Homeಮುಖಪುಟ'ದುಷ್ಕರ್ಮಿಗಳು ಬಲಿಪಶುಗಳಂತೆ ನಟಿಸುತ್ತಿದ್ದಾರೆ..'; ಸ್ವಾತಿ ಮಲಿವಾಲ್ ಆರೋಪಕ್ಕೆ ಧೃವ್ ರಾಠಿ ತಿರುಗೇಟು

‘ದುಷ್ಕರ್ಮಿಗಳು ಬಲಿಪಶುಗಳಂತೆ ನಟಿಸುತ್ತಿದ್ದಾರೆ..’; ಸ್ವಾತಿ ಮಲಿವಾಲ್ ಆರೋಪಕ್ಕೆ ಧೃವ್ ರಾಠಿ ತಿರುಗೇಟು

- Advertisement -
- Advertisement -

ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಅವರು, ‘ಧೃವ್ ರಾಠಿ ವಿಡಿಯೊ ನಂತರ ತಮ್ಮ ಮೇಲೆ ಅತ್ಯಾಚಾರ ಮತ್ತು ಕೊಲೆ ಬೆದರಿಕೆಗಳು ಬರುತ್ತಿವೆ’ ಇತ್ತೀಚೆಗೆ ಆರೋಪ ಮಾಡಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜನಪ್ರಿಯ ಯೂಟ್ಯೂಬರ್ ರಾಠಿ, ತನ್ನ ವಿರುದ್ಧದ ಆರೋಪಗಳು ನಕಲಿ ಎಂದು ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಯಾರ ಹೆಸರನ್ನೂ ನೇರವಾಗಿ ಪ್ರಸ್ತಾಪಿಸದೆ, “ತನಗೆ ಮಾನಹಾನಿ ಮಾಡಲು ಪ್ರಯತ್ನಿಸಲಾಗಿದೆ ಮತ್ತು ದುಷ್ಕರ್ಮಿಗಳು ಬಲಿಪಶುಗಳಂತೆ ನಟಿಸುತ್ತಿದ್ದಾರೆ” ಎಂದು ಬರೆದಿದ್ದಾರೆ.

“ನನ್ನ ವಿರುದ್ಧದ ಸುಳ್ಳು ಆರೋಪಗಳು, ದೈನಂದಿನ ಕೊಲೆ ಬೆದರಿಕೆಗಳು, ಅಮಾನವೀಯ ಅವಮಾನಗಳು, ನನ್ನ ಮಾನಹಾನಿಗಾಗಿ ಸಂಘಟಿತ ಪ್ರಚಾರಗಳನ್ನೆಲ್ಲಾ ನಾನು ಈಗ ಅಭ್ಯಾಸ ಮಾಡಿಕೊಂಡಿದ್ದೇನೆ” ಎಂದು ಧ್ರುವ್ ರಾಠಿ ಹೇಳಿದರು.

“ವಿಪರ್ಯಾಸವೆಂದರೆ, ದುಷ್ಕರ್ಮಿಗಳು ಬಲಿಪಶುಗಳಂತೆ ನಟಿಸುತ್ತಿದ್ದಾರೆ. ಇದೆಲ್ಲದರ ಹಿಂದೆ ಯಾರಿದ್ದಾರೆ ಎಂಬುದು ಎಲ್ಲರಿಗೂ ಗೊತ್ತು. ಅವರು ನನ್ನನ್ನು ಮೌನಗೊಳಿಸಲು ಬಯಸುತ್ತಾರೆ. ಆದರೆ, ಅದು ಆಗುವುದಿಲ್ಲ. ನೀವು ಒಬ್ಬ ಧ್ರುವ್ ರಾಠಿಯನ್ನು ಮೌನಗೊಳಿಸಿದರೆ, 1000 ಹೊಸಬರು ಹುಟ್ಟಿಕೊಳ್ಳುತ್ತವೆ; ಜೈ ಹಿಂದ್” ಎಂದು ಯೂಟ್ಯೂಬರ್ ಸ್ವಾತಿ ಮಲಿವಾಲ್‌ಗೆ ತಿರುಗೇಟು ಕೊಟ್ಟಿದ್ದಾರೆ.

ಈ ಹಿಂದೆ, ಆಮ್ ಆದ್ಮಿ ಪಕ್ಷ ಮತ್ತು ಅದರ ಕಾರ್ಯಕರ್ತರು ತನ್ನ ವಿರುದ್ಧ ಅಭಿಯಾನ ನಡೆಯುತ್ತಿದೆ ಎಂದು ಸ್ವಾತಿ ಮಲಿವಾಲ್ ಆರೋಪಿಸಿದ್ದರು. ಧ್ರುವ್ ರಾಠಿ ತನ್ನ ವಿರುದ್ಧ ಏಕಪಕ್ಷೀಯ ವೀಡಿಯೊವನ್ನು ಪೋಸ್ಟ್ ಮಾಡಿದ ನಂತರ ಪರಿಸ್ಥಿತಿ ಉಲ್ಬಣಗೊಂಡಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ; ಯಡಿಯೂರಪ್ಪ ವಿರುದ್ಧ ಪೋಕ್ಸೋ ದೂರು ದಾಖಲಿಸಿದ್ದ ಮಹಿಳೆ ಖಾಸಗಿ ಆಸ್ಪತ್ರೆಯಲ್ಲಿ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...