Homeಮುಖಪುಟಸಿಕ್ಕಿಂ ವಿಧಾನಸಭಾ ಚುನಾವಣೆ ಫಲಿತಾಂಶ: ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದ ಎಸ್‌ಕೆಎಂ

ಸಿಕ್ಕಿಂ ವಿಧಾನಸಭಾ ಚುನಾವಣೆ ಫಲಿತಾಂಶ: ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದ ಎಸ್‌ಕೆಎಂ

- Advertisement -
- Advertisement -

ಸಿಕ್ಕಿಂ ರಾಜ್ಯದ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಿದ್ದು, ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (ಎಸ್‌ಕೆಂ) ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಪಕ್ಷದ ಮುಖ್ಯಸ್ಥ ಪ್ರೇಮ್ ಸಿಂಗ್ ತಮಾಂಗ್ ಅವರು ಭಾನುವಾರ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಭಾರಿ ಗೆಲುವು ಸಾಧಿಸಿದ್ದು, ಎಸ್‌ಕೆಎಂ ಕಾರ್ಯಕರ್ತರು ಮತ್ತು ರಾಜ್ಯದ ಜನತೆಗೆ ಧನ್ಯವಾದ ಅರ್ಪಿಸಿದ್ದಾರೆ.

ಎಸ್‌ಕೆಎಂ ಕಾರ್ಯಕರ್ತರ ಶ್ರಮ ಮತ್ತು ಅವರ ಸರ್ಕಾರದ ಮೇಲೆ ಜನತೆ ಇಟ್ಟಿರುವ ನಂಬಿಕೆಯಿಂದ ಗೆಲುವು ಸಾಧ್ಯವಾಗಿದೆ ಎಂದರು.

ಎಸ್‌ಕೆಎಂ ಹಿಮಾಲಯ ರಾಜ್ಯದಲ್ಲಿ ಅಧಿಕಾರವನ್ನು ಉಳಿಸಿಕೊಂಡಿದೆ. ಇಲ್ಲಿಯವರೆಗೆ ವಿಧಾನಸಭೆಯ 31 ಸ್ಥಾನಗಳಲ್ಲಿ ಆಡಳಿತ ಪಕ್ಷ 26 ಸ್ಥಾನಗಳನ್ನು ಗೆದ್ದಿದೆ. ಉಳಿದ ಐದು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಗೆಲುವಿಗಾಗಿ ತಮ್ಮ ಪಕ್ಷದ ಕಾರ್ಯಕರ್ತರಿಗೆ ಮುಖ್ಯಮಂತ್ರಿ ತಮಾಂಗ್ ಧನ್ಯವಾದ ತಿಳಿಸಿದ್ದಾರೆ.

“ಜನರ ಪ್ರೀತಿ ಮತ್ತು ವಿಶ್ವಾಸದಿಂದಾಗಿ ನಾವು ಕಳೆದ ಐದು ವರ್ಷಗಳಲ್ಲಿ ಸರ್ಕಾರವನ್ನು ಭದ್ರಪಡಿಸುವಲ್ಲಿ ಯಶಸ್ವಿಯಾಗಿದ್ದೇವೆ. ಜೊತೆಗೆ, ಪಕ್ಷದ ಕಾರ್ಯಕರ್ತರು ತುಂಬಾ ಶ್ರಮಿಸಿದ್ದಾರೆ. ಈಗ ನಾವು ಮುಂದಿನ ಐದು ವರ್ಷಗಳಲ್ಲಿ ನಮ್ಮ 100 ಪ್ರತಿಶತವನ್ನು ಸಿಕ್ಕಿಂ ಜನರಿಗಾಗಿ ನೀಡುತ್ತೇವೆ” ಎಂದು ಅವರು ಗ್ಯಾಂಗ್ಟಾಕ್‌ನ ಪಾಲ್ಜೋರ್ ಸ್ಟೇಡಿಯಂನಲ್ಲಿ ನಡೆದ ಸಭೆಯಲ್ಲಿ ಹೇಳಿದರು.

ತಮಾಂಗ್ ಸಿಕ್ಕಿಂನ ರೆನಾಕ್ ಮತ್ತು ಸೊರೆಂಗ್-ಚಕುಂಗ್‌ನ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆದ್ದರು. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ, ಎಸ್‌ಕೆಂ 17 ಸ್ಥಾನಗಳನ್ನು ಗೆದ್ದು, 25 ವರ್ಷಗಳ ನಂತರ ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ ಪಕ್ಷವನ್ನು (ಎಸ್‌ಡಿಎಂ) ಅಧಿಕಾರದಿಂದ ಉರುಳಿಸಿತು. ಈ ಬಾರಿ, ಆಡಳಿತ ಪಕ್ಷವು ತನ್ನ ಹಿಂದಿನ ಕಾರ್ಯಕ್ಷಮತೆಯನ್ನು ಉತ್ತಮಗೊಳಿಸಿದೆ.

ಆದರೆ, ಎಸ್‌ಡಿಎಫ್ ಅಧ್ಯಕ್ಷ ಮತ್ತು ಮಾಜಿ ಸಿಎಂ ಪವನ್ ಚಾಮ್ಲಿಂಗ್ ಎರಡೂ ಸ್ಥಾನಗಳಿಂದ ಸೋತಿದ್ದಾರೆ.  ತಮಾಂಗ್ ಅವರ ಪತ್ನಿ ಕೃಷ್ಣ ಕುಮಾರಿ ರೈ ಕೂಡ ನಾಮ್ಚಿ-ಸಿಂಘಿತಂಗ್ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದಾರೆ. ಅವರು ಎಸ್‌ಡಿಎಫ್‌ನ ಬಿಮಲ್ ರೈ ಅವರನ್ನು 5000 ಮತಗಳಿಂದ ಸೋಲಿಸಿದರು.

ಎಸ್‌ಕೆಎಂ ಅಭ್ಯರ್ಥಿ 7,605 ಮತಗಳನ್ನು ಪಡೆದರೆ, ಅವರ ಎಸ್‌ಡಿಎಫ್ ಎದುರಾಳಿ 2,605 ಮತಗಳನ್ನು ಗಳಿಸಿದರು. ಮಹೇಶ್ ರೈ (ಸಿಎಪಿ-ಎಸ್) ಮತ್ತು ಅರುಣಾ ಮಾಂಗರ್ (ಬಿಜೆಪಿ) 136 ಮತ್ತು 233 ಮತಗಳನ್ನು ಪಡೆದರು. ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (ಎಸ್‌ಕೆಂ) ಸತತವಾಗಿ ಎರಡನೇ ಅವಧಿಗೆ ತನ್ನ ಸರ್ಕಾರವನ್ನು ರಚಿಸಲಿದೆ.

ಆರಂಭದಿಂದಲೂ ಸಿಕ್ಕಿಂ ಮುನ್ನಡೆ:

ವಿಧಾನಸಭಾ ಚುನಾವಣೆ ಮತ ಎಣಿಕೆಯ ಆರಂಭದಿಂದಲೂ ಆಡಳಿತಾರೂಢ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (ಎಸ್‌ಕೆಂ) ಮುನ್ನಡೆ ಕಾಯ್ದುಕೊಂಡಿತ್ತು. 32 ಸ್ಥಾನಗಳಲ್ಲಿ ಎಸ್‌ಕೆಎಂ 31 ಸ್ಥಾನಗಳನ್ನು ಗೆದ್ದಿದ್ದರೆ, ಸಿಕ್ಕಿಂ ಡೆಮಾಕ್ರಟಿಕ್ ಫ್ರಂಟ್ (ಎಸ್‌ಡಿಎಫ್) ಒಂದನ್ನು ಪಡೆದುಕೊಂಡಿದೆ. 2019 ರ ಚುನಾವಣೆಯಲ್ಲಿ ಎಸ್‌ಕೆಎಂ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದ್ದ ಭಾರತೀಯ ಜನತಾ ಪಕ್ಷವು ರಾಜ್ಯದಲ್ಲಿ ಯಾವುದೇ ಸ್ಥಾನಗಳಲ್ಲಿ ಮುನ್ನಡೆ ಸಾಧಿಸುತ್ತಿಲ್ಲ. ಸರ್ಕಾರ ರಚಿಸಲು ಪಕ್ಷ ಅಥವಾ ಮೈತ್ರಿಕೂಟ 16ರ ಗಡಿ ದಾಟಬೇಕಾಗುತ್ತದೆ.

ಸಿಕ್ಕಿಂನ ಹಾಲಿ ಮುಖ್ಯಮಂತ್ರಿ ಮತ್ತು ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (ಎಸ್‌ಕೆಎಂ) ನಾಯಕ ಪ್ರೇಮ್ ಸಿಂಗ್ ತಮಾಂಗ್ ಅವರು ರೆನಾಕ್ ಅಸೆಂಬ್ಲಿ ಸ್ಥಾನದಿಂದ ಚುನಾವಣೆಯಲ್ಲಿ ಗೆದ್ದಿದ್ದಾರೆ. ತಮಾಂಗ್ ಅವರು ಸೋಮ್ ನಾಥ್ ಪೌಡ್ಯಾಲ್ ಅವರನ್ನು 7,000 ಮತಗಳಿಂದ ಸೋಲಿಸಿದರು.

ಇದನ್ನೂ ಓದಿ; ‘ಇದು ಮೋದಿ ಸಮೀಕ್ಷೆ, ಎಕ್ಸಿಟ್ ಪೋಲ್ ಅಲ್ಲ’: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...