Homeಮುಖಪುಟಕನ್ಯಾಕುಮಾರಿಯಲ್ಲಿ ಧ್ಯಾನ: ಮೋದಿಗೆ ಕಾನೂನು ಅನ್ವಯಿಸುವುದಿಲ್ಲವೇ? ದಿಗ್ವಿಜಯ್‌ ಸಿಂಗ್‌ ಪ್ರಶ್ನೆ

ಕನ್ಯಾಕುಮಾರಿಯಲ್ಲಿ ಧ್ಯಾನ: ಮೋದಿಗೆ ಕಾನೂನು ಅನ್ವಯಿಸುವುದಿಲ್ಲವೇ? ದಿಗ್ವಿಜಯ್‌ ಸಿಂಗ್‌ ಪ್ರಶ್ನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಕಾನೂನು ಮತ್ತು ನಿಯಮಗಳ ವ್ಯಾಪ್ತಿಗೆ ಒಳಪಡುದಿಲ್ಲವೇ? ಕಾನೂನು ಅಥವಾ ನಿಯಮಗಳು ಅವರಿಗೆ ಅನ್ವಯಿಸುವುದಿಲ್ಲವೇ ಎಂದು ಮಧ್ಯಪ್ರದೇಶದ ಮಾಜಿ ಸಿಎಂ, ಕಾಂಗ್ರೆಸ್‌ ನಾಯಕ ದಿಗ್ವಿಜಯ್‌ ಸಿಂಗ್‌ ಪ್ರಶ್ನಿಸಿದ್ದಾರೆ.

ಲೋಕಸಭೆಯ ಚುನಾವಣೆಯ ಕೊನೆಯ ಹಂತದ ಮೌನ ಅವಧಿ ವೇಳೆ ಮೋದಿ ಧ್ಯಾನದ ಚಿತ್ರಗಳು ವೈರಲ್‌ ಆಗಿದ್ದವು, ಈ ಬಗ್ಗೆ ಪ್ರಶ್ನೆಯನ್ನು ಎತ್ತಿರುವ  ದಿಗ್ವಿಜಯ್‌ ಸಿಂಗ್‌ ಪ್ರಧಾನ ಮಂತ್ರಿಗಳ ಕಾರ್ಯಾಲಯವು ಈ ಕುರಿತು ಉತ್ತರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಕಪಿಲ್‌ ಎಂಬವರು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ವಿವೇಕಾನಂದ ಸ್ಮಾರಕದಲ್ಲಿ ಪೋಟೋ ತೆಗೆಯುವುದಕ್ಕೆ ಕಾನೂನಿನ ಪ್ರಕಾರ ಅನುಮತಿಯಿಲ್ಲ, ಇದೊಂದು ದಂಡನಾರ್ಹ ಅಪರಾಧವಾಗಿದೆ. ಹೀಗಿದ್ದೂ ಇದೇ ಪ್ರಥಮ ಬಾರಿಗೆ ನೀವು ವಿವೇಕಾನಂದ ಸ್ಮಾರಕದಲ್ಲಿನ ಧ್ಯಾನಮಂದಿರದ ಭಾವಚಿತ್ರಗಳನ್ನು ನೋಡುತ್ತಿದ್ದೀರಿ. ಕ್ಯಾಮೆರಾ ಇಲ್ಲದೆ ಕ್ಯಾಮೆರಾ ಜೀವಿ ಬದುಕುವುದಾದರೂ ಹೇಗೆ? ಎಂದು ಬರೆದುಕೊಂಡಿದ್ದರು. ಈ ಪೋಸ್ಟ್‌ನ್ನು ಮರು ಹಂಚಿಕೊಂಡಿರುವ ದಿಗ್ವಿಜಯ್‌ ಸಿಂಗ್‌ ಮೋದಿಗೆ ಕಾನೂನು ಮತ್ತು ನಿಯಮಗಳು ಅನ್ವಯಿಸುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಲೋಕಸಭೆ ಚುನಾವಣೆಯ ಕೊನೆಯ ಹಂತದ ಪ್ರಚಾರದ ಬಳಿಕ ವಿವೇಕಾನಂದ ಸ್ಮಾರಕದ ಧ್ಯಾನಮಂದಿರದಲ್ಲಿ ಪ್ರಧಾನಿ ಮೋದಿ 45 ಗಂಟೆಗಳ ಧ್ಯಾನದಲ್ಲಿದ್ದಾರೆ. ಇಂದು ಸಂಜೆ ಧ್ಯಾನ ಮುಕ್ತಾಯಗೊಳ್ಳಲಿದೆ. ಇಂದು ಲೋಕಸಭೆ ಚುನಾವಣೆಯ 7ನೇ ಹಂತದ ಮತದಾನದ ಹಿನ್ನೆಲೆ ಮೇ 30ರಿಂದ ಮೌನ ಅವಧಿ ಆರಂಭವಾಗಿತ್ತು. ಆದರೆ ಇದೇ ಸಮಯದಲ್ಲಿ ಪ್ರಧಾನಿ ಮೇ 30ರ ಸಂಜೆಯಿಂದ ತಮ್ಮ ಧ್ಯಾನವನ್ನು ಪ್ರಾರಂಭಿಸಿದ್ದಾರೆ. ಇದು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಜೂನ್ 1ರ ಸಂಜೆಯಿಂದ ಪ್ರಧಾನಿ 24-48 ಗಂಟೆಗಳ ನಂತರ ತನ್ನ ಧ್ಯಾನವನ್ನು ಪ್ರಾರಂಭಿಸಬಹುದು. ಅವರು ಮೇ 30ರಿಂದ ಧ್ಯಾನ ಮಾಡಲು ಬಯಸಿದರೆ, ನಂತರ ಅದನ್ನು ಟಿವಿ ಅಥವಾ ಮುದ್ರಣ ಮಾಧ್ಯಮವು ಪ್ರಸಾರ ಮಾಡದಂತೆ ಚುನಾವಣಾ ಆಯೋಗ ನಿರ್ಬಂಧಿಸಬೇಕು ಎಂದು ಪ್ರತಿಪಕ್ಷಗಳು ಚುನಾವಣಾ ಆಯೋಗಕ್ಕೆ ಆಗ್ರಹಿಸಿದ್ದವು.

ಕನ್ಯಾಕುಮಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನವನ್ನು ದೂರದರ್ಶನದಲ್ಲಿ ಪ್ರಸಾರ ಮಾಡಿದರೆ ಅದು ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘನೆಯಾಗುತ್ತದೆ ಎಂದು ಮಮತಾ ಬ್ಯಾನರ್ಜಿ ಕೂಡ ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದರು.

ಇದನ್ನು ಓದಿ: ‘ಧ್ಯಾನ’ಕ್ಕೆ ಹೊರಡುವ ಮೊದಲು ಕೊನೆಯ ಸಭೆಯಲ್ಲೂ ಸುಳ್ಳು ಹೇಳಿದ್ದ ಮೋದಿ: ಪ್ರಧಾನಿಯ 2024ರ ಚುನಾವಣಾ ಪ್ರಚಾರ ಹೇಗಿತ್ತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...