Homeಮುಖಪುಟಎಕ್ಸಿಟ್ ಪೋಲ್‌ಗಳ ಫಲಿತಾಂಶ 2014, 2019ರಲ್ಲಿ ಎಷ್ಟು ನಿಖರವಾಗಿವೆ?

ಎಕ್ಸಿಟ್ ಪೋಲ್‌ಗಳ ಫಲಿತಾಂಶ 2014, 2019ರಲ್ಲಿ ಎಷ್ಟು ನಿಖರವಾಗಿವೆ?

- Advertisement -
- Advertisement -

2024ರ ಲೋಕಸಭೆ ಚುನಾವಣೆಗೆ ಇಂದು ಏಳನೇ ಹಂತದ ಮತದಾನ ಕೊನೆಗೊಂಡಿದೆ. ಜೂನ್ 4 ರಂದು ಅಂತಿಮ ಫಲಿತಾಂಶ ಪ್ರಕಟವಾಗಲಿದ್ದು, ಎಕ್ಸಿಟ್ ಪೋಲ್‌ಗಳು ಇಂದು ಸಂಜೆ 6:30ರಿಂದ ಪ್ರಸಾರವಾಗಲಿದೆ. 2024ರ ಲೋಕಸಭಾ ಚುನಾವಣೆಯ 543 ಸಂಸದೀಯ ಸ್ಥಾನಗಳ ನೈಜ ಫಲಿತಾಂಶ ಜೂನ್ 4ರಂದು ಭಾರತೀಯ ಚುನಾವಣಾ ಆಯೋಗ ಪ್ರಕಟಿಸಲಿದೆ. ಎಕ್ಸಿಟ್ ಪೋಲ್‌ಗಳು ಯಾವಾಗಲೂ 100% ಅಧಿಕೃತ ಫಲಿತಾಂಶಗಳಲ್ಲ, ನೈಜ ಫಲಿತಾಂಶಗಳಲ್ಲಿ ಸಾಕಷ್ಟು ವ್ಯತ್ಯಾಸಗಳು ಕಂಡು ಬರುತ್ತದೆ.

2014 ಮತ್ತು 2019 ರ ಲೋಕಸಭಾ ಚುನಾವಣೆಗಳಲ್ಲಿ ಎಕ್ಸಿಟ್ ಪೋಲ್‌ಗಳ ಫಲಿತಾಂಶಗಳು ಮತ್ತು ನಿಜವಾದ ಫಲಿತಾಂಶಗಳ ವಿವರ ಈ ಕೆಳಗಿದೆ.

2014ರ ಎಕ್ಸಿಟ್ ಪೋಲ್ vs ವಾಸ್ತವ ಫಲಿತಾಂಶಗಳು

2014ರಲ್ಲಿ ಹೆಚ್ಚಿನ ಎಕ್ಸಿಟ್ ಪೋಲ್ ಸಮೀಕ್ಷೆಗಳು ಬಿಜೆಪಿ ನೇತೃತ್ವದ ಎನ್‌ಡಿಎ ಅಧಿಕಾರಕ್ಕೆ ಬರುವುದನ್ನು ಹೇಳಿದ್ದವು. ಆದರೆ ವಿಜಯದ ಅಂತರವನ್ನು ನಿಖರವಾಗಿ ಊಹಿಸಲು ವಿಫಲವಾಗಿವೆ.

2014ರಲ್ಲಿನ ಎನ್‌ಡಿಎ ಬಗ್ಗೆ ಎಕ್ಸಿಟ್ ಪೋಲ್ ಫಲಿತಾಂಶಗಳು

1. ಇಂಡಿಯಾ ಟುಡೇ-ಸಿಸೆರೊ: ಎನ್‌ಡಿಎಗೆ 272 ಸ್ಥಾನಗಳನ್ನು ಊಹಿಸಿದ್ದವು.

2. ನ್ಯೂಸ್‌ 24-ಚಾಣಕ್ಯ: 340 ಸ್ಥಾನಗಳು

3. CNN-IBN-CSDS: 280 ಸೀಟುಗಳು

4. ಟೈಮ್ಸ್ ನೌ ORG: 249 ಸೀಟುಗಳು

5. ಎಬಿಪಿ ನ್ಯೂಸ್-ನೀಲ್ಸನ್: 274 ಸ್ಥಾನಗಳು

6. NDTV ಸಂಶೋಧನೆ: 279 ಸ್ಥಾನಗಳು

ಯುಪಿಎ ಬಗ್ಗೆ ಎಕ್ಸಿಟ್ ಪೋಲ್ ಫಲಿತಾಂಶಗಳು

1. ಇಂಡಿಯಾ ಟುಡೇ-ಸಿಸೆರೊ: ಯುಪಿಎಗೆ 115 ಸ್ಥಾನಗಳನ್ನು ಊಹಿಸಲಾಗಿದೆ

2.ನ್ಯೂಸ್‌ 24-ಚಾಣಕ್ಯ: 101 ಸ್ಥಾನಗಳು

3. CNN-IBN-CSDS: 97 ಸ್ಥಾನಗಳು

4. ಟೈಮ್ಸ್ ನೌ ORG: 148 ಸೀಟುಗಳು

5. ಎಬಿಪಿ ನ್ಯೂಸ್-ನೀಲ್ಸನ್: 97 ಸ್ಥಾನಗಳು

6. NDTV ಸಂಶೋಧನೆ: 103 ಸ್ಥಾನಗಳು

ನಿಜವಾದ ಫಲಿತಾಂಶಗಳು

2014ರ ಲೋಕಸಭೆ ಚುನಾವಣೆಯಲ್ಲಿ NDA 336 ಸ್ಥಾನಗಳನ್ನು ಪಡೆದುಕೊಂಡಿದೆ. ಅದರಲ್ಲಿ ಬಿಜೆಪಿ 282 ಸ್ಥಾನಗಳನ್ನು ಗೆದ್ದುಕೊಂಡಿದೆ. ಯುಪಿಎ 60 ಸ್ಥಾನಗಳಲ್ಲಿ ಗೆಲುವನ್ನು ಕಂಡಿದ್ದು, ಕಾಂಗ್ರೆಸ್ ಕೇವಲ 44 ಸ್ಥಾನಗಳನ್ನು ಮಾತ್ರ ಗೆದ್ದುಕೊಂಡಿತ್ತು.

2019ರ ಎಕ್ಸಿಟ್ ಪೋಲ್ vs ವಾಸ್ತವ ಫಲಿತಾಂಶಗಳು

ಎನ್‌ಡಿಎ ಬಗ್ಗೆ ಎಕ್ಸಿಟ್ ಪೋಲ್ ಫಲಿತಾಂಶಗಳು

1. ಇಂಡಿಯಾ ಟುಡೇ-ಆಕ್ಸಿಸ್: 339-365 ಸೀಟುಗಳು

2. ನ್ಯೂಸ್‌ 24-ಟುಡೇಸ್ ಚಾಣಕ್ಯ: 350 ಸ್ಥಾನಗಳು

3. News18-IPSOS: 336 ಸ್ಥಾನಗಳು

4. ಟೈಮ್ಸ್ ನೌ VMR: 306 ಸ್ಥಾನಗಳು

5. ಇಂಡಿಯಾ ಟಿವಿ-ಸಿಎನ್‌ಎಕ್ಸ್: 300 ಸೀಟುಗಳು

6. ಸುದರ್ಶನ ನ್ಯೂಸ್‌: 305 ಸ್ಥಾನಗಳು

ಯುಪಿಎ ಎಕ್ಸಿಟ್ ಪೋಲ್ ಫಲಿತಾಂಶಗಳು

1. ಇಂಡಿಯಾ ಟುಡೇ-ಆಕ್ಸಿಸ್: 77-108 ಸೀಟುಗಳು

2.ನ್ಯೂಸ್‌ 24-ಟುಡೇಸ್ ಚಾಣಕ್ಯ: 95 ಸ್ಥಾನಗಳು

3. News18-IPSOS: 82 ಸ್ಥಾನಗಳು

4. ಟೈಮ್ಸ್ ನೌ VMR: 132 ಸ್ಥಾನಗಳು

5. ಇಂಡಿಯಾ TV-CNX: 120 ಸ್ಥಾನಗಳು

6. ಸುದರ್ಶನ ಸುದ್ದಿ: 124 ಸ್ಥಾನಗಳು

ನಿಜವಾದ ಫಲಿತಾಂಶಗಳು
2019ರ ಲೋಕಸಭೆ ಚುನಾವಣೆಯಲ್ಲಿ NDA 352 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ಏಕಾಂಗಿಯಾಗಿ 303 ಸ್ಥಾನವನ್ನು ಗಳಿಸಿದೆ. ಯುಪಿಎ 91 ಸ್ಥಾನಗಳಲ್ಲಿ ಗೆಲುವನ್ನು ಕಂಡಿದ್ದು, ಕಾಂಗ್ರೆಸ್ 52 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಆದರೆ ವಾಸ್ತವವಾಗಿ ನಿಖರವಾದ ಫಲಿತಾಂಶವನ್ನು ಯಾವುದೇ ಎಕ್ಸಿಟ್ ಪೋಲ್ ಫಲಿತಾಂಶಗಳು ನೀಡಿಲ್ಲ.

ಲೋಕಸಭೆ ಚುನಾವಣೆ 2024 ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ನಡುವೆ ನೇರ ಹಣಾಹಣಿಗೆ ಸಾಕ್ಷಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಆಡಳಿತಾರೂಢ ಬಿಜೆಪಿ ಸತತ ಮೂರನೇ ಬಾರಿಗೆ ಅಧಿಕಾರ ಹಿಡಿಯಲು ಪ್ರಯತ್ನಿಸಿದೆ. ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸಿ ಹೊಸ ಸರಕಾರ ರಚನೆಗೆ ಪ್ರತಿಪಕ್ಷಗಳು ಬಿರುಸಿನ ಪ್ರಚಾರ ನಡೆಸಿದೆ. ಜೂ.4ರಂದು ಯಾರಿಗೆ ಮತದಾರ ಆಶೀರ್ವಾದ ಮಾಡಿದ್ದಾನೆ ಎಂದು ತಿಳಿದು ಬರಲಿದೆ.

ಇದನ್ನು ಓದಿ: ದಲಿತ ಯುವಕನನ್ನು ಅಪಹರಿಸಿ ಬೆತ್ತಲೆಗೊಳಿಸಿ ಥಳಿತ: ಬಿಜೆಪಿ ಶಾಸಕಿಯ ಪುತ್ರನ ವಿರುದ್ಧ ಎಫ್‌ಐಆರ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...