Homeಅಂತರಾಷ್ಟ್ರೀಯ'ನರಹಂತಕ' ಇಸ್ರೇಲ್‌ ಪ್ರಧಾನಿ ನೆತನ್ಯಾಹು ಸಂದರ್ಶನಕ್ಕೆ ವಿರೋಧ: ಫ್ರಾನ್ಸ್‌ನ ಮಾದ್ಯಮ ಕಚೇರಿ ಹೊರಗೆ ಪ್ರತಿಭಟನೆ

‘ನರಹಂತಕ’ ಇಸ್ರೇಲ್‌ ಪ್ರಧಾನಿ ನೆತನ್ಯಾಹು ಸಂದರ್ಶನಕ್ಕೆ ವಿರೋಧ: ಫ್ರಾನ್ಸ್‌ನ ಮಾದ್ಯಮ ಕಚೇರಿ ಹೊರಗೆ ಪ್ರತಿಭಟನೆ

- Advertisement -
- Advertisement -

ಗಾಝಾ ಹತ್ಯಾಕಾಂಡದ ರುವಾರಿ, ನರಹಂತಕ ಇಸ್ರೇಲ್‌ ಪ್ರಧಾನಿ ಬೆಂಜಮನ್‌ ನೆತನ್ಯಾಹು ಸಂದರ್ಶನ ನಡೆಯುತ್ತಿದ್ದ ಪಶ್ಚಿಮ ಪ್ಯಾರಿಸ್ ಉಪನಗರದ ಫ್ರಾನ್ಸ್‌ನ ಖಾಸಗಿ ಬ್ರಾಡ್‌ಕಾಸ್ಟರ್ ‘TF1’ ಕಚೇರಿ ಹೊರಗೆ ಸಾವಿರಾರು ಮಂದಿ ಸೇರಿ ಪ್ರತಿಭಟನೆಯನ್ನು ನಡೆಸಿದ್ದಾರೆ.

ಭಾರೀ ಪೊಲೀಸ್ ಭದ್ರತೆಯಿದ್ದ ಮಾದ್ಯಮ ಕಟ್ಟಡದ ಬಳಿ ಪ್ರತಿಭಟನಾಕಾರರು ಪ್ಯಾಲೆಸ್ತೀನ್‌ ಧ್ವಜಗಳನ್ನು ಹಿಡಿದುಕೊಂಡು ಪ್ರತಿಭಟನೆ ಮಾಡಿದ್ದಾರೆ. “ಗಾಝಾ, ಪ್ಯಾರಿಸ್ ನಿಮ್ಮೊಂದಿಗೆ ಇದೆ”, ತಕ್ಷಣದ ಕದನ ವಿರಾಮ ಮಾಡಬೇಕು ಮತ್ತು ‘ಇಸ್ರೇಲ್’- ಕೊಲೆಗಾರ ಎಂದು ಘೋಷಣೆಯನ್ನು ಕೂಗಿದ್ದರೆ.

TF1 ಸುದ್ದಿ ಚಾನೆಲ್‌ನಲ್ಲಿ ಪ್ರಸಾರವಾದ ಸಂದರ್ಶನದಲ್ಲಿ, ನೆತನ್ಯಾಹು ಗಾಝಾದ ಮೇಲಿನ ಯುದ್ಧವನ್ನು ಸಮರ್ಥಿಸಿಕೊಂಡಿದ್ದಾರೆ ಮತ್ತು ನಾಗರಿಕರ ಸಾವಿನ ಸಂಖ್ಯೆಯು ಅತ್ಯಂತ ಕಡಿಮೆ ದರದಲ್ಲಿದೆ ಎಂದು ಹೇಳಿದ್ದಾರೆ. ಇಸ್ರೇಲ್ ನಾಗರಿಕರನ್ನು ಗುರಿಯಾಗಿಸಿಕೊಂಡಿಲ್ಲ ಅಥವಾ ಉದ್ದೇಶಪೂರ್ವಕವಾಗಿ ಕ್ಷಾಮವನ್ನು ಉಂಟುಮಾಡಲು ಪ್ರಯತ್ನಿಸುತ್ತಿಲ್ಲ ಎಂದು ನೆತನ್ಯಾಹು ಹೇಳಿಕೊಂಡಿದ್ದಾರೆ.

ಯುಎನ್ ಏಜೆನ್ಸಿಗಳು, ನೆರವು ಗುಂಪುಗಳು ಗಾಝಾ ಭೂಪ್ರದೇಶವನ್ನು ಪ್ರವೇಶಿಸುವ ಮಾನವೀಯ ನೆರವಿನ ಮೇಲೆ ಇಸ್ರೇಲ್ ನಿರ್ಬಂಧಗಳ ಪರಿಣಾಮವಾಗಿ ಗಾಝಾವು ಕ್ಷಾಮವನ್ನು ಅನುಭವಿಸುತ್ತಿದೆ ಎಂದು ಹೇಳುತ್ತಿದೆ, ಗಾಝಾದ ಮಕ್ಕಳ ಅನ್ನ, ನೀರು, ಆಹಾರ ಸೇರಿ ಮೂಲಭೂತ ಅವಶ್ಯಕತೆಗಳನ್ನು ಪೂರೈಸಲು ಸಾಧ್ಯವಾಗದೆ ಸಂಕಷ್ಟದಲ್ಲಿದ್ದಾರೆ.

ಇಸ್ರೇಲ್‌ ಯುದ್ಧ ಘೋಷಿಸಿ ಅ.7ರಂದು ಗಾಝಾ ಮೇಲೆ ದಾಳಿ ಪ್ರಾರಂಭಿಸಿದ ಬಳಿಕ ಕನಿಷ್ಠ 36,224 ಪ್ಯಾಲೆಸ್ತೀನಿಯನ್ನರು  ಕೊಲ್ಲಲ್ಪಟ್ಟರು ಮತ್ತು 81,777 ಮಂದಿ ಗಾಯಗೊಂಡಿದ್ದಾರೆ. ಇಸ್ರೇಲ್‌ ನಡೆಸುತ್ತಿರುವ ಹತ್ಯಾಕಾಂಡಕ್ಕೆ ಜಾಗತಿಕ ಖಂಡನೆ ಮತ್ತು ಹೇಗ್‌ನಲ್ಲಿರುವ ಅಂತರಾಷ್ಟ್ರೀಯ ನ್ಯಾಯಾಲಯವು ತಕ್ಷಣವೇ ನಗರದಿಂದ ಸೇನೆಯನ್ನು ಹಿಂತೆಗೆದುಕೊಳ್ಳುವಂತೆ ಆದೇಶಿಸಿದರೂ ಇಸ್ರೇಲ್ ರಾಫಾದ ಮೇಲೆ ಆಕ್ರಮಣವನ್ನು ಮುಂದುವರೆಸುತ್ತಿರುವುದರಿಂದ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಜನರು ರಫಾದಿಂದ ಸ್ಥಳಾಂತರಗೊಂಡಿದ್ದಾರೆ.

 

ನೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದ ಅರೆವೈದ್ಯಕೀಯ ಸಿಬ್ಬಂದಿಗಳ ಹತ್ಯೆ

ರಫಾದಲ್ಲಿ ಇಸ್ರೇಲ್‌ ಪಡೆಗಳಿಂದ ಕೊಲ್ಲಲ್ಪಟ್ಟ ಇಬ್ಬರು ಪ್ಯಾಲೆಸ್ತೀನ್‌ ರೆಡ್ ಕ್ರೆಸೆಂಟ್ ಸೊಸೈಟಿ (PRCS) ಅರೆವೈದ್ಯರ ಕುಟುಂಬಗಳಿಗೆ ವಿಶ್ವ ಆರೋಗ್ಯ ಸಂಸ್ಥೆ ತನ್ನ ಸಂತಾಪವನ್ನು ವ್ಯಕ್ತಪಡಿಸಿದೆ.

ರಾಫಾದ ತಾಲ್ ಅಸ್-ಸುಲ್ತಾನ್ ಪ್ರದೇಶದಲ್ಲಿ ಹೈಥಮ್ ತುಬಾಸಿ ಮತ್ತು ಸುಹೇಲ್ ಹಸ್ಸೌನಾ ಅವರು ತಮ್ಮ ಆಂಬ್ಯುಲೆನ್ಸ್‌ನಲ್ಲಿ ಜನರ ಅಗತ್ಯಗಳಿಗೆ ಸ್ಪಂದಿಸುತ್ತಿದ್ದಾಗಿ ಇಸ್ರೇಲ್ ಉದ್ದೇಶಪೂರಕವಾಗಿ ದಾಳಿ ನಡೆಸಿ ಇಬ್ಬರು ಪ್ಯಾಲೆಸ್ತೀನ್‌ ರೆಡ್ ಕ್ರೆಸೆಂಟ್ ಸೊಸೈಟಿ ಸಿಬ್ಬಂದಿಗಳನ್ನು ಹತ್ಯೆ ಮಾಡಿದೆ ಎಂದು ಹೇಳಿಕೊಂಡಿದೆ. ಈವರೆಗೆ 19 ಪ್ಯಾಲೆಸ್ತೀನ್‌ ರೆಡ್ ಕ್ರೆಸೆಂಟ್ ಸೊಸೈಟಿ ಸಿಬ್ಬಂದಿಗಳು ಇಸ್ರೇಲ್‌ ದಾಳಿಗೆ ಬಲಿಯಾಗಿದ್ದಾರೆ.

ಗಾಝಾದ ನುಸಿರಾತ್ ನಿರಾಶ್ರಿತರ ಶಿಬಿರವನ್ನು ಗುರಿಯಾಗಿಸಿಕೊಂಡು ಇಸ್ರೇಲ್‌ ಮತ್ತೆ ನಡೆಸಿದ ದಾಳಿಗೆ ಮೂವರು ನಾಗರಿಕರು ಮೃತಪಟ್ಟಿದ್ದಾರೆ. ಗಾಝಾದ ಮೇಲೆ ಇಸ್ರೇಲ್‌ ಯುದ್ಧ ಘೋಷಿಸಿದಾಗ ಸುರಕ್ಷಿತ ಸ್ಥಳವೆಂದು ನಾಗರಿಕರು ತಾತ್ಕಾಲಿಕ ನೆಲೆ ಕಂಡುಕೊಂಡಿದ್ದ ರಫಾ ಮೇಲೆ ಇಸ್ರೇಲ್‌ ದಾಳಿಯನ್ನು ಪ್ರಾರಂಭಿಸಿದೆ. ಮೂಲಗಳ ಪ್ರಕಾರ ಈ ನಗರದಲ್ಲಿ ಈವರೆಗೆ 60ಕ್ಕೂ ಅಧಿಕ ಮಂದಿಯ ಹತ್ಯೆ ನಡೆದಿದೆ. ಅಲ್ಲಿನ ನಾಗರಿಕರ ಕೊನೆಯ ಆಶ್ರಯದ ಮೇಲಿನ ದಾಳಿಗೆ ಜಗತ್ತಿನಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಆದರೆ ಇಸ್ರೇಲ್‌ ತನ್ನ ಕ್ರೌರ್ಯವನ್ನು ಸಮರ್ಥಿಸಿಕೊಳ್ಳುತ್ತಿದೆ.

ಇದನ್ನು ಓದಿ: ಸಾವಿನ ಅಂಚಿನಲ್ಲಿರುವ ವ್ಯಕ್ತಿಯ ಹೇಳಿಕೆ ಹೆಚ್ಚು ಮಾನ್ಯತೆಯನ್ನು ಹೊಂದಿದೆ: ಸುಪ್ರೀಂಕೋರ್ಟ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...