ಲೋಕಸಭೆ ಚುನಾವಣೆಯಲ್ಲಿ ದೇಶದ ಗಮನ ಸೆಳೆದ ಕ್ಷೇತ್ರಗಳಲ್ಲಿ ತಮಿಳುನಾಡಿನ ಕೊಯಮತ್ತೂರು ಕೂಡ ಒಂದು. ಇಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಸ್ಪರ್ಧಿಸಿರುವುದರಿಂದ ಚುನಾವಣಾ ಕಣ ರಂಗೇರಿದೆ.
ಮತ ಎಣಿಕೆಯ ಇತ್ತೀಚಿನ ಮಾಹಿತಿ ಪ್ರಕಾರ, ಅಣ್ಣಾಮಲೈ ಹಿನ್ನಡೆ ಅನುಭವಿಸಿದ್ದಾರೆ. ಅವರ ಪ್ರತಿಸ್ಪರ್ಧಿ ಡಿಎಂಕೆಯ ಗಣಪತಿ ರಾಜ್‌ಕುಮಾರ್ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಈ ಸುದ್ದಿ ಬರೆಯುವ ಹೊತ್ತಿಗೆ (11 ಗಂಟೆ) ಅಣ್ಣಾಮಲೈ 17,920 ಮತಗಳನ್ನು ಪಡೆದರೆ, ಡಿಎಂಕೆಯ ಗಣಪತಿ ರಾಜ್‌ಕುಮಾರ್‌ಗೆ 51,270 ಮತಗಳು ದೊರೆತಿವೆ. ಎಐಎಡಿಎಂಕೆ ಸಿಂಘೈ ಡಿ ರಾಮಚಂದ್ರನ್ 15,410 ಮತಗಳನ್ನು ಪಡೆದಿದ್ದಾರೆ.
2014 ರ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಎಐಎಡಿಎಂಕೆಯ ಪಿ ನಾಗರಾಜನ್ ಅವರು ಬಿಜೆಪಿಯ ಸಿಪಿ ರಾಧಾಕೃಷ್ಣನ್ ಅವರನ್ನು 40,000 ಕ್ಕೂ ಹೆಚ್ಚು ಮತಗಳಿಂದ ಸೋಲಿಸಿದ್ದರು.
2011ರ ಜನಗಣತಿಯ ಅಂಕಿ ಅಂಶಗಳ ಪ್ರಕಾರ, ಕೊಯಮತ್ತೂರು ಕ್ಷೇತ್ರದ ಒಟ್ಟು ಜನಸಂಖ್ಯೆ 2,18,5,424. ಈ ಪೈಕಿ 17.97% ಜನರು ಗ್ರಾಮೀಣ ಪ್ರದೇಶಗಳಲ್ಲಿ ಮತ್ತು 82.03% ಜನರು ನಗರ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ.
ಇದನ್ನೂ ಓದಿ : ತಿರುವಳ್ಳೂರು: ಇಂಡಿಯಾ ಮೈತ್ರಿಕೂಟದ ಶಶಿಕಾಂತ್ ಸೆಂಥಿಲ್‌ಗೆ ಭಾರೀ ಮುನ್ನಡೆ


