Homeಕರ್ನಾಟಕವಿಧಾನ ಪರಿಷತ್‌ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ವಿಧಾನ ಪರಿಷತ್‌ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

- Advertisement -
- Advertisement -

ಜೂನ್ 13 ರಂದು ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಕಾಂಗ್ರೆಸ್ 8 ಸ್ಥಾನಗಳಿಗೆ‌ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ, ಹಾಲಿ ಸಚಿವ ಎನ್.ಎಸ್.ಬೋಸರಾಜು, ಸಿಎಂ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ವಸಂತಕುಮಾರ್, ಜಗದೇವ್ ಗುತ್ತೇದಾರ್, ಐವನ್ ಡಿಸೋಜಾ ಮತ್ತು ಬಿಲ್ಕಿಸ್ ಬಾನೊ ಅವರನ್ನು ಕಾಂಗ್ರೆಸ್ ತನ್ನ​ ಅಭ್ಯರ್ಥಿಗಳನ್ನಾಗಿ ಘೋಷಿಸಿದೆ. ಜೊತೆಗೆ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಯುವ ಕಾಂಗ್ರೆಸ್ ಮಾಜಿ ನಾಯಕ ಬಸನಗೌಡ ಬಾದರ್ಲಿ ಅವರನ್ನು ಪಕ್ಷವು ಆಯ್ಕೆ ಮಾಡಿದೆ.

ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಇದೇ ಜೂನ್ 13ರಂದು ನಡೆಯಲಿರುವ ಚುನಾವಣೆಗೆ ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿತ್ತು. ಹಲವರು ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ಬಳಿ ಲಾಬಿ ನಡೆಸಿದ್ದರು. ಅಂತಿಮವಾಗಿ, ಕಾಂಗ್ರೆಸ್ ಹೈಕಮಾಂಡ್ ವರಿಷ್ಠರು ಏಳು ಜನರನ್ನು ಆಯ್ಕೆ ಮಾಡಿ ಪಟ್ಟಿ ಬಿಡುಗಡೆ ಮಾಡಿದೆ.

ಇಂದು ಬೆಳಗ್ಗೆಯೇ ಬಿಜೆಪಿ ಮೂರು ಸ್ಥಾನಗಳಿಗೆ ತನ್ನ ಅಭ್ಯರ್ಥಿ ಘೋಷಣೆ ಮಾಡಿತ್ತು. ಅದರ ಬೆನ್ನಲ್ಲೇ ಕಾಂಗ್ರೆಸ್‌ ಕೂಡ ಏಳು ಜನರ ಪಟಟಿ ಬಿಡುಗಡೆ ಮಾಡಿದೆ. ಸಂಖ್ಯಾಬಲದ ಮೇಲೆ ಒಟ್ಟು 11ರಲ್ಲಿ ಏಳು ಸ್ಥಾನಗಳು ಕಾಂಗ್ರೆಸ್​ಗೆ ಸಿಗಲಿದ್ದು, 7 ಸ್ಥಾನಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.

ಏಳು ಸ್ಥಾನಗಳಿಗೆ 30ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಪಕ್ಷದ ಹೈಕಮಾಂಡ್‌ ನಾಯಕರ ಜತೆಗೆ ಮಾತನಾಡಿ 7 ಜನರಿಗೆ ಜನರಿಗೆ ಮಣೆ ಹಾಕಿದೆ.

ಸಮುದಾಯಗಳ ಸಾಮಾಜಿಕ ನ್ಯಾಯ ಆಧಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಗೋವಿಂದರಾಜ್ ಅವರನ್ನೇ ಮತ್ತೊಂದು ಅವಧಿಗೆ ಮುಂದುವರಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರು ಹಾಗೂಒಕ್ಕಲಿಗ ಸಮುದಾಯದವರ ಗೋವಿಂದ ರಾಜ್‌ ಅವರಿಗೆ ಅವಕಾಶವನ್ನ ನೀಡಿದೆ. ಒಬಿಸಿ ಸಮುದಾಯದಿಂದ ಯತೀಂದ್ರ ಸಿದ್ದರಾಮಯ್ಯ, ಪರಿಶಿಷ್ಟ ಜಾತಿ ಸಮುದಾಯದಿಂದ ವಸಂತಕುಮಾರ್, ರೆಡ್ಡಿ ಸಮುದಾಯದಿಂದ ಹಾಲಿ ಸಚಿವ ಎನ್​ಎಸ್ ಬೋಸರಾಜು, ಜಗದೇವ್ ಗುತ್ತೇದಾರ್ ಅವರಿಗೆ ಮಣೆ ಹಾಕಿದೆ ಎನ್ನಲಾಗಿದೆ.

ಇದನ್ನೂ ಓದಿ; ವಿಧಾನ ಪರಿಷತ್‌ ಚುನಾವಣೆ: ಬಿಜೆಪಿಯಿಂದ ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...