Homeಮುಖಪುಟಸಾವಿನ ಅಂಚಿನಲ್ಲಿರುವ ವ್ಯಕ್ತಿಯ ಹೇಳಿಕೆ ಹೆಚ್ಚು ಮಾನ್ಯತೆಯನ್ನು ಹೊಂದಿದೆ: ಸುಪ್ರೀಂಕೋರ್ಟ್‌

ಸಾವಿನ ಅಂಚಿನಲ್ಲಿರುವ ವ್ಯಕ್ತಿಯ ಹೇಳಿಕೆ ಹೆಚ್ಚು ಮಾನ್ಯತೆಯನ್ನು ಹೊಂದಿದೆ: ಸುಪ್ರೀಂಕೋರ್ಟ್‌

- Advertisement -
- Advertisement -

ಸಾವಿನ ಅಂಚಿನಲ್ಲಿರುವ ವ್ಯಕ್ತಿಗಳು ಅಪರೂಪಕ್ಕೆ ಸುಳ್ಳು ಹೇಳುತ್ತಾರೆ ಮತ್ತು ಅವರ ಕೊನೆಯ ಮಾತುಗಳು ಕಾನೂನಿನ ದೃಷ್ಟಿಯಲ್ಲಿ ಹೆಚ್ಚು ಸ್ವೀಕಾರಾರ್ಹತೆಯನ್ನು ಮತ್ತು ಅಪಾರವಾದ ಮಾನ್ಯತೆಯನ್ನು ಹೊಂದಿದೆ ಎಂದು ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ.

ನ್ಯಾಯಮೂರ್ತಿಗಳಾದ ಎ.ಎಸ್. ಓಕಾ ಮತ್ತು ಉಜ್ಜಲ್ ಭುಯಾನ್ ಅವರ ಪೀಠ ಮಹಾರಾಷ್ಟ್ರದಲ್ಲಿ ಓರ್ವ ಅಪರಾಧಿಗೆ ಪತ್ನಿಯ ಹತ್ಯೆಗೆ ಸಂಬಂಧಿಸಿ ಜೀವಾವಧಿ ಶಿಕ್ಷೆಯನ್ನು ವಿಧಿಸುವಾಗ, ಸಾಯುತ್ತಿರುವ ವ್ಯಕ್ತಿಯ ಕೊನೆಯ ಮಾತುಗಳು ಪ್ರಾಮಾಣಿಕವಾಗಿರುತ್ತವೆ ಎಂದು ಕಾನೂನು ನಂಬುತ್ತದೆ ಎಂದು ಹೇಳಿದ್ದಾರೆ.

ಪೊಲೀಸ್ ಪೇದೆಯಾಗಿದ್ದ ಪತ್ನಿಯನ್ನು ಭಾರತೀಯ ಸೇನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ 2002ರಲ್ಲಿ ಅಂಬಾಜೋಗಿಯಲ್ಲಿ ಸಹೋದರನ ಜೊತೆ ಸೇರಿ ಕಟ್ಟಿಹಾಕಿ ಮತ್ತು ಬೆಂಕಿ ಹಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ. ಆಕೆ ಸುಟ್ಟ ಗಾಯಗಳಿಂದ ಸಾಯುವ ಮೊದಲು ಆಕೆ ನೀಡಿದ ಹೇಳಿಕೆಯನ್ನು ಸುಪ್ರೀಂಕೋರ್ಟ್ ವಿಚಾರಣೆ ವೇಳೆ ಮಹತ್ವದ್ದಾಗಿ ಪರಿಗಣಿಸಿತ್ತು. ಸಾಯುತ್ತಿರುವ ವೇಳೆ ನೀಡುವ ಹೇಳಿಕೆಗೆ ಸ್ವೀಕಾರಾರ್ಹತೆ ಹೆಚ್ಚಾಗಿರುತ್ತದೆ. ಏಕೆಂದರೆ ಸಾವಿನ ಅಂಚಿನಲ್ಲಿರುವಾಗ, ಸುಳ್ಳು ಹೇಳುವ ಪ್ರಸಂಗವು ಅಪರೂಪವಾಗಿ ಮಾತ್ರ ಕಂಡುಬರುತ್ತದೆ ಎಂದು ನ್ಯಾಯಮೂರ್ತಿ ಭುಯಾನ್ ತನ್ನ ತೀರ್ಪಿನಲ್ಲಿ ಹೇಳಿದ್ದಾರೆ.

ನ್ಯಾಯಾಲಯವು ವ್ಯಕ್ತಿಯ ಅಂತಿಮ ಹೇಳಿಕೆಯನ್ನು ಅತ್ಯಂತ ಜಾಗರೂಕತೆಯಿಂದ ಪರಿಶೀಲಿಸಬೇಕು.  ಸಾಯುವ ಸಮಯದಲ್ಲಿ ನೀಡಿದ ಹೇಳಿಕೆಯನ್ನು ಪುರಾವೆಯ ತುಣುಕಾಗಿ ಅಥವಾ ಒಂದು ಸ್ವತಂತ್ರ ಸಾಕ್ಷಿಯಾಗಿ ಪರಿಗಣಿಸಬಹುದೆಂದು ಎಂದು ನ್ಯಾಯಾಲಯ ಹೇಳಿದೆ. ಸಾವಿನ ಸಮಯದಲ್ಲಿ ವ್ಯಕ್ತಿಯು ನೀಡುವ ಹೇಳಿಕೆಯು ದೃಢೀಕರಿಸಲ್ಪಡದೆ ಇದ್ದಲ್ಲಿ ಅದನ್ನು ಪುರಾವೆಯಾಗಿ ಪರಿಗಣಿಸಲಾಗದು ಎಂಬುದಕ್ಕೆ ಯಾವುದೇ ಕಾನೂನಿಲ್ಲವೆಂದು ಹೇಳಿದ್ದಾರೆ.

ಸಾವಿನಂಚಿನ ವ್ಯಕ್ತಿಯ ಹೇಳಿಕೆಯು ಪ್ರೇರಣೆ ಅಥವಾ ಕಲ್ಪನೆಯಲ್ಲ ಎಂದು ಖಚಿತಪಡಿಸಿಕೊಳ್ಳಬೇಕು, ಮೃತರು ಹೇಳಿಕೆ ನೀಡಲು ಯೋಗ್ಯ ಮತ್ತು ಸರಿಯಾದ ಸ್ಥಿತಿಯಲ್ಲಿರಬೇಕು. ಸಾವಿನಂಚಿನಲ್ಲಿರುವ ವ್ಯಕ್ತಿ ನೀಡುವ ಹೇಳಿಕೆ ನಿಜ ಮತ್ತು ಸ್ವಯಂಪ್ರೇರಿತವಾಗಿದೆ ಎಂದು ನ್ಯಾಯಾಲಯಕ್ಕೆ ದೃಢಪಟ್ಟರೆ ಅದನ್ನು ಆಧರಿಸಿ ಅಪರಾಧ ನಿರ್ಣಯವನ್ನು ಮಾಡಬಹುದು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಒಂದು ವೇಳೆ ಸಾಯುವ ಮುನ್ನ ವ್ಯಕ್ತಿ ಕೊನೆಯ ಬಾರಿಗೆ ಹಲವು ಹೇಳಿಕೆಯನ್ನು ನೀಡಿದ್ದರೆ, ಈ ಪ್ರತಿಯೊಂದು ಹೇಳಿಕೆಗಳನ್ನು ಪ್ರತ್ಯೇಕವಾಗಿ ಮೌಲ್ಯಮಾಪನ ಮಾಡಬೇಕು. ಹೇಳಿಕೆಯಲ್ಲಿ ಕೆಲವು ವ್ಯತ್ಯಾಸಗಳ ಕಾರಣದಿಂದ ಒಂದು ಹೇಳಿಕೆಯನ್ನು ತಿರಸ್ಕರಿಸಲಾಗುವುದಿಲ್ಲ ಎಂದು ನ್ಯಾಯಮೂರ್ತಿ ಭುಯಾನ್ ಹೇಳಿದ್ದಾರೆ.

ಇದನ್ನು ಓದಿ: ಪ್ರಜ್ವಲ್ ರೇವಣ್ಣ ಬಂಧನ: ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಎಸ್‌ಐಟಿ ಅಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...