Homeಮುಖಪುಟಎಕ್ಸಿಟ್ ಪೋಲ್‌ಗಳೆಲ್ಲವೂ ಸುಳ್ಳು: ಪರಕಾಲ ಪ್ರಭಾಕರ್

ಎಕ್ಸಿಟ್ ಪೋಲ್‌ಗಳೆಲ್ಲವೂ ಸುಳ್ಳು: ಪರಕಾಲ ಪ್ರಭಾಕರ್

- Advertisement -
- Advertisement -

ಎಕ್ಸಿಟ್ ಪೋಲ್ ಫಲಿತಾಂಶಗಳನ್ನು ಟೀಕಿಸಿದ ರಾಜಕೀಯ ಅರ್ಥಶಾಸ್ತ್ರಜ್ಞ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಪತಿ ಪರಕಾಲ ಪ್ರಭಾಕರ್, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ನಿಲುವು ಇರುವುದರಿಂದ ಎಲ್ಲಾ ಎಕ್ಸಿಟ್ ಪೋಲ್‌ಗಳು ಸುಳ್ಳು ಎಂದು ಹೇಳಿದ್ದಾರೆ.

ಮಾಜಿ ಸಂಸದ ಮತ್ತು ಅವಿಭಜಿತ ಆಂಧ್ರಪ್ರದೇಶದ ಮಾಜಿ ಕೃಷಿ ಸಚಿವ ಶೋಬನಾದ್ರೀಶ್ವರ ರಾವ್ ಅವರು ಬರೆದಿರುವ ‘ಅವಿನೀತಿ ಚಕ್ರವರ್ತಿ ನರೇಂದ್ರ ಮೋದಿ’ ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಿದ ಪರಕಾಲ ಪ್ರಭಾಕರ್, ಮತ ಎಣಿಕೆ ಸಂದರ್ಭದಲ್ಲಿ ಎನ್‌ಡಿಎಗೆ ನೆರವಾಗುವ ಏಕೈಕ ಉದ್ದೇಶದಿಂದ ಸುಳ್ಳು ಭವಿಷ್ಯ ನುಡಿದಿದ್ದಾರೆ ಎಂದು ಹೇಳಿದ್ದಾರೆ.

ಕೇವಲ 10 ಲೋಕಸಭೆ ಕ್ಷೇತ್ರಗಳಿರುವ ರಾಜ್ಯದಲ್ಲಿ ಎನ್‌ಡಿಎಗೆ 13 ಸ್ಥಾನಗಳು ಎಂಬಂತಹ ಫಲಿತಾಂಶಗಳನ್ನು ನೀಡಿದ ಎಕ್ಸಿಟ್‌ ಪೋಲ್‌ ಲೋಪವನ್ನು ಎತ್ತಿ ತೋರಿಸಿದ ಪ್ರಭಾಕರ್, ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಟೀಕಿಸಿದ್ದಾರೆ.

ಚುನಾವಣೆ ಮುಗಿದಿರುವುದರಿಂದ ಯಾರೂ ನಿರಾಶರಾಗುವ ಅಗತ್ಯವಿಲ್ಲ. ಹೆಚ್ಚಿನ ನಿರ್ಗಮನ ಸಮೀಕ್ಷೆಗಳು ಬೋಗಸ್. ಎಕ್ಸಿಟ್ ಪೋಲ್‌ಗಳನ್ನು ಎನ್‌ಡಿಎ ನಡೆಸಿದೆ. ಎನ್‌ಡಿಎಯನ್ನು ಅಧಿಕಾರದಿಂದ ಕೆಳಗಿಳಿಸಲು ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಕೆಲಸ ಮಾಡಿದೆ ಎಂದು ಹೇಳಿದ್ದಾರೆ.

ಮತ ಎಣಿಕೆ ವೇಳೆಯಲ್ಲಿ ಅಕ್ರಮ ಮಾಡಲು ಎನ್‌ಡಿಎ ಶಕ್ತಿಮೀರಿ ಪ್ರಯತ್ನಿಸಲಿದೆ. ಅದರ ಭಾಗವಾಗಿಯೇ ಎನ್‌ಡಿಎ ಪರ ಧನಾತ್ಮಕ ಸಮೀಕ್ಷೆಗಳು ಬಂದಿದೆ. ಮತ ಎಣಿಕೆ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಜಾಗೃತರಾಗಿರಬೇಕು ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಯಾವತ್ತೂ ಸತ್ಯ ಹೇಳಿಲ್ಲ, ನಂಬುವ ಅಗತ್ಯವಿಲ್ಲ ಎಂದು ಶೋಬಾನಾದ್ರೀಶ್ವರರಾವ್ ಹೇಳಿದ್ದಾರೆ. ಕೃಷಿ ಕ್ಷೇತ್ರವನ್ನು ನಿರ್ನಾಮ ಮಾಡಲು ಮೋದಿ ಸಂಕಲ್ಪ ಮಾಡಿದ್ದಾರೆ. ಅವರನ್ನು ಸೋಲಿಸಬೇಕಾಗಿದೆ. ರೈತರ ಸಮಸ್ಯೆಗಳನ್ನು ಬಗೆಹರಿಸಬೇಕು. ಯುಪಿಎ ಸರಕಾರ ಎಡಪಕ್ಷಗಳ ಬೆಂಬಲದೊಂದಿಗೆ ಉದ್ಯೋಗ ಖಾತ್ರಿ, ಆಹಾರ ಭದ್ರತೆ ಕಾಯಿದೆಯಂತಹ ಹಲವು ಜನಸ್ನೇಹಿ ಕ್ರಮಗಳನ್ನು ಕೈಗೊಂಡಿತ್ತು ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯ 7ನೇ ಹಂತದ ಮತದಾನದ ಬೆನ್ನಲ್ಲೆ ಮಾಧ್ಯಮಗಳು ಎಕ್ಸಿಟ್‌ ಪೋಲ್‌ಗಳ ಫಲಿತಾಂಶವನ್ನು ಪ್ರಕಟಿಸಿತ್ತು, ಎಲ್ಲಾ ಎಕ್ಸಿಟ್‌ ಪೋಲ್‌ಗಳಲ್ಲೂ ಬಿಜೆಪಿ ನೇತೃತ್ವದ ಎನ್‌ಡಿಎ ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿತ್ತು. ಆದರೆ ಈ ಎಕ್ಸಿಟ್‌ ಪೋಲ್‌ಗಳನ್ನು ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟದ ನಾಯಕರು ತಿರಸ್ಕರಿಸಿದ್ದರು. ಮಾಧ್ಯಮಗಳ ಎಕ್ಸಿಟ್‌ ಪೋಲ್‌ಗಳನ್ನು ರಾಹುಲ್‌ ಗಾಂಧಿ ‘ಮೋದಿ ಪೋಲ್‌’ ಎಂದು ಕರೆದರೆ, ಎಕ್ಸಿಟ್‌ ಪೋಲ್‌ನ್ನು ಎರಡು ತಿಂಗಳ ಮೊದಲೇ ಮನೆಯಲ್ಲಿ ಕುಳಿತು ತಯಾರಿಸಲಾಗಿದೆ ಎಂದು ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

 ಇದನ್ನು ಓದಿ: ಇಸ್ರೇಲ್‌ ಪ್ರಜೆಗಳಿಗೆ ಪ್ರವೇಶ ನಿಷೇಧಿಸಿದ ಮಾಲ್ಡೀವ್ಸ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....