Homeಕರ್ನಾಟಕಲೈಂಗಿಕ ದೌರ್ಜನ್ಯ ಪ್ರಕರಣ: ಎಸ್‌ಐಟಿ ತನಿಖೆಗೆ ಸಹಕರಿಸದ ಪ್ರಜ್ವಲ್‌ ರೇವಣ್ಣ

ಲೈಂಗಿಕ ದೌರ್ಜನ್ಯ ಪ್ರಕರಣ: ಎಸ್‌ಐಟಿ ತನಿಖೆಗೆ ಸಹಕರಿಸದ ಪ್ರಜ್ವಲ್‌ ರೇವಣ್ಣ

- Advertisement -
- Advertisement -

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಹಾಸನದ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ತನಿಖೆಗೆ ಸಹಕರಿಸುತ್ತಿಲ್ಲ ಎಂದು ಮೂಲಗಳು ತಿಳಿಸಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಇಂದು ಅಥವಾ ಸೋಮವಾರ ಕ್ರೈಂ ಸ್ಪಾಟ್‌ನಲ್ಲಿ ವಿಚಾರಣೆ ನಡೆಸಲು ಮುಂದಾಗಿದೆ.

ಹಾಸನ ಜಿಲ್ಲೆಯ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣಗೆ ಮೇ 31ರಂದು ಜರ್ಮನಿಯ ಮ್ಯೂನಿಚ್‌ನಿಂದ  ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ನಂತರ ಬಂಧಿಸಲಾಯಿತು. ಲೈಂಗಿಕ ದೌರ್ಜನ್ಯದ ವಿಡಿಯೋ ವೈರಲ್‌ ಬಳಿಕ ಅವರು ಏಪ್ರಿಲ್‌ನಲ್ಲಿ ದೇಶದಿಂದ ಪರಾರಿಯಾಗಿದ್ದರು.

ಸತತ ಎರಡು ದಿನಗಳ ಕಾಲ ಎಸ್‌ಐಟಿಯ ಪ್ರಶ್ನೆಗಳಿಗೆ ಪ್ರಜ್ವಲ್‌ ರೇವಣ್ಣ ನುಣುಚಿಕೊಳ್ಳುವ ಉತ್ತರ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಪ್ರಕರಣವು ತನ್ನ ವಿರುದ್ಧದ ಷಡ್ಯಂತ್ರವಾಗಿದ್ದು, ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ. ನಿಮ್ಮ ತಾಯಿ ಇಲ್ಲದ ಸಂದರ್ಭದಲ್ಲಿ ಹೊಳೆನರಸೀಪುರದಲ್ಲಿರುವ ಮನೆಗೆ ಏಕೆ ಹೋಗಿದ್ದು? ಮನೆಯಲ್ಲಿ ಎಷ್ಟು ಮಂದಿ ಕೆಲಸಗಾರರು ಇದ್ದಾರೆ? ಎಂದು ಹಲವು ಪ್ರಶ್ನೆಗಳನ್ನು ಪ್ರಜ್ವಲ್ ರೇವಣ್ಣ ಅವರಿಗೆ ಎಸ್‌ಐಟಿ ತನಿಖಾಧಿಕಾರಿಗಳು ಕೇಳಿದ್ದು, ಕೆಲವು ಫೋಟೊಗಳನ್ನು ತೋರಿಸಿ ಇವರು ನಿಮಗೆ ಗೊತ್ತಾ? ಎಂದು ಕೇಳಿದಾಗ ಅದಕ್ಕೆ ಪ್ರಜ್ವಲ್ ರೇವಣ್ಣ ಅವರು ಗೊತ್ತಿಲ್ಲ, ಹಾಸನ ತೋಟದ ಮನೆಗಳಲ್ಲಿ ತುಂಬಾ ಜನ ಕೆಲಸದವರಿದ್ದಾರೆ. ಯಾರೆಂಬುದು ಗೊತ್ತಿಲ್ಲ. ಯಾರು ಎಂಬುದು ನೆನಪಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ. ಇದಲ್ಲದೆ ದೂರು ಕೊಟ್ಟವರು ಯಾರು? ನೀವು ಹೇಳುತ್ತಿರುವ ಮಹಿಳೆಯ ಪರಿಚಯವೇ ನನಗಿಲ್ಲ ಎಂದು ಪ್ರಜ್ವಲ್‌ ಹೇಳಿದ್ದಾರೆ. ಈ ಹಿನ್ನೆಲೆ ಹಾಸನ ಜಿಲ್ಲೆಯ ಹೊಳೆನರಸೀಪುರಕ್ಕೆ ಪ್ರಜ್ವಲ್ ರೇವಣ್ಣ ಅವರನ್ನು ಕರೆದುಕೊಂಡು ಹೋಗಿ ಎಸ್‌ಐಟಿ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಯ ಮತ ಎಣಿಕೆಗೆ ಮುನ್ನ ಕನಿಷ್ಠ ಸೋಮವಾರದೊಳಗೆ ಸ್ಥಳ ಪರಿಶೀಲನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ತನಿಖಾ ತಂಡ ಮುಂದಾಗಿದೆ. ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರಿಗೆ ಎಸ್‌ಐಟಿ ನೋಟಿಸ್ ನೀಡಿದ್ದು, ಅವರು ವಿಚಾರಣೆಗೆ ಹಾಜರಾಗಿಲ್ಲ ಎಂದು ತಿಳಿದು ಬಂದಿದೆ.

ಇದನ್ನು ಓದಿ: ಲೋಕಸಭೆ ಚುನಾವಣೆ-2024: ಎಕ್ಸಿಟ್ ಪೋಲ್‌ನಲ್ಲಿ ಎನ್‌ಡಿಎಗೆ ಬಹುಮತ; ಇಲ್ಲಿದೆ ಚುನಾವಣೋತ್ತರ ಸಮೀಕ್ಷಾ ಫಲಿತಾಂಶಗಳ ವಿವರಗಳು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...