2024ರ ಸಾರ್ವತ್ರಿಕ ಚುನಾವಣೆಗೆ ಏಳು ಹಂತಗಳ ಮತದಾನ ಕೊನೆಗೊಂಡಿದೆ. ಇಂಡಿಯಾ ಮೈತ್ರಿಕೂಟ ಕನಿಷ್ಠ 295 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೇಜ್ರಿವಾಲ್, ಅಖಿಲೇಶ್ ಯಾದವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಇಂಡಿಯಾ ಮೈತ್ರಿ ಪಕ್ಷಗಳ ನಾಯಕರ ಸಭೆಯ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿದ್ದು, ತಮ್ಮ ಲೆಕ್ಕಾಚಾರದ ಪ್ರಕಾರ ಪ್ರತಿಪಕ್ಷಗಳು 295 ಸ್ಥಾನಗಳನ್ನು ಗೆಲ್ಲಲಿವೆ ಎಂದು ಹೇಳಿದ್ದಾರೆ.
ಕೊನೆಯ ಹಂತದ ಮತದಾನದ ನಂತರ ಚುನಾವಣೆಯ ಕುರಿತು ಪರಾಮರ್ಶೆ ನಡೆಸಲು ಹಾಗೂ ಭವಿಷ್ಯದಲ್ಲಿನ ಕಾರ್ಯತಂತ್ರದ ಕುರಿತು ಚರ್ಚಿಸಲು ಇಂಡಿಯಾ ಮೈತ್ರಿಕೂಟದ ನಾಯಕರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದರು.
ಮತದಾನೋತ್ತರ ಸಮೀಕ್ಷೆಯ ಚರ್ಚೆಗಳಲ್ಲಿ ಭಾಗವಹಿಸುವುದಿಲ್ಲ ಎಂದು ಇಂಡಿಯಾ ಮೈತ್ರಿಕೂಟದ ಪ್ರಮುಖ ಪಕ್ಷವಾದ ಕಾಂಗ್ರೆಸ್ ಈ ಮೊದಲು ಘೋಷಿಸಿತ್ತು. ಇದೀಗ ನಿರ್ಣಯವನ್ನು ಬದಲಿಸಿದ್ದು, ಮತದಾನೋತ್ತರ ಸಮೀಕ್ಷೆಯ ಚರ್ಚೆಗಳಲ್ಲಿ ಭಾಗವಹಿಸುವುದಾಗಿ ಇಂಡಿಯಾ ಮೈತ್ರಿಕೂಟದ ನಾಯಕರು ಹೇಳಿದ್ದಾರೆ.
2024ರ ಲೋಕಸಭೆ ಚುನವಾಣೆಯ ಎಕ್ಸಿಟ್ ಪೋಲ್ ಫಲಿತಾಂಶಗಳು ಇಂದು ಹೊರಬರಲಿದೆ. ಆದರೆ ನೈಜ ಫಲಿತಾಂಶ ಜೂನ್ 4ರಂದು ಮತ ಎಣಿಕೆ ಬಳಿಕ ಬಹಿರಂಗವಾಗಲಿದೆ. ಲೋಕಸಭೆ ಚುನಾವಣೆಗೆ ಮೊದಲ ಹಂತದ ಮತದಾನ ಏಪ್ರಿಲ್ 19 ರಂದು ನಡೆದಿತ್ತು. ಏಳು ಹಂತಗಳಲ್ಲಿ ಒಟ್ಟು 543 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ.
ಲೋಕಸಭೆ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟ 295ಕ್ಕೂ ಅಧಿಕ ಸ್ಥಾನಗಳಲ್ಲಿ ಜಯ ಗಳಿಸಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಕೂಡ ಹೇಳಿದ್ದಾರೆ. ಎಲ್ಲೆಡೆಯಿಂದ ಬಂದ ಪ್ರತಿಕ್ರಿಯೆ ಆಧಾರದಲ್ಲಿ ‘ಇಂಡಿಯಾ’ ಮೈತ್ರಿಕೂಟ 295ಕ್ಕೂ ಅಧಿಕ ಸ್ಥಾನಗಳನ್ನು ಗಳಿಸಲಿದೆ ಎಂದು ನಾವು ನಂಬಿದ್ದೇವೆ. ಬಿಜೆಪಿ ಸುಮಾರು 220 ಸ್ಥಾನಗಳನ್ನು ಪಡೆಯಬಹುದು. ಎನ್‌ಡಿಎ ಒಟ್ಟಾರೆಯಾಗಿ 235 ಸ್ಥಾನಗಳನ್ನು ಗಳಿಸಬಹುದು. ಕೇಂದ್ರದಲ್ಲಿ ಬಲಿಷ್ಠ ಸರ್ಕಾರ ರಚಿಸಲು ‘ಇಂಡಿಯಾ’ ಮೈತ್ರಿಕೂಟ ಒಗ್ಗಟ್ಟಾಗಿ ಮುನ್ನಡೆಯುತ್ತಿದೆ’ ಎಂದು ಹೇಳಿದ್ದಾರೆ.
ಉತ್ತರಪ್ರದೇಶದಲ್ಲಿ ಬಿಜೆಪಿಯ ಎಲ್ಲಾ ಸ್ಥಾನಗಳನ್ನು ಕಳೆದುಕೊಳ್ಳುತ್ತದೆ ಮತ್ತು ‘ಇಂಡಿಯಾ’ ಮೈತ್ರಿಕೂಟವು ಹೆಚ್ಚು ಸ್ಥಾನಗಳಲ್ಲಿ ಗೆಲ್ಲುತ್ತದೆ ಎಂದು ಎಸ್‌ಪಿ ನಾಯಕ ಅಖಿಲೇಶ್ ಯಾದವ್ ಕೂಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ: ಎಕ್ಸಿಟ್ ಪೋಲ್‌ಗಳ ಫಲಿತಾಂಶ 2014, 2019ರಲ್ಲಿ ಎಷ್ಟು ನಿಖರವಾಗಿವೆ?



THIS DAY DREAMING OF MALLIKARJUN KHARGE OF FORMING GOVERNMENT WITH 295 SEATS FOR I.N.N.D.I.A GANG BOUND TO FAIL AS IT CAN HARDLY GARNER 98 SEATS CONGRESS CONTRIBUTION OF 47 . SO KHARGE CAN BE AWARDED THE CROWN OF MODERN DAY SHAIK MOHAMMED.