Homeಮುಖಪುಟ'ದೇವರಾಗಿದ್ದರೆ ರಾಜಕೀಯ ಮಾಡಬಾರದು': ಮೋದಿಗೆ ಮಮತಾ ಬ್ಯಾನರ್ಜಿ ಟಾಂಗ್‌

‘ದೇವರಾಗಿದ್ದರೆ ರಾಜಕೀಯ ಮಾಡಬಾರದು’: ಮೋದಿಗೆ ಮಮತಾ ಬ್ಯಾನರ್ಜಿ ಟಾಂಗ್‌

- Advertisement -
- Advertisement -

‘ನಾನು ದೇವರಿಂದ ಕಳುಹಿಸಲ್ಪಟ್ಟಿದ್ದೇನೆ ಎಂದು ನನಗೆ ಮನವರಿಕೆಯಾಗಿದೆ’ ಎಂಬ ಪ್ರಧಾನಿ ಮೋದಿಯ ಹೇಳಿಕೆಗೆ ಪ್ರತಿಕ್ರಿಯಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೇವರುಗಳು ರಾಜಕೀಯ ಮಾಡಬಾರದು ಮತ್ತು ಗಲಭೆಗಳನ್ನು ಪ್ರಚೋದಿಸಬಾರದು, ನಾವು ದೇವಾಲಯ ಕಟ್ಟಿಸಿ ಕೊಡುತ್ತೇವೆ ಅಲ್ಲಿರಬೇಕು ಎಂದು ಪ್ರಧಾನಿ ಮೋದಿಗೆ ಟಾಂಗ್‌ ನೀಡಿದ್ದಾರೆ.

ಕೋಲ್ಕತ್ತಾದಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಮೋದಿಯವರು ತಮ್ಮನ್ನು ತಾವು ದೇವರೆಂದು ಪರಿಗಣಿಸಿದ್ದರೆ, ಅವರಿಗೆ ದೇವಾಲಯವನ್ನು ನಿರ್ಮಿಸಬೇಕು, ಅಲ್ಲಿ ಕುಳಿತುಕೊಳ್ಳಬೇಕು ಮತ್ತು ದೇಶವನ್ನು ತೊಂದರೆಗೊಳಿಸುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ದೇವರುಗಳ ದೇವರು ಎಂದು ಒಬ್ಬರು ಹೇಳುತ್ತಾರೆ, ಮತ್ತೊಬ್ಬ ‘ಜಗನ್ನಾಥ ‘ ಮೋದಿಯ ಭಕ್ತ ಎಂದು ಹೇಳುತ್ತಾರೆ. ಅವರು ದೇವರಾಗಿದ್ದರೆ ಅವರು ರಾಜಕೀಯ ಮಾಡಬಾರದು, ಗಲಭೆಗಳನ್ನು ಪ್ರಚೋದಿಸಬಾರದು. ನಾವು ಅವರಿಗೆ ದೇವಸ್ಥಾನ ನಿರ್ಮಿಸುತ್ತೇವೆ ಮತ್ತು ಅಲ್ಲಿ ಅವರನ್ನು ಪೂಜಿಸಿ, ಪ್ರಸಾದ, ಹೂವುಗಳನ್ನು ಅರ್ಪಿಸುತ್ತೇವೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪ್ರಧಾನಿ ಮೋದಿ ಇತ್ತೀಚೆಗೆ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ‘ನಾನು ದೇವರಿಂದ ಕಳುಹಿಸಲ್ಪಟ್ಟಿದ್ದೇನೆ ಎಂದು ನನಗೆ ಮನವರಿಕೆಯಾಗಿದೆ, ಈ ರೀತಿಯ ಶಕ್ತಿಯು ಜೈವಿಕ ದೇಹದಿಂದ ಬರಲು ಸಾಧ್ಯವಿಲ್ಲ, ದೇವರು ಮಾತ್ರ ಅಂತಹ ಶಕ್ತಿಯನ್ನು ನೀಡಬಲ್ಲನು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು.

ಪುರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಬಿತ್ ಪಾತ್ರಾ ಇತ್ತೀಚೆಗೆ ಹೇಳಿಕೆಯೊಂದನ್ನು ನೀಡಿ ಜಗನ್ನಾಥ “ಮೋದಿಯ ಭಕ್ತ” ಎಂದು ಹೇಳಿದ್ದರು. ಈ ಬಗ್ಗೆ ವ್ಯಾಪಕವಾದ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸಂಬಿತ್ ಪಾತ್ರಾ ಕ್ಷಮೆ ಯಾಚಿಸಿದ್ದರು.

ಪ್ರಧಾನಿ ವಿರುದ್ಧ ವಾಗ್ದಾಳಿ ಮುಂದುವರಿಸಿದ ಮಮತಾ, ಅಟಲ್ ಬಿಹಾರಿ ವಾಜಪೇಯಿ ಅವರಂತಹ ಅನೇಕ ಪ್ರಧಾನಿಗಳೊಂದಿಗೆ ನಾನು ಕೆಲಸ ಮಾಡಿದ್ದೇನೆ, ಅವರು ನನ್ನನ್ನು ತುಂಬಾ ಪ್ರೀತಿಸುತ್ತಿದ್ದರು, ನಾನು ಮನಮೋಹನ್ ಸಿಂಗ್, ರಾಜೀವ್ ಗಾಂಧಿ, ನರಸಿಂಹರಾವ್, ದೇವೇಗೌಡರ ಜೊತೆ ಕೆಲಸ ಮಾಡಿದ್ದೇನೆ, ಆದರೆ ಮೋದಿಯಂತೆ ಯಾರನ್ನು ನೋಡಿಲ್ಲ, ಅವರಂತಹ ಪ್ರಧಾನಿಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಜೂನ್ 1ರಂದು ನಡೆಯಲಿರುವ ಅಂತಿಮ ಹಂತದ ಮತದಾನದ ಹಿನ್ನೆಲೆ ಮಮತಾ ಬ್ಯಾನರ್ಜಿ ಮತ್ತು ಪ್ರಧಾನಿ ಮೋದಿ ಇಬ್ಬರೂ ಕೋಲ್ಕತ್ತಾದಲ್ಲಿ ರೋಡ್‌ಶೋಗಳನ್ನು ನಡೆಸಿದ್ದಾರೆ. ಮಮತಾ ಬ್ಯಾನರ್ಜಿ ಉತ್ತರ ಮತ್ತು ದಕ್ಷಿಣ ಕೋಲ್ಕತ್ತಾದಲ್ಲಿ ಸುಮಾರು ಒಂಬತ್ತು ಕಿಲೋಮೀಟರ್‌ಗಳಷ್ಟು ಕಾಲ್ನಡಿಗೆಯಲ್ಲಿ ರೋಡ್‌ಶೋಗಳನ್ನು ನಡೆಸಿದ್ದಾರೆ.

ಇದನ್ನು ಓದಿ: ‘ಆಲ್ ಐಸ್ ಆನ್ ರಫಾ’: ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಂಡ ಪೋಸ್ಟ್‌ನ ಅರ್ಥವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...