Homeಫ್ಯಾಕ್ಟ್‌ಚೆಕ್FACT CHECK : ರಾಜ್ಯಸಭೆಯ ಮಾಜಿ ಸದಸ್ಯ ಮಜೀದ್ ಮೆಮನ್ ಉಗ್ರ ಕಸಬ್ ಪರ ವಾದಿಸಿದ್ದರು...

FACT CHECK : ರಾಜ್ಯಸಭೆಯ ಮಾಜಿ ಸದಸ್ಯ ಮಜೀದ್ ಮೆಮನ್ ಉಗ್ರ ಕಸಬ್ ಪರ ವಾದಿಸಿದ್ದರು ಎಂಬುವುದು ಸುಳ್ಳು

- Advertisement -
- Advertisement -

ಮಾಜಿ ರಾಜ್ಯಸಭಾ ಸಂಸದ ಮತ್ತು ವಕೀಲ ಮಜೀದ್ ಮೆಮನ್ 26/11ರ ಮುಂಬೈ ದಾಳಿಯ ಭಯೋತ್ಪಾದಕ ಅಜ್ಮಲ್ ಕಸಬ್ ಪರ ನ್ಯಾಯಾಲಯದಲ್ಲಿ ವಕಾಲತ್ತು ವಹಿಸಿದ್ದರು ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಆರೋಪಿಸಿದ್ದಾರೆ.

ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ಅವರು ಮೆಮನ್ ಅವರನ್ನು ರಾಜ್ಯಸಭೆ ಸಂಸದರನ್ನಾಗಿಸಿದರೆ, ಕಸಬ್‌ಗೆ ಗಲ್ಲು ಶಿಕ್ಷೆ ಕೊಡಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಉಜ್ವಲ್ ನಿಕಮ್‌ಗೆ ಬಿಜೆಪಿ ಲೋಕಸಭೆ ಟಿಕೆಟ್ ನೀಡಿದೆ ಎಂದೂ ಹೇಳಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾದ ಸಂದೇಶದ ಕುರಿತು ನಾವು ಸತ್ಯಾಸತ್ಯತೆ ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ವಕೀಲ ಉಜ್ವಲ್ ನಿಕಮ್ ಅವರಿಗೆ ಮುಂಬೈ ನಾರ್ತ್ ಸೆಂಟ್ರಲ್‌ನಿಂದ ಬಿಜೆಪಿ ಲೋಕಸಭೆಯ ಟಿಕೆಟ್‌ ನೀಡಿರುವುದು ಖಚಿತವಾಗಿದೆ. ವಕೀಲ ಉಜ್ವಲ್ ನಿಕಮ್ ಅವರು ಮುಂಬೈ 26/11 ಭಯೋತ್ಪಾದಕ ದಾಳಿಯ ವಿಚಾರಣೆಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ರಾಷ್ಟ್ರವ್ಯಾಪಿ ಮನ್ನಣೆ ಗಳಿಸಿದ್ದರು. ಅಜ್ಮಲ್ ಕಸಬ್‌ ವಿರುದ್ಧ ಮತ್ತು ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ್ದರು.

ಆದರೆ, ‘ಮಜೀದ್ ಮೆಮನ್’ ಅವರು ಕಸಬ್‌ ಪರ ವಾದಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮಾಹಿತಿ ಹುಡುಕಿದಾಗ, ಮಜೀದ್ ಮೆಮನ್ ಅವರು ಅಜ್ಮಲ್ ಕಸಬ್‌ ಅನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ಹೇಳುವ ಯಾವುದೇ ಸುದ್ದಿ ವರದಿಗಳು ಲಭ್ಯವಾಗಿಲ್ಲ.

ನಾವು ಮತ್ತಷ್ಟು ಮಾಹಿತಿ ಹುಡುಕಿದಾಗ, 26/11ರ ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಅಜ್ಮಲ್ ಕಸಬ್ ಪರ ವಾದಿಸಲು ಯಾವುದೇ ವಕೀಲರು ಮುಂದೆ ಬಂದಿರಲಿಲ್ಲ. ಈ ಕಾರಣಕ್ಕೆ, ಪ್ರತಿ ಆರೋಪಿಯೂ ನ್ಯಾಯಯುತ ವಿಚಾರಣೆಗೆ ಒಳಗಾಗುವ ಹಕ್ಕಿದೆ ಮತ್ತು ಆರೋಪಿಯನ್ನು ಕನೂನಾತ್ಮಕ ವಕಾಲತ್ತು ವಹಿಸದಿರಲು ಅಸಾಧ್ಯ ಎಂಬ ಕಾರಣಕ್ಕಾಗಿ ಕೆಲ ವಕೀಲರನ್ನು ಕೋರ್ಟ್ ನೇಮಿಸಿತ್ತು. ಹೀಗೆ, ಕಸಬ್‌ನ ರಕ್ಷಣಾ ವಕೀಲರಾಗಿ ಅಬ್ಬಾಸ್ ಕಾಜ್ಮಿ ಅವರು ನೇಮಕಗೊಂಡರು. ಆದರೆ, ಕಾಜ್ಮಿ ಅವರು ಕಸಬ್‌ ಪರ ವಕಾಲತ್ತು ವಹಿಸಲು ನಿರಾಕರಿಸಿದ ಕಾರಣ, ಅಸಹಕಾರಕ್ಕಾಗಿ ಅವರನ್ನು ತೆಗೆದು ಹಾಕಲಾತ್ತು.

ಅಬ್ಬಾಸ್ ಕಾಜ್ಮಿಯವರ ಪದಚ್ಯುತಿ ನಂತರ ಕೆ.ಪಿ ಪವಾರ್, ಅಮೀನ್ ಸೋಲ್ಕರ್ ಮತ್ತು ಫರ್ಹಾನಾ ಶಾ ಎಂಬ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಕಸಬ್‌ ಪರ ವಾದ ಮಾಡಿದ್ದರು ಮತ್ತು ವಕೀಲ ರಾಜು ರಾಮಚಂದ್ರನ್ ಅವರು ಕಸಬ್‌ನ ಮರಣದಂಡನೆಯ ವಿರುದ್ಧದ ಮೇಲ್ಮನವಿಯ ಸಂದರ್ಭದಲ್ಲಿ ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ವಕೀಲರಾಗಿ ಸೇವೆ ಸಲ್ಲಿಸಿದ್ದರು. ಸುಪ್ರೀಂ ಕೋರ್ಟ್‌ನಲ್ಲಿ ಅಜ್ಮಲ್ ಕಸಬ್‌ಗೆ ಮರಣದಂಡನೆ ಶಿಕ್ಷೆಯ ಪರವಾಗಿ ಮಾಜಿ ಸಾಲಿಸಿಟರ್ ಜನರಲ್ ಆಫ್ ಇಂಡಿಯಾ ಗೋಪಾಲ್ ಸುಬ್ರಮಣಿಯಂ ಅವರ ನೇತೃತ್ವದ ವಕೀಲ ತಂಡ ವಾದಿಸಿತ್ತು.

“ಕಸಬ್‌ ಪರ ನಾನು ನ್ಯಾಯಾಲಯದಲ್ಲಿ ಏಕೆ ವಾದಿಸುವುದಿಲ್ಲ” ಎಂದು ಮಜೀದ್‌ ಮೆಮನ್‌ ಬರೆದಿರುವ ಲೇಖನವನ್ನು ದಿ ಎಕನಾಮಿಕ್ ಟೈಮ್ಸ್ ಮತ್ತು ಟೈಮ್ಸ್ ಆಫ್ ಇಂಡಿಯಾ ಸೇರಿದಂತೆ ವಿವಿಧ ಸುದ್ದಿ ಸಂಸ್ಥೆಗಳು ಡಿಸೆಂಬರ್ 21, 2008 ರಂದು ಪ್ರಕಟಿಸಿದ್ದವು.

ಈ ಲೇಖನದಲ್ಲಿ, ಮೆಮನ್‌ ಅವರು ಅಜ್ಮಲ್‌ ಕಸಬ್‌ನ ತ್ವರಿತ ವಿಚಾರಣೆಗೆ ಆಗ್ರಹಿಸಿದ್ದರು. ಕಸಬ್‌ ವಿರುದ್ಧ ಇರುವ ಸಾಕಷ್ಟು ಸಾಕ್ಷ್ಯಗಳನ್ನು ಉಲ್ಲೇಖಿಸಿ ಈ ಅಪರಾಧ ಮರಣ ದಂಡನೆಗೆ ಕಾರಣವಾಗುತ್ತದೆ ಎಂದು ಒತ್ತಿ ಹೇಳಿದ್ದರು. ಅಲ್ಲದೆ, ಅಜ್ಮಲ್‌ ಕಸಬ್‌ ವಕೀಲರನ್ನು ಹೊಂದುವುದು ಅವಶ್ಯಕ. ವಕೀಲರು ಇಲ್ಲದಿರುವುದು ವಿಚಾರಣೆಯ ನ್ಯಾಯಸಮ್ಮತತೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಹೇಳಿದ್ದರು. ಅದರ ಜೊತೆಗೆ ಅಜ್ಮಲ್‌ ಕಸಬ್‌ ಪರ ನಾನು ಕೋರ್ಟ್‌ನಲ್ಲಿ ವಾದ ಮಾಡಲ್ಲ. ಏಕೆಂದರೆ ಅವರ ಪ್ರಕರಣ ಸಮರ್ಥನೀಯವಲ್ಲ. ಅವನ ಅಪರಾಧವನ್ನು ನಾವೆಲ್ಲರೂ ನೋಡಿದ್ದೇವೆ ಎಂದು ತಮ್ಮ ಲೇಖನವನ್ನು ಮೆಮನ್‌ ಅಂತ್ಯಗೊಳಿಸಿದ್ದರು.

ಒಟ್ಟಾರೆಯಾಗಿ ಹೇಳುವುದಾದರೆ, ಮಜೀದ್ ಮೆಮನ್ ಅವರು 26/11 ಮುಂಬೈ ದಾಳಿ ಪ್ರಕರಣದ ವಿಚಾರಣೆಯ ಯಾವುದೇ ಹಂತದಲ್ಲಿ ಆರೋಪಿ ಅಜ್ಮಲ್ ಕಸಬ್‌ನ ಕಾನೂನು ತಂಡದ ಭಾಗವಾಗಿರಲಿಲ್ಲ. ಅಬ್ಬಾಸ್ ಕಾಜ್ಮಿ, ಅಮೀನ್ ಸೋಲ್ಕರ್ ಮತ್ತು ಫರ್ಹಾನಾ ಷಾ ಮುಂತಾದ ವಕೀಲರು ವಿವಿಧ ಹಂತಗಳಲ್ಲಿ ಕಸಬ್‌ನನ್ನು ಪ್ರತಿನಿಧಿಸಿದರು. ಕಸಬ್‌ ಪರ ವಾದಿಸುವುದಿಲ್ಲ ಎಂದು ಸ್ವತಃ ಮೆಮನ್‌ ಹೇಳಿದ್ದರು. ಹಾಗಾಗಿ ಮಜೀದ್ ಮೆಮನ್ ಅಜ್ಮಲ್ ಕಸಬ್‌ನ ಪರ ವಾದಿಸಿದ್ದರು ಎಂಬುವುದು ಸುಳ್ಳು.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿಯ ಹಿಂಬದಿ ಇರುವ ಫೋಟೋ ಕ್ರೈಸ್ತ ಧರ್ಮಕ್ಕೆ ಸಂಬಂಧಿಸಿದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿಗೆ ಎರಡು ತಿಂಗಳ ಜೈಲು ಶಿಕ್ಷೆ: ಇದು ‘ಕಾನೂನುಬಾಹಿರ’ ಎಂದ ಪಾಟ್ನಾ ಹೈಕೋರ್ಟ್: 5 ಲಕ್ಷ ಪರಿಹಾರಕ್ಕೆ ಆದೇಶ

ಬಿಹಾರ ಪೊಲೀಸರು ಎರಡು ತಿಂಗಳಿಗೂ ಹೆಚ್ಚು ಕಾಲ ಮುಸ್ಲಿಂ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಂಧಿಸಿದ್ದು, ಕಾನೂನುಬಾಹಿರ ಎಂದು ಪಾಟ್ನಾ ಹೈಕೋರ್ಟ್ ಹೇಳಿದೆ. ಇಂಥ ವಿಚಾರಗಳಲ್ಲಿ ರಾಜ್ಯ ಮೂಕ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ ಎಂದಿರುವ ಕೋರ್ಟ್...

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ...