Homeಕರ್ನಾಟಕವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ಡೆತ್‌ನೋಟ್‌ನಲ್ಲಿ ಹೆಸರಿಸಿದ್ದ ಇಬ್ಬರು ಆರೋಪಿಗಳ ಬಂಧನ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣ: ಡೆತ್‌ನೋಟ್‌ನಲ್ಲಿ ಹೆಸರಿಸಿದ್ದ ಇಬ್ಬರು ಆರೋಪಿಗಳ ಬಂಧನ

- Advertisement -
- Advertisement -

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣ ಮತ್ತು ಹಣಕಾಸಿನ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ.ಪದ್ಮನಾಭ ಮತ್ತು ಲೆಕ್ಕಾಧಿಕಾರಿ ಪರಶುರಾಮ್ ಜಿ. ದುರುಗಣ್ಣವರನ್ನು ಬಂಧಿಸಿದೆ.

ಹಗರಣದ ತನಿಖೆಗೆ ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮನೀಷ್ ಖರ್ಬೀಕರ್ ನೇತೃತ್ವದಲ್ಲಿ ಎಸ್ಐಟಿ ರಚಿಸಿ ನಿನ್ನೆ ರಾಜ್ಯ ಸರಕಾರ ಆದೇಶ ಹೊರಡಿಸಿತ್ತು. ಈ ಕುರಿತ ತನಿಖೆ ಆರಂಭದ ದಿನವೇ ಎಸ್ಐಟಿ, ಪದ್ಮನಾಭ ಮತ್ತು ಪರಶುರಾಮ್ ಅವರನ್ನು ಬಂಧಿಸಿದೆ.

ಏನಿದು ಪ್ರಕರಣ?

ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಭಾನುವಾರ  ಸಂಜೆ ಡೆತ್‌ನೋಟ್ ಬರೆದಿಟ್ಟು ಚಂದ್ರಶೇಖರನ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್‌ ನೋಟ್‌ನಲ್ಲಿ ತಮ್ಮ ಸಾವಿಗೆ ಕಾರಣ ತಿಳಿಸಿ ಮೂವರು ಉನ್ನತ ಅಧಿಕಾರಿಗಳ ಹೆಸರು ಉಲ್ಲೇಖಿಸಿದ್ದರು. ಈ ಆಧಾರದ ಮೇಲೆ ಶಿವಮೊಗ್ಗ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.

ಮೂವರು ಅಧಿಕಾರಿಗಳು ವಿವಿಧ ಠೇವಣಿಗಳ ಮೂಲಕ ವೈಯಕ್ತಿಕ ಲಾಭಕ್ಕಾಗಿ ಸುಮಾರು 87 ಕೋಟಿ ರೂಪಾಯಿ ದುರುಪಯೋಗ ಪಡಿಸಿಕೊಂಡಿದ್ದು, ಮಾತ್ರವಲ್ಲದೇ ತನಗೆ ಕಿರುಕುಳ ನೀಡಿದ್ದಾರೆ. ನಿಗಮದ ಪ್ರಾಥಮಿಕ ಖಾತೆಯಿಂದ ಲೆಕ್ಕಕ್ಕೆ ಸಿಗದ ಹಣವನ್ನು ಬೇರೆಡೆಗೆ ತಿರುಗಿಸಲು ಸಮಾನಾಂತರ ಬ್ಯಾಂಕ್ ಖಾತೆ ತೆರೆಯುವಂತೆ ಹಿರಿಯ ಅಧಿಕಾರಿಗಳು ಒತ್ತಾಯಿಸಿದ್ದಾರೆ ಎಂದು ಚಂದ್ರಶೇಖರನ್ ತನ್ನ ಡೆತ್‌ನೋಟ್‌ನಲ್ಲಿ ಬರೆದಿದ್ದರು.

ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ ದುರುಗಣ್ಣವರ, ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ಮುಖ್ಯ ವ್ಯವಸ್ಥಾಪಕಿ ಶುಚಿಸ್ಮತಾ ರವುಲ್‌ ನನ್ನ ಸಾವಿಗೆ ಕಾರಣ ಎಂದು ಅವರು ಡೆತ್‌ ನೋಟ್‌ನಲ್ಲಿ ಬರೆದಿದ್ದರು. ಮಾನ್ಯ ಸಚಿವರು ಮೌಖಿಕವಾಗಿ ಸೂಚಿಸಿದ್ದಾರೆ ಎಂದು ಹಣ ವರ್ಗಾಯಿಸಲು ಲೆಕ್ಕಾಧಿಕಾರಿ ಹೇಳಿದ ಹಿನ್ನೆಲೆಯಲ್ಲಿ ನಿಗಮದ 87 ಕೋಟಿ ಅನುದಾನವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾಯಿಸಲಾಗಿದೆ. ವ್ಯವಸ್ಥಾಪಕ ನಿರ್ದೇಶಕರು ಒತ್ತಾಯಪೂರ್ವಕ ಅನುದಾನ ವರ್ಗಾಯಿಸುತ್ತಿದ್ದರು. ನಮಗೆ ಅವರ ಒಳಸಂಚು ಅರ್ಥವೇ ಆಗಿಲ್ಲ. ಬ್ಯಾಂಕ್‌ನವರು ಚೆಕ್‌ ಬುಕ್‌ ಮತ್ತು ಪಾಸ್ ಬುಕ್‌ ಈವರೆಗೂ ನೀಡಿಲ್ಲ. 87 ಕೋಟಿ ಅವ್ಯವಹಾರ ಆಗಿದೆ. ಅಧಿಕಾರಿಗಳು ಅಕ್ರಮವಾಗಿ ಹಣ ವರ್ಗಾವಣೆ ಮಾಡಿಸಿದ್ದಾರೆ. ನಾನು ನಿಗಮಕ್ಕೆ ಮೋಸ ಮಾಡಿಲ್ಲ. ಅವ್ಯವಹಾರದಲ್ಲಿ ಭಾಗಿ ಆಗಿಲ್ಲ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದರು.

ಇದನ್ನು ಓದಿ: ಕೊನೆಯ ಹಂತದ ಮತದಾನ: ಪ.ಬಂಗಾಳದ ಹಲವೆಡೆ ಹಿಂಸಾಚಾರ; ಮತಯಂತ್ರಗಳನ್ನು ಹೊತ್ತೊಯ್ದು ನೀರಿಗೆ ಎಸೆದ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...