Homeಮುಖಪುಟಒಡಿಶಾ ವಿಧಾನಸಭೆ ಚುನಾವಣೆ: ಬಿಜೆಪಿಗೆ ಭಾರೀ ಮುನ್ನಡೆ

ಒಡಿಶಾ ವಿಧಾನಸಭೆ ಚುನಾವಣೆ: ಬಿಜೆಪಿಗೆ ಭಾರೀ ಮುನ್ನಡೆ

- Advertisement -
- Advertisement -

ಲೋಕಸಭೆ ಚುನಾವಣೆ ಹಿನ್ನೆಲೆ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಎನ್‌ಡಿಎ 293 ಕ್ಷೇತ್ರಗಳಲ್ಲಿ ಮತ್ತು ಇಂಡಿಯಾ ಮೈತ್ರಿಕೂಟ 223 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಇತರರು 27 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ.

ಒಡಿಶಾ ವಿಧಾನಸಭೆ ಚುನಾವಣೆಗೆ ಮತ ಎಣಿಕೆ ನಡೆಯುತ್ತಿದ್ದು, ಒಡಿಶಾದಲ್ಲಿ ಬಿಜೆಡಿ 51 ಕ್ಷೇತ್ರಗಳಲ್ಲಿ ಮತ್ತು  ಬಿಜೆಪಿ 74 ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್‌ 13 ಕ್ಷೇತ್ರಗಳಲ್ಲಿ ಮತ್ತು ಇತರರು ಮೂರು ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಒಡಿಶಾದಲ್ಲಿ ನವೀನ್‌ ಪಟ್ನಾಯಕ್‌ ನೇತೃತ್ವದ ಬಿಜೆಡಿಗೆ ಹಿನ್ನಡೆ ಕಂಡು ಬರುತ್ತಿದೆ.

ತಿರುವಳ್ಳೂರು ಕ್ಷೇತ್ರದಲ್ಲಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ, ದ.ಕನ್ನಡ ಮಾಜಿ ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ಭಾರೀ ಮುನ್ನಡೆಯನ್ನು ಸಾಧಿಸಿದ್ದಾರೆ. ಶಶಿಕಾಂತ್‌ ಸೆಂಥಿಲ್‌ ಡಿಎಂಡಿಕೆಯ ನಲ್ಲತಂಬಿ ವಿರುದ್ಧ  42,000ಕ್ಕೂ ಅಧಿಕ ಮತಗಳ ಭಾರೀ ಮುನ್ನಡೆಯನ್ನು ಸಾಧಿಸಿದ್ದಾರೆ.

ಬಿಜೆಪಿ ದೇಶದಲ್ಲಿ ಒಟ್ಟು 243 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದು, ಕಾಂಗ್ರೆಸ್‌ ಏಕಾಂಗಿಯಾಗಿ 100 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಎನ್‌ಡಿಎ ಮೈತ್ರಿ ಪಕ್ಷಗಳಾದ ಟಿಡಿಪಿ 15 ಕ್ಷೇತ್ರಗಳಲ್ಲಿ ಮತ್ತು ಶಿವಸೇನೆ(ಏಕನಾಥ್‌ ಬಣ) ಜೆಡಿಯು 7 ಕ್ಷೇತ್ರಗಳಲ್ಲಿ ಎಲ್‌ಜೆಪಿ 5 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ.

ಕಾಂಗ್ರೆಸ್‌ ಏಕಾಂಗಿಯಾಗಿ 101 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಎಸ್ಪಿ 33 ಕ್ಷೇತ್ರಗಳಲ್ಲಿ, ಟಿಎಂಸಿ 21 ಕ್ಷೇತ್ರಗಳಲ್ಲಿ ಡಿಎಂಕೆ 20 ಕ್ಷೇತ್ರಗಳಲ್ಲಿ  ಶಿವಸೇನೆ ಉದ್ಧವ್ ಬಣ 8 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ.

ಅಮೇಥಿಯಲ್ಲಿ ಬಿಜೆಪಿ ನಾಯಕಿ, ಕೇಂದ್ರ ಸಚಿವ ಸ್ಮೃತಿ ಇರಾನಿಗೆ ಹಿನ್ನಡೆಯಾಗಿದ್ದು, ಕಾಂಗ್ರೆಸ್‌ ಅಭ್ಯರ್ಥಿ  ಕಿಶೋರ್‌ ಲಾಲ್‌ ಮುನ್ನಡೆಯನ್ನು ಸಾಧಿಸಿದ್ದಾರೆ.  ಹೈದ್ರಾಬಾದ್‌ ಸೆಂಟ್ರಲ್‌ನಲ್ಲಿ ಮಾಧವಿ ಲತಾಗೆ ಭಾರೀ ಹಿನ್ನಡೆಯಾಗಿದ್ದು, ಅಸಾದುದ್ದೀನ್ ಒವೈಸಿ ಮುನ್ನಡೆಯನ್ನು ಸಾಧಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...