾಗಿದೆ.

ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ 2024ರ ಸಾರ್ವತ್ರಿಕ ಚುನಾವಣೆಯ ಪ್ರತಿ ಹಂತದ ಮತದಾನದ ನಂತರ ಎಲ್ಲಾ ಮತಗಟ್ಟೆಗಳ ಫಾರ್ಮ್ 17Cಯ ಸ್ಕ್ಯಾನ್ ಮಾಡಿದ ಸ್ಪಷ್ಟವಾದ ಪ್ರತಿಗಳನ್ನು ಅಪ್‌ಲೋಡ್ ಮಾಡುವ ಮೂಲಕ ಚುನಾವಣಾ ಆಯೋಗ ಮತದಾನದ ಪ್ರಮಾಣೀಕೃತ ದಾಖಲೆಗಳನ್ನು ಬಹಿರಂಗಪಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿತ್ತು. ಆದರೆ ಚುನಾವಣಾ ಆಯೋಗ, ಅಭ್ಯರ್ಥಿ ಅಥವಾ ಏಜೆಂಟ್‌ಗಳನ್ನು ಹೊರತುಪಡಿಸಿ ಯಾವುದೇ ವ್ಯಕ್ತಿಗೆ ನಮೂನೆ 17Cನ್ನು ಒದಗಿಸಲು ಯಾವುದೇ ಕಾನೂನು ನಿರ್ದೇಶನವಿಲ್ಲ ಎಂದು ಹೇಳಿದೆ.

ಉತ್ತರಪ್ರದೇಶದ ರಾಂಪುರ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಕೀಲ ಮೆಹಮೂದ್ ಪ್ರಾಚಾ ಚುನಾವಣಾಧಿಕಾರಿ ತಮ್ಮ ಕ್ಷೇತ್ರದ ಫಾರ್ಮ್ 17ಸಿ ನೀಡಲು ನಿರಾಕರಿಸಿದ ನಂತರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಏಪ್ರಿಲ್ 19ರಂದು ರಾಂಪುರದಲ್ಲಿ ಮತದಾನ ನಡೆದಿತ್ತು.

ಚುನಾವಣಾ ಆಯೋಗವು ತನ್ನ ಪ್ರತಿಕ್ರಿಯೆಯಲ್ಲಿ ನಮೂನೆ 17Cನ್ನು ಬಹಿರಂಗಪಡಿಸುವುದರಿಂದ ಮತದಾರರಲ್ಲಿ ಒಟ್ಟು ಮತಗಳ ಬಗ್ಗೆ ಗೊಂದಲ ಉಂಟಾಗಬಹುದು ಎಂದು ಹೇಳಿದೆ. ಒಟ್ಟು ಅಂಕಿ-ಅಂಶವನ್ನು ಲೆಕ್ಕಹಾಕಲು ಮತಗಳನ್ನು ಎಣಿಸಲಾಗುತ್ತದೆಯಾದರೂ, ಅಂಚೆ ಮತಪತ್ರಗಳ ಮೂಲಕ ಚಲಾಯಿಸಲಾದ ಮತಗಳನ್ನು ಫಾರ್ಮ್ ಒಳಗೊಂಡಿರುವುದಿಲ್ಲ ಎಂದು ಅದು ವಾದಿಸಿದೆ. ಆದರೆ ಅಂತಹ ವ್ಯತ್ಯಾಸವನ್ನು ಮತದಾರರು ಸುಲಭವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ, ಚುನಾವಣಾ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರಲು ಪ್ರೇರೇಪಿತ ಹಿತಾಸಕ್ತಿ ಹೊಂದಿರುವ ವ್ಯಕ್ತಿಗಳು ಇದನ್ನು ಬಳಸುವ ಸಾಧ್ಯತೆ ಇದೆ ಎಂದು ಚುನಾವಣಾ ಆಯೋಗವು ಹೇಳಿದೆ.

ಚುನಾವಣಾ ಆಯೋಗ ಮತ್ತು ಅದರ ಸಿಬ್ಬಂದಿ ಚುನಾವಣೆಗೆ ಸಂಬಂಧಿಸಿದ ಭೌತಿಕ ವಸ್ತುಗಳಾದ ಫಾರ್ಮ್‌ಗಳು ಎನ್ವಲಪ್‌ಗಳು, ಸೀಲ್‌ಗಳು, ಇವಿಎಂಗಳು ಮುಂತಾದ ವಿಚಾರಗಳಿಗೆ ಸಂಬಂಧಿಸಿ ಆದ್ಯತೆಯ ಮೇಲೆ ಕೆಲಸ ಮಾಡುತ್ತಿದ್ದಾರೆ. ಹೀಗಿರುವಾಗ ಯಾವುದೇ ಫಾರ್ಮ್‌ ಸ್ಕ್ಯಾನ್‌ ಮಾಡಿ ಒದಗಿಸುವ ಹೆಚ್ಚುವರಿ ಜವಾಬ್ದಾರಿ ನೀಡಿದಲ್ಲಿ ಮತ ಎಣಿಕೆಗಿಂತ ನಮ್ಮ ಇತರ ಆದ್ಯತೆಯ ವಿಷಯಗಳು ಅಪಾಯದಲ್ಲಿರಬಹುದು. ಆ್ಯಪ್‌ನಲ್ಲಿನ ಮತದಾರರ ಮತದಾನದ ಅಂಕಿ-ಅಂಶಗಳನ್ನು ಪೂರಕ ಮಾಹಿತಿ ಎಂದು ಅರ್ಜಿದಾರರು ಪ್ರಶಂಸಿಸಲು ವಿಫಲರಾಗಿದ್ದಾರೆ ಎಂದು ಚುನಾವಣಾ ಆಯೋಗವು ಹೇಳಿದೆ.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್‌ನ ಮನವಿಯು, ಚುನಾವಣಾ ಆಯೋಗದ ವಿರುದ್ಧ ಎಲ್ಲಾ ಸಂಭವನೀಯ ತಪ್ಪುದಾರಿಗೆಳೆಯುವ ಆರೋಪಗಳ ಮೂಲಕ ಅನುಮಾನಗಳನ್ನು ಹುಟ್ಟುಹಾಕಲು ಮಾಡಿದ ದುರುದ್ದೇಶಪೂರಿತ ಅಭಿಯಾನದ ಭಾಗವಾಗಿದೆ ಎಂದು ಚುನಾವಣಾ ಆಯೋಗವು ಆರೋಪಿಸಿದೆ.

ಇದನ್ನು ಓದಿ: ಕಲ್ಲಿದ್ದಲು ಹಗರಣ: ಅದಾನಿ ವಿರುದ್ಧ ED, CBI ಕ್ರಮ ಯಾಕಿಲ್ಲ? ಮೋದಿ ವಿರುದ್ಧ ಪ್ರತಿಪಕ್ಷಗಳು ವಾಗ್ಧಾಳಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...