Homeಮುಖಪುಟಇಂಡಿಯಾ ಬ್ಲಾಕ್ ಅಧಿಕಾರಕ್ಕೆ ಬಂದರೆ ಮೀಸಲಾತಿಯ ಮಿತಿಯನ್ನು ಹೆಚ್ಚಿಸುತ್ತೇವೆ

ಇಂಡಿಯಾ ಬ್ಲಾಕ್ ಅಧಿಕಾರಕ್ಕೆ ಬಂದರೆ ಮೀಸಲಾತಿಯ ಮಿತಿಯನ್ನು ಹೆಚ್ಚಿಸುತ್ತೇವೆ

- Advertisement -
- Advertisement -

“ದಿಲ್, ಜಾನ್ ಔರ್ ಖೂನ್” ನೊಂದಿಗೆ ಇಂಡಿಯಾ ಮೈತ್ರಿಯು ಸಂವಿಧಾನವನ್ನು ರಕ್ಷಿಸುತ್ತದೆ; ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದರೆ ಮೀಸಲಾತಿ ಮೇಲಿನ ಶೇಕಡಾ 50 ರಷ್ಟು ಮಿತಿಯನ್ನು ಕೊನೆಗೊಳಿಸಲಿದೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.

ಉತ್ತರ ಪ್ರದೇಶದ ಬನ್ಸ್‌ಗಾಂವ್‌ನಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗೆ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಗಾಂಧಿ, “ಸಂವಿಧಾನವನ್ನು ರಕ್ಷಿಸುವ ಇಂಡಿಯಾ ಬಣ ಒಂದು ಕಡೆ ಮತ್ತು ಸಂವಿಧಾನವನ್ನು ಮುಗಿಸಲು ಬಯಸುವವರು ಗುಂಪು ಇನ್ನೊಂದೆಡೆ. ಇಂಡಿಯಾ ಬಣವು “ದಿಲ್, ಜಾನ್ ಔರ್ ಖೂನ್ (ಹೃದಯ, ಜೀವನ ಮತ್ತು ರಕ್ತ)” ನೊಂದಿಗೆ ಸಂವಿಧಾನವನ್ನು ರಕ್ಷಿಸುತ್ತದೆ.ಮೈತ್ರಿ ಸರ್ಕಾರವು ಮೀಸಲಾತಿಯ ಮೇಲಿನ 50 ಪ್ರತಿಶತ ಮಿತಿಯನ್ನು ಕೊನೆಗೊಳಿಸುತ್ತದೆ” ಎಂದು ಹೇಳಿದರು.

ಇಂಡಿಯಾ ಬಣವು ಅಧಿಕಾರಕ್ಕೆ ಬಂದ ನಂತರ, ಅಗ್ನಿಪಥ್‌ ಯೋಜನೆಯನ್ನು ಹರಿದು ಕಸದ ಬುಟ್ಟಿಗೆ ಎಸೆಯುತ್ತದೆ ಎಂದು ರಾಹುಲ್ ಹೇಳಿದರು.

ಮೂರು ಸಶಸ್ತ್ರ ಸೇವೆಗಳ ವಯಸ್ಸಿನ ವಿವರವನ್ನು ಕಡಿಮೆ ಮಾಡುವ ಉದ್ದೇಶದಿಂದ ಸಿಬ್ಬಂದಿಗಳ ಅಲ್ಪಾವಧಿಯ ಸೇರ್ಪಡೆಗಾಗಿ ಸರ್ಕಾರವು ಜೂನ್ 2022 ರಲ್ಲಿ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಹೊರತಂದಿದೆ. ಇದು 17 ಮತ್ತು ಅರ್ಧ ವರ್ಷ, 21ರ ನಡುವಿನ ವಯಸ್ಸಿನ ಯುವಕರನ್ನು ನಾಲ್ಕು ವರ್ಷಗಳವರೆಗೆ ನೇಮಿಸಿಕೊಳ್ಳಲು ಒದಗಿಸುತ್ತದೆ ಮತ್ತು ಅವರಲ್ಲಿ ಶೇಕಡಾ 25 ರಷ್ಟನ್ನು ಇನ್ನೂ 15 ವರ್ಷಗಳವರೆಗೆ ಉಳಿಸಿಕೊಳ್ಳುವ ಅವಕಾಶವಿದೆ.

ಗಾಂಧಿಯವರು ಪ್ರಧಾನಿ ನರೇಂದ್ರ ಮೋದಿಯವರ “ದೇವರು ಕಳುಹಿಸಿದ” ಹೇಳಿಕೆಯನ್ನು ಲೇವಡಿ ಮಾಡಿದರು. “ದೇವರು ಮೋದಿಯನ್ನು ಅದಾನಿಗೆ ಸಹಾಯ ಮಾಡಲು ಕಳುಹಿಸಿದ್ದಾರೆ ;ಮಬಡವರಿಗೆ ಅಲ್ಲ” ಎಂದು ಹೇಳಿದರು.

ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಇಂಡಿಯಾ ಒಕ್ಕೂಟವು ದೇಶದ ಆರ್ಥಿಕತೆಯನ್ನು “ಜಂಪ್‌ಸ್ಟಾರ್ಟ್” ಮಾಡುತ್ತದೆ ಎಂದು ಅವರು ಪ್ರತಿಪಾದಿಸಿದರು.

ಇದನ್ನೂ ಓದಿ; ‘ಕಾನೂನಿನ ಆಳ್ವಿಕೆಯನ್ನು ಮೋದಿ ಕೊನೆಗೊಳಿಸಿದ್ದಾರೆ…’; ದಲಿತ ಕುಟುಂಬದ ಸದಸ್ಯರ ಹತ್ಯೆಗೆ ರಾಹುಲ್ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...