Homeಕರ್ನಾಟಕವಿಧಾನಪರಿಷತ್​​ನ 6 ಸ್ಥಾನಗಳಿಗೆ ಇಂದು ಮತದಾನ

ವಿಧಾನಪರಿಷತ್​​ನ 6 ಸ್ಥಾನಗಳಿಗೆ ಇಂದು ಮತದಾನ

- Advertisement -
- Advertisement -

ವಿಧಾನಪರಿಷತ್‌ನ ಪದವೀಧರರು ಮತ್ತು ಶಿಕ್ಷಕರ ತಲಾ ಮೂರು ಕ್ಷೇತ್ರಗಳಿಗೆ ಇಂದು (ಜೂನ್‌ 3) ಮತದಾನ ನಡೆಯುತ್ತಿದೆ. ಒಟ್ಟು ಆರು ಕ್ಷೇತ್ರಗಳಿಗೆ 78 ಅಭ್ಯರ್ಥಿಗಳು ಕಣದಲ್ಲಿದ್ದು, 4.33 ಲಕ್ಷ ಮತದಾರರಿದ್ದಾರೆ.

ಈಶಾನ್ಯ, ನೈರುತ್ಯ ಮತ್ತು ಬೆಂಗಳೂರು ಪದವೀಧರರ ಕ್ಷೇತ್ರಗಳ ವ್ಯಾಪ್ತಿಯಲ್ಲಿ 16 ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ. ಪದವೀಧರ ಕ್ಷೇತ್ರಗಳಲ್ಲಿ ಒಟ್ಟು 3.63 ಲಕ್ಷ ಮತದಾರರಿದ್ದಾರೆ. ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಅತ್ಯಧಿಕ 1.56 ಲಕ್ಷ ಮತದಾರರಿದ್ದಾರೆ. ಒಟ್ಟು 16 ಜಿಲ್ಲೆಗಳಲ್ಲಿ 461 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಆಗ್ನೇಯ, ನೈರುತ್ಯ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳ ವ್ಯಾಪ್ತಿಯಲ್ಲಿ 15 ಜಿಲ್ಲೆಗಳಿವೆ. ಈ ಕ್ಷೇತ್ರಗಳಲ್ಲಿ ಒಟ್ಟು 70,260 ಮತದಾರರಿದ್ದಾರೆ. ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಅತ್ಯಧಿಕ 25,309 ಮತದಾರರಿದ್ದಾರೆ. ಈ ಕ್ಷೇತ್ರಗಳಲ್ಲಿ 170 ಮತಗಟ್ಟೆಗಳನ್ನು ತೆರೆಯಲಾಗಿದೆ.

ಪ್ರಾಶಸ್ತ್ಯದ ಮತ ಚಲಾವಣೆಗೆ ಅವಕಾಶ:

ವಿಧಾನಪರಿಷತ್‌ನ ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಪ್ರಾಶಸ್ತ್ಯದ ಮತ ಚಲಾವಣೆಗೆ ಅವಕಾಶವಿದೆ. ಮತಪತ್ರದ ಮೂಲಕ ಚುನಾವಣೆ ನಡೆಯಲಿದ್ದು, ಅಭ್ಯರ್ಥಿಗಳ ಹೆಸರಿನ ಮುಂದೆ ತಮ್ಮ ಆಯ್ಕೆಯ ಪ್ರಾಶಸ್ತ್ಯವನ್ನು ಸಂಖ್ಯೆಗಳಲ್ಲಿ ನಮೂದಿಸಬೇಕಾಗುತ್ತದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿರುವುದಾಗಿ ವರದಿಯಾಗಿದೆ.

ಪ್ರಮುಖ ಅಭ್ಯರ್ಥಿಗಳು

ದಕ್ಷಿಣ ಶಿಕ್ಷಕರ ಕ್ಷೇತ್ರ
ಕಾಂಗ್ರೆಸ್-ಮರಿತಿಬ್ಬೇಗೌಡ
ಜೆಡಿಎಸ್-ವಿವೇಕಾನಂದ

ನೈಋತ್ಯ ಶಿಕ್ಷಕರ ಕ್ಷೇತ್ರ
ಕಾಂಗ್ರೆಸ್-ಕೆ.ಕೆ.ಮಂಜುನಾಥ್
ಜೆಡಿಎಸ್‌-ಎಸ್‌.ಎಲ್‌ ಭೋಜೇಗೌಡ

ಆಗ್ನೇಯ ಶಿಕ್ಷಕರ ಕ್ಷೇತ್ರ
ಕಾಂಗ್ರೆಸ್- ಟಿ.ಡಿ ಶ್ರೀನಿವಾಸ್
ಬಿಜೆಪಿ-ವೈ.ಎ ನಾರಾಯಣಸ್ವಾಮಿ

ನೈಋತ್ಯ ಪದವೀಧರ ಕ್ಷೇತ್ರ

ಕಾಂಗ್ರೆಸ್- ಆಯನೂರು ಮಂಜುನಾಥ್
ಬಿಜೆಪಿ-ಡಾ. ಧನಂಜಯ ಸರ್ಜಿ

ಈಶಾನ್ಯ ಪದವೀಧರ ಕ್ಷೇತ್ರ
ಕಾಂಗ್ರೆಸ್- ಡಾ.ಚಂದ್ರಶೇಖರ ಪಾಟೀಲ್
ಬಿಜೆಪಿ- ಅಮರನಾಥ ಪಾಟೀಲ್

ಬೆಂಗಳೂರು ಪದವೀಧರ ಕ್ಷೇತ್ರ
ಕಾಂಗ್ರೆಸ್-ರಾಮೋಜಿ ಗೌಡ
ಬಿಜೆಪಿ-ಅ.ದೇವೇಗೌಡ

ನೈಋತ್ಯ ಪದವೀಧರ ಕ್ಷೇತ್ರ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಉಡುಪಿಯ ಮಾಜಿ ಶಾಸಕ ಕೆ. ರಘುಪತಿ ಭಟ್ ಕಣಕ್ಕಿಳಿದಿದ್ದಾರೆ. ಇವರನ್ನು ಬಿಜೆಪಿ ಇತ್ತೀಚೆಗೆ ಉಚ್ಚಾಟನೆ ಮಾಡಿದೆ. ಅಗ್ನೇಯ ಶಿಕ್ಷಕರ ಕ್ಷೇತ್ರದಿಂದ ರುಪ್ಸಾ ಸಂಘಟನೆ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಸ್ಪರ್ಧಿಸಿದ್ದಾರೆ.

ಇದನ್ನೂ ಓದಿ : ವಿಧಾನ ಪರಿಷತ್‌ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...