Homeಮುಖಪುಟಬುಲ್ಡೋಝರ್ ಬಳಸಿ ಮನೆ ಧ್ವಂಸ ಪ್ರಕರಣ : ಐದು ಕುಟುಂಬಗಳಿಗೆ 30 ಲಕ್ಷ ರೂ. ಪರಿಹಾರ...

ಬುಲ್ಡೋಝರ್ ಬಳಸಿ ಮನೆ ಧ್ವಂಸ ಪ್ರಕರಣ : ಐದು ಕುಟುಂಬಗಳಿಗೆ 30 ಲಕ್ಷ ರೂ. ಪರಿಹಾರ ನೀಡಿದ ಅಸ್ಸಾಂ ಸರ್ಕಾರ

- Advertisement -
- Advertisement -

ನಾಗಾಂವ್‌ ಜಿಲ್ಲೆಯಲ್ಲಿ 2022ರಲ್ಲಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಘಟನೆಯ ಬಳಿಕ ಐದು ಮುಸ್ಲಿಂ ಕುಟುಂಬಗಳ ಮನೆಗಳನ್ನು ಬುಲ್ಡೋಝರ್ ಬಳಸಿ ಸರ್ಕಾರ ಧ್ವಂಸಗೊಳಿಸಿತ್ತು. ಇದೀಗ ಮನೆ ಕಳೆದುಕೊಂಡವರಿಗೆ ಪರಿಹಾರವಾಗಿ 30 ಲಕ್ಷ ರೂಪಾಯಿಗಳನ್ನು ಪಾವತಿಸಲಾಗಿದೆ ಎಂದು ಗುವಾಹಟಿ ಹೈಕೋರ್ಟ್‌ಗೆ ತಿಳಿಸಿದೆ.

ಮೇ 21, 2022ರಂದು, ಮೀನು ವ್ಯಾಪಾರಿ ಶಫೀಕುಲ್ ಇಸ್ಲಾಂ ಎಂಬವರು ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು. ಇದಾಗಿ ಒಂದು ದಿನದ ನಂತರ, ನಾಗಾಂವ್ ಜಿಲ್ಲೆಯ ಬಟದ್ರವಾ ಪೊಲೀಸ್ ಠಾಣೆಗೆ ಗುಂಪೊಂದು ಬೆಂಕಿ ಹಚ್ಚಿತ್ತು. ಶಫೀಕುಲ್ ಇಸ್ಲಾಂ ಅವರನ್ನು ಬಿಡುಗಡೆ ಮಾಡಲು ಪೊಲೀಸರು 10,000 ರೂಪಾಯಿ ಹಣ ಮತ್ತು ಬಾತುಕೋಳಿಯನ್ನು ಲಂಚವಾಗಿ ಕೇಳಿದ್ದರು ಎಂದು ಇಸ್ಲಾಂನ ಕುಟುಂಬ ಆರೋಪಿಸಿತ್ತು.

ಉದ್ರಿಕ್ತರ ಗುಂಪು ಪೊಲೀಸ್ ಠಾಣೆಯನ್ನು ಸುಟ್ಟು ಹಾಕಿದ ಒಂದು ದಿನದ ನಂತರ, ಐದು ಕುಟುಂಬಗಳ ಮನೆಗಳನ್ನು ಬುಲ್ಡೋಝರ್ ಮೂಲಕ ಕೆಡವಿದ್ದರು. ಮನೆ ಕೆಡವಲು ಭಾರತೀಯ ಕಾನೂನಿನಡಿಯಲ್ಲಿ ಯಾವುದೇ ನಿಬಂಧನೆಗಳಿಲ್ಲ. ಆದರೆ, ಇದು ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ವಾಡಿಕೆಯಾಗಿಬಿಟ್ಟಿದೆ.

ಬುಧವಾರ, ಅಸ್ಸಾಂ ಸರ್ಕಾರದ ಪರವಾಗಿ ಗುವಾಹಟಿ ಹೈಕೋರ್ಟ್‌ಗೆ ಹಾಜರಾದ ಹಿರಿಯ ವಕೀಲ ಡಿ ನಾಥ್ ಅವರು, ನಾಗಾಂವ್ ಪೊಲೀಸ್ ವರಿಷ್ಠಾಧಿಕಾರಿ ಸೋಮವಾರ ಐದು ಕುಟುಂಬಗಳಿಗೆ ಪರಿಹಾರದ ಹಣವನ್ನು ಪಾವತಿಸಿದ್ದಾರೆ ಎಂದು ತಿಳಿಸಿದ್ದಾರೆ. ಎರಡು ಕಾಂಕ್ರೀಟ್ ಮನೆಗಳು ಮತ್ತು ನಾಲ್ಕು ತಾತ್ಕಾಲಿಕ ಮನೆಗಳನ್ನು ಕೆಡವಿದ್ದಕ್ಕಾಗಿ ಪರಿಹಾರ ನೀಡಲಾಗಿದೆ ಎಂದಿದ್ದಾರೆ.

ಇಮಾಮುಲ್ ಹಕ್ ಮತ್ತು ಮುಜೀಬುರಹ್ಮಾನ್ ಎಂಬವರ ಕಾಂಕ್ರೀಟ್ ಮನೆಗಳನ್ನು ಕಡೆವಿದ್ದಕ್ಕೆ ತಲಾ 10 ಲಕ್ಷ ರೂಪಾಯಿಗಳನ್ನು ನೀಡಲಾಗಿದೆ. ನೆಲಸಮಗೊಂಡ ಪ್ರತಿ ತಾತ್ಕಾಲಿಕ ಮನೆಗೆ 2.5 ಲಕ್ಷ ರೂ. ನೀಡಲಾಗಿದೆ ಎಂದು ಅಸ್ಸಾಂನ ಬಿಜೆಪಿ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ. ಮುಜೀಬುರಹ್ಮಾನ್ ಅವರು ಕಾಂಕ್ರೀಟ್ ಮತ್ತು ತಾತ್ಕಾಲಿಕ ಮನೆ ಎರಡನ್ನೂ ಕಳೆದುಕೊಂಡಿದ್ದರಿಂದ 12.5 ಲಕ್ಷ ರೂ.ನೀಡಲಾಗಿದೆ ಎಂದು ಹೇಳಿದೆ.

ಮೃತ ಇಸ್ಲಾಂ ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 2.5 ಲಕ್ಷ ರೂಪಾಯಿ ಪರಿಹಾರವನ್ನು ಮಂಜೂರು ಮಾಡಿದೆ. ಆದರೆ, ಕುಟುಂಬವು ಉತ್ತರಾಧಿಕಾರದ ಪ್ರಮಾಣಪತ್ರವನ್ನು ನೀಡಿಲ್ಲ. ಅವರು ದಾಖಲೆಯನ್ನು ನೀಡಿದ ನಂತರ ಅಧಿಕಾರಿಗಳು ಪರಿಹಾರ ಪಾವತಿಸಲಿದ್ದಾರೆ ಎಂದು ವಕೀಲ ನಾಥ್ ತಿಳಿಸಿದ್ದಾರೆ.

ಸರ್ಕಾತದ ಆದೇಶದಂತೆ ನಡೆಸಲಾದ ವಿಚಾರಣೆಯು ಇಸ್ಲಾಂ ಪೋಲಿಸ್ ಕಸ್ಟಡಿಯಲ್ಲಿ ಮೃತಪಟ್ಟಿದ್ದನ್ನು ದೃಢಪಡಿಸಿದೆ. ಇದು ಸರ್ಕಾರದ ಪ್ರಾತಿನಿಧಿಕ ಹೊಣೆಗಾರಿಕೆಯ ಸ್ಪಷ್ಟ ಪ್ರಕರಣವಾಗಿದೆ ಎಂದು ಗುವಾಹಟಿ ಹೈಕೋರ್ಟ್ ಮೇ 3ರಂದು ಹೇಳಿತ್ತು.

ಅಸ್ಸಾಂ ಸರ್ಕಾರ ಶಫೀಕುಲ್ ಇಸ್ಲಾಂ ಅವರ ಕಸ್ಟಡಿ ಸಾವು ನಿರ್ಲಕ್ಷ್ಯ ಅಥವಾ ಜವಬ್ದಾರಿಯ ಲೋಪವಲ್ಲ. ಅವರು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಮೇ 21, 2023ರಂದು ತಿಳಿಸಿತ್ತು.

ಅಸಲಿಗೆ ಶಫೀಕುಲ್ ಇಸ್ಲಾಂ ಅವರನ್ನು ಪೊಲೀಸರು ಬಂಧಿಸಿಯೇ ಇಲ್ಲ. ಕುಡಿದು ಅಮಲಿನಲ್ಲಿದ್ದ ಅವರನ್ನು ಪೊಲೀಸರು ರಕ್ಷಿಸಿ ಕರೆ ತಂದಿದ್ದರು. ಬಟದ್ರವಾ ಪಾಲಿಕೆ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ನಡೆಸಿದ್ದರು. ಬಳಿಕ ಮೇ 21ರಂದು ದೂರವಾಣಿ ಮೂಲಕ ಮಾಹಿತಿ ನೀಡಿದರೂ ಶಫೀಕುಲ್ ಇಸ್ಲಾಂ ಅವರ ಕುಟುಂಬ ಪೊಲೀಸ್ ಠಾಣೆಗೆ ಬರಲೇ ಇಲ್ಲ ಎಂದು ಸರ್ಕಾರ ಹೇಳಿತ್ತು.

ಶಫೀಕುಲ್ ಇಸ್ಲಾಂ ಅವರ ರಕ್ತದೊತ್ತಡ ಹೆಚ್ಚಾಗಿತ್ತು. ಅವರ ಪರಿಸ್ಥಿತಿ ಗಂಭೀರವಾಗಿತ್ತು. ಹಾಗಾಗಿ, ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದರು ಎಂದು ಪೊಲೀಸರು ಹೇಳಿದ್ದರು. ಇಸ್ಲಾಂ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ ಚಿತ್ರ ಹಿಂಸೆ ನೀಡಲಾಗಿದೆ ಎಂಬುವುದನ್ನು ನಿರಾಕರಿಸಿದ್ದರು.

ಇದನ್ನೂ ಓದಿ : ತನ್ನದೇ ಕೈಪಿಡಿ ಮರೆತ ಚುನಾವಣಾ ಆಯೋಗ, ನ್ಯಾಯಾಲಯಕ್ಕೆ ಸುಳ್ಳು ಹೇಳಿತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...