Homeಕರ್ನಾಟಕಲೋಕಸಭಾ ಚುನಾವಣೆ ಫಲಿತಾಂಶ 2024: ರಾಜ್ಯದ 28 ಕ್ಷೇತ್ರಗಳ ಅಂಚೆ ಮತ ಎಣಿಕೆಯಲ್ಲಿ ಬಿಜೆಪಿಗೆ ಅಲ್ಪ...

ಲೋಕಸಭಾ ಚುನಾವಣೆ ಫಲಿತಾಂಶ 2024: ರಾಜ್ಯದ 28 ಕ್ಷೇತ್ರಗಳ ಅಂಚೆ ಮತ ಎಣಿಕೆಯಲ್ಲಿ ಬಿಜೆಪಿಗೆ ಅಲ್ಪ ಮುನ್ನಡೆ

- Advertisement -
- Advertisement -

ಇಂದು ಬೆಳಗ್ಗೆ ಎಂಟು ಗಂಟೆ ಸುಮಾರಿಗೆ ಆರಂಭವಾದ ಅಂಚೆ ಮತಗಳ ಎಣಿಕೆಯಲ್ಲಿ ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಆರಂಭೀಕ ಮುನ್ನಡೆ ಸಾಧಿಸಿದೆ.

ಬೆಳಿಗ್ಗೆ 8 ಗಂಟೆಗೆ ಏಕಕಾಲಕ್ಕೆ ಆರಂಭವಾಗಿದ್ದು, ಮಧ್ಯಾಹ್ನ 1 ಗಂಟೆಯ ವೇಳೆಗೆ ಚುನಾವಣಾ ಫಲಿತಾಂಶದ ಸ್ಪಷ್ಟ ಚಿತ್ರಣ ದೊರಕಲಿದ್ದು, ಸಂಜೆಯೊಳಗೆ ಎಲ್ಲ ಕ್ಷೇತ್ರಗಳಲ್ಲೂ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.

ಲೋಕಸಭೆ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅಂಚೆ ಮತಗಳ ಎಣಿಕೆ ಪ್ರಕ್ರಿಯೆ ಮೊದಲಿಗೆ ನಡೆಯುತ್ತಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ಫಲಿತಾಂಶದ ಕುರಿತು ಅಂದಾಜು ಅಂಕಿ-ಅಂಶಗಳು ಬಹಿರಂಗವಾಗಲಿದೆ.

ಲೋಕಸಭೆ ಚುನಾವಣೆಗೆ ಅಂಚೆ ಮತಪತ್ರಗಳು ಮತ್ತು ಇವಿಎಂಗಳನ್ನು ಹೊಂದಿರುವ ಸ್ಟ್ರಾಂಗ್ ರೂಂಗಳನ್ನು ಚುನಾವಣಾ ವೀಕ್ಷಕರು, ಅಭ್ಯರ್ಥಿಗಳ ಚುನಾವಣಾ ಏಜೆಂಟರು ಮತ್ತು ಚುನಾವಣಾ ಅಧಿಕಾರಿಗಳ ಸಮ್ಮುಖದಲ್ಲಿ ತೆರೆಯಲಾಗಿದೆ. ರಾಜ್ಯದ ದಕ್ಷಿಣ ಕನ್ನಡ ಕ್ಷೇತ್ರ ಹಾಗೂ ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಅಂಚೆ ಮತಗಳ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅಂಚೆ ಮತ ಎಣಿಕೆಯಲ್ಲಿ ಕೋಟಾ ಶ್ರೀನಿವಾಸ್ ಪೂಜಾರಿ ಮುನ್ನಡೆ ಸಾಧಿಸಿದ್ದಾರೆ.

ದ.ಕ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಕೂಡ 188 ಮತಗಳ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿಗೆ ಹಿನ್ನಡೆಯಾಗಿದೆ.

ತುಮಕೂರು ಲೋಕಸಭಾ ಕ್ಷೇತ್ರದ ಅಂಚೆ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥೀ ವಿ. ಸೋಮಣ್ಣ ಅಲ್ಪ ಮುನ್ನಡೆ ಸಾಧಿಸಿದ್ದಾರೆ. ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇ. ತುಕರಾಮ್ ಅವರು ಆರಂಭಿಕ  ಮುನ್ನಡೆ ಸಾಧಿಸಿದ್ದಾರೆ. ಬೆಂಗಳೂರು ಉತ್ತರದಲ್ಲಿ ಶೋಭಾ ಕರಂದ್ಲಾಜೆ, ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಮಂಜುನಾಥ್, ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಜಾರಕಿಹೊಳಿ, ಮೈಸೂರಿನಲ್ಲಿ ಯಧುವೀರ್ ಒಡೆಯರ್ ಮುನ್ನಡೆ ಅರಂಭಿಕ ಮುನ್ನಡೆ ಸಾಧಿಸಿದ್ದಾರೆ.

ಇದನ್ನೂ ಓದಿ; ಲೋಕಸಭೆ ಫಲಿತಾಂಶ: ಅಂಚೆ ಮತಗಳ ಎಣಿಕೆ ಪ್ರಕ್ರಿಯೆ ಆರಂಭ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...