Homeಮುಖಪುಟಪೋರ್ಶೆ ಕಾರು ಅಪಘಾತ ಪ್ರಕರಣ: ಆರೋಪಿಯ ರಕ್ತ ಪರೀಕ್ಷೆ ವರದಿ ತಿರುಚಿದ್ದ ಇಬ್ಬರು ವೈದ್ಯರ ಬಂಧನ

ಪೋರ್ಶೆ ಕಾರು ಅಪಘಾತ ಪ್ರಕರಣ: ಆರೋಪಿಯ ರಕ್ತ ಪರೀಕ್ಷೆ ವರದಿ ತಿರುಚಿದ್ದ ಇಬ್ಬರು ವೈದ್ಯರ ಬಂಧನ

- Advertisement -
- Advertisement -

ಮೇ 19, 2024ರಂದು ಮಹಾರಾಷ್ಟ್ರದ ಪುಣೆಯ ಕಲ್ಯಾಣ ನಗರ ಜಂಕ್ಷನ್ ಬಳಿ ನಡೆದ ಐಷಾರಾಮಿ ಪೋರ್ಶೆ ಕಾರು ಅಪಘಾತ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಸಿನಿಮೀಯ ಶೈಲಿಯಲ್ಲಿ ಪ್ರಕರಣ ತಿರುಚಲು ಯತ್ನ, ಕಾನೂನಿನ ಮೇಲೆ ಪ್ರಭಾವ ಬೀರುವ ಯತ್ನ ಸೇರಿದಂತೆ ಹಲವು ಮಹತ್ವದ ಬೆಳವಣಿಗೆಗಳು ಈ ಪ್ರಕರಣದಲ್ಲಿ ನಡೆದಿದೆ.

ಇತ್ತೀಚಿನ ಮಾಹಿತಿ ಪ್ರಕಾರ, ಆರೋಪಿ ಬಾಲಕನ ರಕ್ತದ ಮಾದರಿಯನ್ನು ತಿರುಚಿ ಸಾಕ್ಷ್ಯ ನಾಶಪಡಿಸಿದ ಆರೋಪದ ಮೇಲೆ ಪುಣೆಯ ಸಸೂನ್ ಜನರಲ್ ಆಸ್ಪತ್ರೆಯ ಇಬ್ಬರು ವೈದ್ಯರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥರೂ ಸೇರಿದ್ದಾರೆ.

ಡಾ. ಅಜಯ್ ತಾವಡೆ ಮತ್ತು ಡಾ. ಹರಿ ಹಾರ್ನರ್ ಬಂಧಿತರು. ಇವರಿಂದ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡ ಪೊಲೀಸರು ಪರಿಶೀಲನೆ ನಡೆಸಿದಾಗ, ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥ ಅಜಯ್ ತಾವಡೆ ಅಪಘಾತ ನಡೆದ ದಿನ ರಾತ್ರಿ ಬಾಲಕನ ತಂದೆಗೆ ಕರೆ ಮಾಡಿರುವುದು ತಿಳಿದು ಬಂದಿದೆ.

ಇಬ್ಬರು ವೈದ್ಯರು ಬಾಲಕನ ರಕ್ತದ ಮಾದರಿ ಪರಿಶೀಲಿಸಿ, ಆತ ಮದ್ಯಪಾನ ಮಾಡಿರಲಿಲ್ಲ ಎಂದು ವರದಿ ನೀಡಿದ್ದರು. ಆದರೆ, ಪೊಲೀಸರು ರೆಸ್ಟೋರೆಂಟ್ ಸಿಸಿಟಿವಿ ಪರಿಶೀಲಿಸಿದಾಗ, ಅದರಲ್ಲಿ ಬಾಲಕ ಮದ್ಯಪಾನ ಮಾಡಿರುವುದು ರೆಕಾರ್ಡ್ ಆಗಿತ್ತು. ಈ ಮೂಲಕ ವೈದ್ಯರ ಕಳ್ಳಾಟ ಬಯಲಾಗಿದೆ.

ಪ್ರಕರಣದ ವಿವರಣೆ : ಮೇ 19ರಂದು ಬೆಳಗಿನ ಜಾವ 3:15ರ ಸುಮಾರಿಗೆ ಪುಣೆ ನಗರದಲ್ಲಿ ಪಾರ್ಟಿ ಮುಗಿಸಿದ ಸ್ನೇಹಿತರ ಗುಂಪೊಂದು ಬೈಕ್ ಏರಿ ತಮ್ಮ ಮನೆಗೆ ತೆರಳುತ್ತಿತ್ತು. ಈ ವೇಳೆ ಕಲ್ಯಾಣ ನಗರ ಜಂಕ್ಷನ್ ಬಳಿ ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಐಷರಾಮಿ ಪೋರ್ಶೆ ಕಾರು ವೇಗವಾಗಿ ಬಂದು ಬೈಕೊಂದಕ್ಕೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಬೈಕ್‌ನಲ್ಲಿದ್ದ ಮಧ್ಯ ಪ್ರದೇಶ ಮೂಲಕ ಇಬ್ಬರು ಐಟಿ ಉದ್ಯೋಗಿಗಳಾದ ಅನಿಸ್ ಅವಧಿಯಾ ಮತ್ತು ಅಶ್ವಿನಿ ಕೋಸ್ಟಾ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು, ಬಾಲಕನನ್ನು ಕಾರಿನಿಂದ ಕೆಳಗಿಳಿಸಿ ಥಳಿಸಿದ್ದರು. ಬಳಿಕ ಪೊಲೀಸರಿಗೆ ಒಪ್ಪಿಸಿದ್ದರು. ಪೊಲೀಸರು ಬಾಲಕನನ್ನು ಬಾಲ ನ್ಯಾಯಮಂಡಳಿ ಮುಂದೆ ಹಾಜರುಪಡಿಸಿದ್ದರು. ಮಂಡಳಿ, ಬಾಲಕನಿಗೆ ಷರತ್ತುಬದ್ದ ಜಾಮೀನು ನೀಡಿತ್ತು. ಆದರೆ, ಜಾಮೀನಿಗೆ ವಿಧಿಸಿದ್ದ ಷರತ್ತು ಜನರನ್ನು ಅಶ್ಚರ್ಯಗೊಳಿಸಿತ್ತು. ಕಾರು ಅಪಘಾತದ ಬಗ್ಗೆ ಸುದೀರ್ಘ ಪ್ರಬಂಧ ಬರೆಯಬೇಕು, ಸಂಚಾರಿ ಪೊಲೀಸರ ಜೊತೆ 15 ದಿನಗಳ ಕಾಲ ಕೆಲಸ ಮಾಡಬೇಕು ಇತ್ಯಾದಿ ಷರತ್ತುಗಳನ್ನು ವಿಧಿಸಲಾಗಿತ್ತು.

ಆರೋಪಿ ಬಾಲಕ ಪುಣೆಯ ಬ್ರಹ್ಮ ರಿಲಿಯಾಲ್ಟಿ ಬಿಲ್ಡರ್ ಮಾಲೀಕ ವಿಶಾಲ್ ಅಗರ್ವಾಲ್ ಅವರ ಪುತ್ರನಾಗಿದ್ದಾನೆ. ಬಾಲಕನಿಗೆ ಶ್ರೀಮಂತ ಹಿನ್ನೆಲೆ ಇರುವುದರಿಂದ ಕ್ಷುಲ್ಲಕ ಷರತ್ತು ವಿಧಿಸಿ ಜಾಮೀನು ನೀಡಲಾಗಿದೆ. ಎರಡು ಜೀವಗಳಿಗೆ ಬೆಲೆ ಇಲ್ಲವೇ? ಎಂದು ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಕೂಡ ಈ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದರು. “ಮೋದಿಯ ಎರಡು ಭಾರತದಲ್ಲಿ ನ್ಯಾಯವು ಸಂಪತ್ತನ್ನು ಅವಲಂಭಿಸಿದೆ” ಎಂದಿದ್ದರು. ಪುಣೆ ಕಾಂಗ್ರೆಸ್ ಅಪಘಾತ ಸ್ಥಳದಲ್ಲಿ ಪ್ರಬಂಧ ಸ್ಪರ್ದೆ ಏರ್ಪಡಿಸಿ ವಿಭಿನ್ನವಾಗಿ ಪ್ರತಿಭಟಿಸಿತ್ತು.

“ಯರವಾಡ ಠಾಣೆಯ ಅಧಿಕಾರಿ ಬಾಲಕನಿಗೆ ಪಿಝ್ಝಾ ಬರ್ಗರ್ ತರಿಸಿಕೊಟ್ಟು, ಮೃತರ ಕುಟುಂಬಸ್ಥರಿಗೆ ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ” ಎಂದು ಪ್ರಕಾಶ್ ಅಂಬೇಡ್ಕರ್ ಆರೋಪಿಸಿದ್ದರು.

ಜನಾಕ್ರೋಶ ಹೆಚ್ಚಾಗುತ್ತಿದ್ದಂತೆ ಬಾಲ ನ್ಯಾಯಮಂಡಳಿ ಬಾಲಕನಿಗೆ ನೀಡಿದ್ದ ಜಾಮೀನು ರದ್ದುಪಡಿಸಿತ್ತು. ಈ ನಡುವೆ ಆತನ ತಂದೆಯನ್ನು ಪೊಲೀಸರು ಬಂಧಿಸಿದ್ದರು.

ಬಳಿಕ ಆರೋಪಿ ಬಾಲಕ ಮದ್ಯಪಾನ ಮಾಡಿ ವೇಗವಾಗಿ ಕಾರು ಚಲಾಯಿಸಿದ್ದ ಎಂಬ ವಿಷಯ ಬಯಲಾಗಿತ್ತು. ಅಪಘಾತ ನಡೆದ ದಿನ ರಾತ್ರಿ 9:30ರಿಂದ ಮಧ್ಯರಾತ್ರಿ 1 ತನಕ ಬಾಲಕ ತನ್ನ ಗೆಳೆಯರೊಂದಿಗೆ ರೆಸ್ಟೋರೆಂಟ್‌ಗೆ ತೆರಳಿ ಮದ್ಯಪಾನ ಮಾಡಿದ್ದ ಎಂದು ವರದಿಯಾಗಿತ್ತು. ಇದಕ್ಕೆ ಸಾಕ್ಷಿಯಾಗಿ ರೆಸ್ಟೋರೆಂಟ್ ಸಿಸಿಟಿವಿ ದೃಶ್ಯ ಹೊರಬಿದ್ದಿತ್ತು.

ಈ ಬೆನ್ನಲ್ಲೇ ಪುಣೆ ಜಿಲ್ಲಾಧಿಕಾರಿಯ ಆದೇಶದ ಮೇರೆಗೆ ಅಪ್ರಾಪ್ತಗೆ ಮದ್ಯ ಪೂರೈಸಿದ ಪುಣೆಯ ಕೋಸಿ ರೆಸ್ಟೋರೆಂಟ್ ಮತ್ತು ಹೋಟೆಲ್ ಬ್ಲಾಕ್ ಕ್ಲಬ್‌ಗೆ ಅಬಕಾರಿ ಇಲಾಖೆಯ ಅಧಿಕಾರಿಗಳು ಬೀಗ ಜಡಿದಿದ್ದರು.

ಬಾಲಕ ಕಾರು ಚಲಾಯಿಸುತ್ತಿರಲಿಲ್ಲ ಎಂದು ಬಿಂಬಿಸಲು ಯತ್ನ

ಬಾಲಕ ಉದ್ಯಮಿಯ ಮಗನಾಗಿರುವುದರಿಂದ ಆರೋಪವನ್ನು ಬೇರೊಬ್ಬನ ತಲೆಗೆ ಕಟ್ಟುವ ಪ್ರಯತ್ನ ನಡೆದಿತ್ತು. ಆದರೆ, ಅದು ವಿಫಲವಾಗಿದೆ. ಅಪಘಾತದ ವೇಳೆ ಬಾಲಕ ಕಾರು ಓಡಿಸುತ್ತಿರಲಿಲ್ಲ. ಆತನ ಕುಟುಂಬದ ಕಾರು ಚಾಲಕ ಚಾಲನೆ ಮಾಡುತ್ತಿದ್ದ ಎಂದು ಆರಂಭದಲ್ಲಿ ಹೇಳಲಾಗಿತ್ತು. ಬಳಿಕ ಬಾಲಕನ ತಂದೆಯೇ ಕಾರು ಓಡಿಸುತ್ತಿದ್ದರು ಎನ್ನಲಾಗಿತ್ತು. ಆದರೆ, ಪೊಲೀಸರು ಮತ್ತು ಪ್ರತ್ಯಕ್ಷದರ್ಶಿಗಳು ಇದನ್ನು ಅಲ್ಲಗಳೆದಿದ್ದರು. ಅಪಘಾತದ ವೇಳೆ ಬಾಲಕನೇ ಕಾರು ಓಡಿಸುತ್ತಿದ್ದ ಎಂದಿದ್ದರು.

ಬಾಲಕ ಕಾರು ಓಡಿಸುತ್ತಿರಲಿಲ್ಲ ಎಂದು ಬಿಂಬಿಸಲು ಯತ್ನಿಸಿರುವುದರಲ್ಲಿ ಪೊಲೀಸರ ಕೈವಾಡವೂ ಬಯಲಾಗಿತ್ತು. ಈ ಹಿನ್ನೆಲೆ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಪುಣೆ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ತಿಳಿಸಿದ್ದಾರೆ.

ಯರವಾಡ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದ ಪ್ರಕರಣವನ್ನು, ಪ್ರಸ್ತುತ ಪುಣೆ ಪೊಲೀಸರ ಅಪರಾಧ ವಿಭಾಗಕ್ಕೆ ವರ್ಗಾಯಿಸಲಾಗಿದೆ.

ಬಾಲಕನ ಅಜ್ಜನ ಬಂಧನ

ಪ್ರಕರಣದ ಮಹತ್ವದ ಬೆಳವಣಿಗೆಯಲ್ಲಿ ಪೊಲೀಸರು ಬಾಲಕನ ಅಜ್ಜ ಸುರೇಂದ್ರ ಕುಮಾರ್ ಅಗರ್ವಾಲ್ ಎಂಬವರನ್ನು ಬಂಧಿಸಿದ್ದಾರೆ. ಈತ ಕುಟುಂಬದ ಚಾಲಕನನ್ನು ಅಕ್ರಮವಾಗಿ ಬಂಧನದಲ್ಲಿ ಇರಿಸಿಕೊಂಡು, ಅಪಘಾತದ ಹೊಣೆ ಹೊತ್ತುಕೊಳ್ಳುವಂತೆ ಆತನಿಗೆ ಬೆದರಿಕೆ ಹಾಕಿದ ಆರೋಪವಿದೆ. ಸುರೇಂದ್ರ ಕುಮಾರ್ ವಿರುದ್ಧ ಪೊಲೀಸರು ಅಪಹರಣ ಮತ್ತು ಅಕ್ರಮ ಬಂಧನದ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಐಷಾರಾಮಿ ಪೋರ್ಶೆ ಕಾರನ್ನು ಅಜ್ಜ ಸುರೇಂದ್ರ ಕುಮಾರ್ ಮೊಮ್ಮಗನಿಗೆ ಹುಟ್ಟುಹಬ್ಬದ ಉಡುಗೊರೆಯಾಗಿ ಕೊಟ್ಟಿದ್ದರು ಎಂದು ಹೇಳಲಾಗ್ತಿದೆ.

ಆರೋಪಿ ಬಾಲಕನನ್ನು ಜೂನ್ 5ರವರೆಗೆ ಬಾಲಕ ವೀಕ್ಷಣಾ ಕೇಂದ್ರಕ್ಕೆ ಕಳುಹಿಸಲಾಗಿದೆ. ಆತನ ತಂದೆ ಮತ್ತು ಅಜ್ಜ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇದನ್ನೂ ಓದಿ : ರಫಾ ನಿರಾಶ್ರಿತರ ಶಿಬಿರದ ಮೇಲೆ ದಾಳಿ ನಡೆಸಿದ ಇಸ್ರೇಲ್: 40 ಪ್ಯಾಲೆಸ್ತೀನಿಯರು ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...