Homeಮುಖಪುಟಮಣಿಪುರದ ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಮುನ್ನಡೆ: ನಾಗಾಲ್ಯಾಂಡ್‌, ಪುದುಚೇರಿ, ಅಂಡೋಮಾನ್‌ ನಿಕೋಬರ್‌ನಲ್ಲಿ ಕೈ ಅಭ್ಯರ್ಥಿಗಳಿಗೆ ಮುನ್ನಡೆ

ಮಣಿಪುರದ ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಮುನ್ನಡೆ: ನಾಗಾಲ್ಯಾಂಡ್‌, ಪುದುಚೇರಿ, ಅಂಡೋಮಾನ್‌ ನಿಕೋಬರ್‌ನಲ್ಲಿ ಕೈ ಅಭ್ಯರ್ಥಿಗಳಿಗೆ ಮುನ್ನಡೆ

- Advertisement -
- Advertisement -

ಲೋಕಸಭೆ ಚುನಾವಣೆ ಹಿನ್ನೆಲೆ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಎನ್‌ಡಿಎ 297 ಕ್ಷೇತ್ರಗಳಲ್ಲಿ ಮತ್ತು ಇಂಡಿಯಾ ಮೈತ್ರಿಕೂಟ 228 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಇತರರು 19 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ.

ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪದಲ್ಲಿ ಕಾಂಗ್ರೆಸ್‌ ಮುನ್ನಡೆಯನ್ನು ಸಾಧಿಸಿದೆ. ಮಿಝರೋಂನ 1 ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಮುನ್ನಡೆಯನ್ನು ಸಾಧಿಸಿದ್ದಾರೆ.  ನಾಗಲ್ಯಾಂಡ್ನ 1 ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆಯನ್ನು ಸಾಧಿಸಿದೆ. ಪುದುಚೇರಿಯ 1 ಕ್ಷೇತ್ರದಲ್ಲಿ ಕಾಂಗ್ರೆಸ್‌  ಮುನ್ನಡೆಯನ್ನು ಸಾಧಿಸಿದೆ. ಸಿಕ್ಕಿಂನ ಒಂದು ಕ್ಷೇತ್ರದಲ್ಲಿ ಎಸ್‌ಕೆಎಂ ಮುನ್ನಡೆಯನ್ನು ಸಾಧಿಸಿದೆ. ಅಂಡಮಾನ್‌ ನಿಕೋಬರ್‌ ದ್ವೀಪದ 1 ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುನ್ನಡೆಯನ್ನು ಸಾಧಿಸಿದೆ.  ಮಣಿಪುರ ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಮುನ್ನಡೆಯನ್ನು ಸಾಧಿಸಿದೆ. ಮೇಘಾಲಯದಲ್ಲಿ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್ ಇನ್ನೊಂದು ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಮುನ್ನಡೆಯನ್ನು ಸಾಧಿಸಿದ್ದಾರೆ. ಗೋವಾದ ಎರಡು ಕ್ಷೇತ್ರದಲ್ಲಿ ಒಂದು ಕ್ಷೇತ್ರದಲ್ಲಿ ಕಾಂಗ್ರೆಸ್‌ ಇನ್ನೊಂದು ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆಯನ್ನು ಸಾಧಿಸಿದೆ. ದಾದ್ರಾ ಮತ್ತು ನಾಗರ್‌ ಅವೇಲಿಯಲ್ಲಿ ಎರಡು ಕ್ಷೇತ್ರದಲ್ಲಿ ಬಿಜೆಪಿ ಒಂದು ಕ್ಷೇತ್ರದಲ್ಲಿ ಮತ್ತು ಪಕ್ಷೇತರ ಅಭ್ಯರ್ಥಿ ಇನ್ನೊಂದು ಕ್ಷೇತ್ರದಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ.

ಒಡಿಶಾ ವಿಧಾನಸಭೆ ಚುನಾವಣೆಗೆ ಮತ ಎಣಿಕೆ ನಡೆಯುತ್ತಿದ್ದು, ಒಡಿಶಾದಲ್ಲಿ ಬಿಜೆಡಿ 51 ಕ್ಷೇತ್ರಗಳಲ್ಲಿ ಮತ್ತು  ಬಿಜೆಪಿ 74 ಕ್ಷೇತ್ರಗಳಲ್ಲಿ ಮತ್ತು ಕಾಂಗ್ರೆಸ್‌ 13 ಕ್ಷೇತ್ರಗಳಲ್ಲಿ ಮತ್ತು ಇತರರು ಮೂರು ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದಾರೆ. ಒಡಿಶಾದಲ್ಲಿ ನವೀನ್‌ ಪಟ್ನಾಯಕ್‌ ನೇತೃತ್ವದ ಬಿಜೆಡಿಗೆ ಹಿನ್ನಡೆ ಕಂಡು ಬರುತ್ತಿದೆ.

ತಿರುವಳ್ಳೂರು ಕ್ಷೇತ್ರದಲ್ಲಿ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ, ದ.ಕನ್ನಡ ಮಾಜಿ ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ಭಾರೀ ಮುನ್ನಡೆಯನ್ನು ಸಾಧಿಸಿದ್ದಾರೆ. ಶಶಿಕಾಂತ್‌ ಸೆಂಥಿಲ್‌ ಡಿಎಂಡಿಕೆಯ ನಲ್ಲತಂಬಿ ವಿರುದ್ಧ  42,000ಕ್ಕೂ ಅಧಿಕ ಮತಗಳ ಭಾರೀ ಮುನ್ನಡೆಯನ್ನು ಸಾಧಿಸಿದ್ದಾರೆ.

ಬಿಜೆಪಿ ದೇಶದಲ್ಲಿ ಒಟ್ಟು 243 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದ್ದು, ಕಾಂಗ್ರೆಸ್‌ ಏಕಾಂಗಿಯಾಗಿ 100 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಎನ್‌ಡಿಎ ಮೈತ್ರಿ ಪಕ್ಷಗಳಾದ ಟಿಡಿಪಿ 15 ಕ್ಷೇತ್ರಗಳಲ್ಲಿ ಮತ್ತು ಶಿವಸೇನೆ(ಏಕನಾಥ್‌ ಬಣ) ಜೆಡಿಯು 7 ಕ್ಷೇತ್ರಗಳಲ್ಲಿ ಎಲ್‌ಜೆಪಿ 5 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ.

ಕಾಂಗ್ರೆಸ್‌ ಏಕಾಂಗಿಯಾಗಿ 101 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ. ಎಸ್ಪಿ 33 ಕ್ಷೇತ್ರಗಳಲ್ಲಿ, ಟಿಎಂಸಿ 21 ಕ್ಷೇತ್ರಗಳಲ್ಲಿ ಡಿಎಂಕೆ 20 ಕ್ಷೇತ್ರಗಳಲ್ಲಿ  ಶಿವಸೇನೆ ಉದ್ಧವ್ ಬಣ 8 ಕ್ಷೇತ್ರಗಳಲ್ಲಿ ಮುನ್ನಡೆಯನ್ನು ಸಾಧಿಸಿದೆ.

ಅಮೇಥಿಯಲ್ಲಿ ಬಿಜೆಪಿ ನಾಯಕಿ, ಕೇಂದ್ರ ಸಚಿವ ಸ್ಮೃತಿ ಇರಾನಿಗೆ ಹಿನ್ನಡೆಯಾಗಿದ್ದು, ಕಾಂಗ್ರೆಸ್‌ ಅಭ್ಯರ್ಥಿ  ಕಿಶೋರ್‌ ಲಾಲ್‌ ಮುನ್ನಡೆಯನ್ನು ಸಾಧಿಸಿದ್ದಾರೆ.  ಹೈದ್ರಾಬಾದ್‌ ಸೆಂಟ್ರಲ್‌ನಲ್ಲಿ ಮಾಧವಿ ಲತಾಗೆ ಭಾರೀ ಹಿನ್ನಡೆಯಾಗಿದ್ದು, ಅಸಾದುದ್ದೀನ್ ಒವೈಸಿ ಮುನ್ನಡೆಯನ್ನು ಸಾಧಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...