Homeಮುಖಪುಟಉತ್ತರ ಪ್ರದೇಶ : ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಗೆ ಗೃಹ ಬಂಧನ ಆರೋಪ

ಉತ್ತರ ಪ್ರದೇಶ : ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಗೆ ಗೃಹ ಬಂಧನ ಆರೋಪ

- Advertisement -
- Advertisement -

ಉತ್ತರ ಪ್ರದೇಶದ ಆಡಳಿತಾರೂಢ ಬಿಜೆಪಿಯ ಒತ್ತಾಯದ ಮೇರೆಗೆ ಸಮಾಜವಾದಿ ಪಕ್ಷ (ಎಸ್‌ಪಿ)ದ ಅಂಬೇಡ್ಕರ್ ನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಲಾಲ್ಜಿ ವರ್ಮಾ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಶನಿವಾರ ಆರೋಪಿಸಿದೆ. ಶನಿವಾರ ಆರನೇ ಹಂತದಲ್ಲಿ ಅಂಬೇಡ್ಕರ್ ನಗರದಲ್ಲಿ ಮತದಾನ ನಡೆದಿದೆ.

ಅಂಬೇಡ್ಕರ್ ನಗರ ಆಡಳಿತವು ಎಸ್‌ಪಿ ಅಭ್ಯರ್ಥಿಯನ್ನು ಗೃಹಬಂಧನದಲ್ಲಿಟ್ಟುಕೊಂಡು ಚುನಾವಣೆಯ ಮೇಲೆ ಪ್ರಭಾವ ಬೀರುತ್ತಿದೆ ಎಂದು ಆರೋಪಿಸಿ ಎಸ್‌ಪಿ ನಾಯಕ ಅರವಿಂದ್ ಕುಮಾರ್ ಸಿಂಗ್ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದಿದ್ದಾರೆ. ನ್ಯಾಯಯುತ ಮತದಾನವಾಗುವಂತೆ ಚುನಾವಣಾ ಆಯೋಗವು ಗಮನಹರಿಸಬೇಕು ಎಂದಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, “ವರ್ಮಾ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಆದರೆ, ಅಲ್ಲಿ ಏನನ್ನೂ ಪತ್ತೆ ಮಾಡುವುದು ಪೊಲೀಸರಿಗೆ ಬೇಕಿರಲಿಲ್ಲ ಅಥವಾ ಅಲ್ಲಿ ಪೊಲೀಸರಿಗೆ ಏನೂ ದೊರೆಯಲೂ ಇಲ್ಲ. ಇದು ಲಾಲ್ಜಿ ವರ್ಮಾರ ಪ್ರಾಮಾಣಿಕ ವರ್ಚಸ್ಸಿಗೆ ಕುಂದು ತರುವ ಕೇಡಿತನದ ಕೃತ್ಯವಾಗಿದೆ. ತೀವ್ರ ಖಂಡನೀಯ ಕೃತ್ಯವಿದು! ಸೋಲುತ್ತಿರುವ ಬಿಜೆಪಿಯ ಹತಾಶೆಯಿದು” ಎಂದಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಬಿಜೆಪಿ ಸರ್ಕಾರ ಸೋಲಿನ ಭೀತಿಯಿಂದ ಬಹಿರಂಗವಾಗಿ ಸರ್ವಾಧಿಕಾರ ನಡೆಸುತ್ತಿದ್ದಾರೆ” ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಘಟಕ ಹೇಳಿದೆ.

“ಅಂಬೇಡ್ಕರ್ ನಗರದಿಂದ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಲಾಲ್ಜಿ ವರ್ಮಾ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂಬ ಮಾಹಿತಿ ದೊರೆತಿದೆ. ಸರ್ಕಾರಿ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ, ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಗಳನ್ನು ಮನೆಯಿಂದ ಹೊರಗೆ ಬರಲು ಬಿಡುತ್ತಿಲ್ಲ. ಮತದಾರರಿಗೆ ಬೆದರಿಕೆ ಹಾಕಲಾಗುತ್ತಿದೆ. ಸರ್, ತಾವು ಎಚ್ಚೆತ್ತುಕೊಂಡಿದ್ದರೆ ಕ್ರಮ ಕೈಗೊಳ್ಳಿ'” ಕಾಂಗ್ರೆಸ್‌ ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದು, ಚುನಾವಣಾ ಆಯೋಗ ಗಮನ ಸೆಳೆಯುವ ಪ್ರಯತ್ನ ಮಾಡಿದೆ.

ಇದನ್ನೂ ಓದಿ : ದ್ವೇಷ ಭಾಷಣ: ಪ್ರಧಾನಿ ಮೋದಿ ವಿರುದ್ದ ಬೆಂಗಳೂರಿನ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...