Homeಮುಖಪುಟಮಧ್ಯಪ್ರದೇಶ: ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ ವೈದ್ಯರು; ಆಟೋ ರಿಕ್ಷಾದಲ್ಲೆ ಹೆರಿಗೆ

ಮಧ್ಯಪ್ರದೇಶ: ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸಿದ ವೈದ್ಯರು; ಆಟೋ ರಿಕ್ಷಾದಲ್ಲೆ ಹೆರಿಗೆ

- Advertisement -
- Advertisement -

ಮಧ್ಯಪ್ರದೇಶದ ನೀಮುಚ್ ಜಿಲ್ಲಾ ಆಸ್ಪತ್ರೆಯಲ್ಲಿ ಅರಿವಳಿಕೆ ವೈದ್ಯರ ಕೊರತೆಯಿಂದಾಗಿ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ವೈದ್ಯರು ನಿರಾಕರಿಸಿದ್ದು, 30 ವರ್ಷದ ಮಹಿಳೆಯೊಬ್ಬರು ಆಟೋ ರಿಕ್ಷಾದಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗುವನ್ನು ತರುವಾಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಜಿಲ್ಲಾಧಿಕಾರಿಗಳು ಘಟನೆಯ ಕುರಿತು ತನಿಖೆಗೆ ಆದೇಶಿಸಿದ್ದಾರೆ ಎನ್ನಲಾಗಿದೆ.

ರಾಜಸ್ಥಾನದ ಚಿತ್ತೋರ್‌ಗಢ ಜಿಲ್ಲೆಯ ಗಂಗ್ರಾರ್ ಪ್ರದೇಶದಿಂದ ಬಂದು ಕಂಬಳಿ ಮಾರಾಟ ಮಾಡುವ ಮೂಲಕ ಜೀವನ ಸಾಗಿಸುತ್ತಿರುವ ದಿನೇಶ್ ಸಿಲಾವತ್ ಅವರು ಕೆಲವು ದಿನಗಳಿಂದ ನೀಮುಚ್‌ನ ಮಲ್ಖೇಡಾ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳಿದರು.

ಬುಧವಾರ ಮಧ್ಯಾಹ್ನ 2.30ರ ಸುಮಾರಿಗೆ ಪತ್ನಿ ರಜನಿ ಅವರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಅವರನ್ನು ರಿಕ್ಷಾದಲ್ಲಿ ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು. ಆದರೆ, ಆಸ್ಪತ್ರೆಯ ಸಿಬ್ಬಂದಿ ತನ್ನ ಪತ್ನಿಯನ್ನು ರಾಜಸ್ಥಾನದ ಉದಯಪುರಕ್ಕೆ ಕರೆದುಕೊಂಡು ಹೋಗುವಂತೆ ಹೇಳಿದರು ಎಂದು ಅವರು ವಿವರಿಸಿದರು.

“ನನ್ನ ನಿರಂತರ ವಿನಂತಿಗಳ ಹೊರತಾಗಿಯೂ, ಅವರು ಅಡ್ಮಿಟ್ ಮಾಡಿಕೊಳ್ಳಲು ಮನಸ್ಸು ಮಾಡಲಿಲ್ಲ. ಮಹಿಳಾ ಸಿಬ್ಬಂದಿ ನಮ್ಮನ್ನು ಆಸ್ಪತ್ರೆಯಿಂದ ತೊರೆಯುವಂತೆ ಹೇಳಿದರು. ನಾವು ಸಂಜೆ 4 ಗಂಟೆಯ ಸುಮಾರಿಗೆ ಆಸ್ಪತ್ರೆಯಿಂದ ಹೊರಬಂದಾಗ, ನನ್ನ ಹೆಂಡತಿ ಆಟೋ ರಿಕ್ಷಾದಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ” ಎಂದು ಸಿಲಾವತ್ ಹೇಳಿದರು.

“ಕೆಲವು ಒಳ್ಳೆಯ ಹೃದಯದ ಜನರು ನನ್ನ ಹೆಂಡತಿಗೆ ಹೆರಿಗೆ ಆಗುವಾಗ, ಆಕೆಗೆ ಸುತ್ತ ಪರದೆಗಳನ್ನು ಹಿಡಿದು ರಕ್ಷಣೆ ನೀಡಿದರು. ಆಸ್ಪತ್ರೆಯ ಸಿಬ್ಬಂದಿಗೆ ಹೆರಿಗೆಯ ಬಗ್ಗೆ ತಿಳಿದಾಗ, ಅವರು ಮಹಿಳೆ ಮತ್ತು ಆಕೆಯ ನವಜಾತ ಶಿಶುವನ್ನು ಆಸ್ಪತ್ರೆಗೆ ಸೇರಿಸಿದರು” ಎಂದು ಸಿಲಾವತ್ ಹೇಳಿದರು.

ಹೆರಿಗೆ ವಿಭಾಗದ ಮುಖ್ಯಸ್ಥ ಡಾ.ಲಾಡ್ ಧಾಕಡ್ ಮಾತನಾಡಿ, ಅರಿವಳಿಕೆ ತಜ್ಞರು ರಜೆಯಲ್ಲಿರುವುದರಿಂದ ಅಲ್ಲಿ ಸಿಸೇರಿಯನ್ ಹೆರಿಗೆ ಸಾಧ್ಯವಾಗಲಿಲ್ಲ. ಆಸ್ಪತ್ರೆಯಲ್ಲಿ ಸಾಮಾನ್ಯ ಕರ್ತವ್ಯಕ್ಕೂ ಸಾಕಷ್ಟು ವೈದ್ಯರಿಲ್ಲ ಎಂದು ಅವರು ಹೇಳಿದರು.

“ನನ್ನ ಡ್ಯೂಟಿ 2 ಗಂಟೆವರೆಗೆ ಇತ್ತು. ನಂತರ ಮಹಿಳೆಯನ್ನು ಆಸ್ಪತ್ರೆಗೆ ಕರೆತರಲಾಯಿತು. ಸಿಬ್ಬಂದಿ ನನಗೆ ತಿಳಿಸಿದಾಗ ನಾನು ಹೋಗಿ ನೋಡಿದೆ; ಆಕೆಯ ರಕ್ತದೊತ್ತಡ ಹೆಚ್ಚಾಗುತ್ತದೆ. ಕುಟುಂಬ ಸದಸ್ಯರಿಗೆ ಅವಳಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ ಎಂದು ಹೇಳಿ, ದೊಡ್ಡ ಆಸ್ಪತ್ರೆಗೆ ಕರೆದೊಯ್ಯುವಂತೆ ತಿಳಿಸಲಾಯಿತು. ಆದರೆ, ಅಪಾಯವನ್ನು ತಪ್ಪಿಸಲು ನಾವು ಅಂತಹ ಗಂಭೀರ ರೋಗಿಗಳನ್ನು ಸೇರಿಸುವುದಿಲ್ಲ” ಎಂದು ಅವರು ಹೇಳಿದರು.

ಘಟನೆ ಬಗ್ಗೆ ತನಿಖೆಗೆ ಆದೇಶಿಸಿದ್ದು, ಯಾರಾದರೂ ತಪ್ಪಿತಸ್ಥರಾಗಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ನೀಮಚ್ ಜಿಲ್ಲಾಧಿಕಾರಿ ದಿನೇಶ್ ಜೈನ್ ಹೇಳಿದ್ದಾರೆ.

ಇದನ್ನೂ ಓದಿ; ಬುಲ್ಡೋಝರ್ ಬಳಸಿ ಮನೆ ಧ್ವಂಸ ಪ್ರಕರಣ : ಐದು ಕುಟುಂಬಗಳಿಗೆ 30 ಲಕ್ಷ ರೂ. ಪರಿಹಾರ ನೀಡಿದ ಅಸ್ಸಾಂ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...