Homeಮುಖಪುಟ2024ರ ಜನಾದೇಶ: ಹುಸಿಯಾದ ಚುನಾವಣೋತ್ತರ ಸಮೀಕ್ಷೆ

2024ರ ಜನಾದೇಶ: ಹುಸಿಯಾದ ಚುನಾವಣೋತ್ತರ ಸಮೀಕ್ಷೆ

- Advertisement -
- Advertisement -

ಲೋಕಸಭಾ ಚುನಾವಣೆ ಸಂಫೂರ್ಣ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 293 ಸ್ಥಾನಗಳನ್ನು, ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟವು 233 ಸ್ಥಾನಗಳನ್ನು ಮತ್ತು ಇತರರು 17 ಸ್ಥಾನಗಳಲ್ಲಿ ಗೆಲುವನ್ನು ಸಾಧಿಸಿದ್ದಾರೆ. ಎನ್‌ಡಿಎಗೆ ಸರಕಾರ ರಚನೆಗೆ ಬಹುಮತ ಸಿಕ್ಕಿದ್ದರೂ ಬಿಜೆಪಿಯ ವಿಜಯದ ನಾಗಲೋಟಕ್ಕೆ ಇಂಡಿಯಾ ಮೈತ್ರಿಕೂಟ ಬ್ರೇಕ್‌ ಹಾಕಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 303 ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ಸಂಪೂರ್ಣ ಬಹುಮತದ ಸರಕಾರವನ್ನು ರಚಿಸಿತ್ತು. ಈ ಬಾರಿ ಬಿಜೆಪಿ ಮತ್ತು ಎನ್‌ಡಿಎ 350ಕ್ಕೂ ಅಧಿಕ ದಾಖಲೆಯ ಅಂಕಿಯನ್ನು ದಾಟಲಿದೆ ಎಂದು ಬಹುತೇಕ ಮತಗಟ್ಟೆ ಸಮೀಕ್ಷೆಗಳು ಹೇಳಿದ್ದವು. ಆದರೆ ಜನಾದೇಶದ ಅಂತಿಮ ಫಲಿತಾಂಶವು ಇದೀಗ ಎಲ್ಲವೂ ತಲೆಕೆಳಗಾಗಿರುವುದನ್ನು ಸೂಚಿಸಿದೆ.

2019ರ  ಲೋಕಸಭೆ ಚುನಾವಣೆಯ ಫಲಿತಾಂಶಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಬಿಜೆಪಿ 63 ಸ್ಥಾನಗಳನ್ನು ಕಳೆದುಕೊಂಡಿದೆ. ಕಾಂಗ್ರೆಸ್‌ ಈ ಬಾರಿ 99 ಸ್ಥಾನಗಳನ್ನು ಪಡೆದುಕೊಂಡಿದ್ದು, 2019ರಲ್ಲಿ ಕಾಂಗ್ರೆಸ್‌ ಬರೀ 52 ಸ್ಥಾನಗಳನ್ನು ಪಡೆದುಕೊಂಡಿತ್ತು, ಈ ಬಾರಿ 47 ಸ್ಥಾನಗಳು ಕಾಂಗ್ರೆಸ್‌ಗೆ ಹೆಚ್ಚಳವಾಗಿದೆ. ಇದಲ್ಲದೆ 80 ಕ್ಷೇತ್ರಗಳಿರುವ ಅತಿದೊಡ್ಡ ರಾಜ್ಯ ಉತ್ತರಪ್ರದೇಶದಲ್ಲಿ ಬಿಜೆಪಿಗೆ 50 ಸ್ಥಾನಗಳು ಸಿಗುತ್ತದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿದ್ದವು, ಈ ಫಲಿತಾಂಶಗಳು ಉಲ್ಟಾ ಹೊಡೆದಿದ್ದು, ಬಿಜೆಪಿಗೆ ಉತ್ತರಪ್ರದೇಶದಲ್ಲಿ ಬಹುದೊಡ್ಡ ಹೊಡೆತ ಬಿದ್ದಿದೆ. ಉತ್ತರಪ್ರದೇಶದಲ್ಲಿ 43 ಸ್ಥಾನಗಳಲ್ಲಿ ಇಂಡಿಯಾ ಮೈತ್ರಿ ಕೂಟ ಮತ್ತು 33 ಸ್ಥಾನಗಳಲ್ಲಿ ಬಿಜೆಪಿ ಗೆಲುವನ್ನು ಸಾಧಿಸಿದೆ.

ಆ್ಯಕ್ಸಿಸ್ ಮೈ ಇಂಡಿಯಾ ಸಮೀಕ್ಷೆ ಎನ್‌ಡಿಎಗೆ 361ರಿಂದ 401 ಸ್ಥಾನಗಳು ಬರಲಿದೆ. ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಏರಲಿದ್ದಾರೆ ಎಂದು ಹೇಳಿದ್ದರು. ಆದರೆ, ಜೂನ್ 4ರಂದು AXIS MY INDIA ನಿರ್ದೇಶಕ ಪ್ರದೀಪ್ ಗುಪ್ತಾ ಅವರು ನುಡಿದಿದ್ದ ಭವಿಷ್ಯ ಸುಳ್ಳಾಗಿದೆ. ಇದರಿಂದಾಗಿ ಇಂಡಿಯಾ ಟುಡೇ ಚಾನೆಲ್‌ನ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಜೊತೆಗೆ ಚರ್ಚೆ ನಡೆಸುತ್ತಿದ್ದಾಗ ಪ್ರದೀಪ್ ಗುಪ್ತಾ ಕಣ್ಣೀರು ಹಾಕಿರುವುದನ್ನು ಗಮನಿಸಬಹುದಾಗಿದೆ.

2024ರ ಚುನವಾಣೆಯ ಎಕ್ಸಿಟ್ ಪೋಲ್‌ ಫಲಿತಾಂಶದಲ್ಲಿ  ರಿಪಬ್ಲಿಕ್ ಭಾರತ್- ಪಿ ಮಾರ್ಕ್ ಎನ್‌ಡಿಎಗೆ 359 ಸ್ಥಾನಗಳು, ಇಂಡಿಯಾ ನ್ಯೂಸ್- ಡಿ-ಡೈನಾಮಿಕ್ಸ್ 371 ಸ್ಥಾನಗಳು, ರಿಪಬ್ಲಿಕ್ ಭಾರತ್ ಮ್ಯಾಟ್ರಿಜ್ 353-368 ಸ್ಥಾನಗಳು, ಟಿವಿ 5 ತೆಲುಗು -359 ಸ್ಥಾನಗಳು, ಜನ್‌ ಕೀ ಬಾತ್‌-362-392 ಸ್ಥಾನಗಳು, ಎನ್‌ಡಿಟಿವಿ ಸಮೀಕ್ಷೆ-365 ಸ್ಥಾನಗಳು, ಲೋಕ್‌ ಪೋಲ್‌-325 ರಿಂದ 333,  ನ್ಯೂಸ್ ನೇಷನ್-342-378 ಸ್ಥಾನಗಳನ್ನು ಎನ್‌ಡಿಎ ಮೈತ್ರಿಕೂಟಕ್ಕೆ ನೀಡಿತ್ತು. ಎಕ್ಸಿಟ್‌ ಪೋಲ್‌ ಫಲಿತಾಂಶಗಳಲ್ಲಿ ಇಂಡಿಯಾ ಮೈತ್ರಿಕೂಟವು 155ರ ಗಡಿ ದಾಟುವುದನ್ನು ಯಾವ ಮಾಧ್ಯಮ ಸಮೀಕ್ಷೆಗಳು ಕೂಡ ಹೇಳಿಲ್ಲ. ರಿಪಬ್ಲಿಕ್ ಭಾರತ್- ಪಿ ಮಾರ್ಕ್ ಸಮೀಕ್ಷೆಯಲ್ಲಿ ಇಂಡಿಯಾ ಮೈತ್ರಿಕೂಟಕ್ಕೆ 154 ಸ್ಥಾನಗಳು, ಇಂಡಿಯಾ ನ್ಯೂಸ್- ಡಿ-ಡೈನಾಮಿಕ್ಸ್ 125 ಸ್ಥಾನಗಳು, ರಿಪಬ್ಲಿಕ್ ಭಾರತ್- ಮ್ಯಾಟ್ರಿಜ್ -118ರಿಂದ 113 ಸ್ಥಾನಗಳು, ಟಿವಿ 5 ತೆಲುಗು- 154 ಸ್ಥಾನಗಳು, ಜನ್‌ ಕೀ ಬಾತ್‌-141ರಿಂದ 161 ಸ್ಥಾನಗಳು, ಎನ್‌ಡಿಟಿವಿ ಸಮೀಕ್ಷೆ-142 ಸ್ಥಾನಗಳು, ಲೋಕ್‌ ಪೋಲ್‌-155 ರಿಂದ 165, ನ್ಯೂಸ್ ನೇಷನ್-ಇಂಡಿಯಾ 153 ಸ್ಥಾನಗಳನ್ನು ಇಂಡಿಯಾ ಮೈತ್ರಿಕೂಟಕ್ಕೆ ನೀಡಿತ್ತು. ಆದರೆ ಈ ಫಲಿತಾಂಶಗಳೆಲ್ಲ ಇದೀಗ ಹುಸಿಯಾಗಿದೆ. ಎಕ್ಸಿಟ್‌ ಪೋಲ್‌ಗಳ ಪಾರದರ್ಶಕತೆಯ ಬಗ್ಗೆ ಪ್ರಶ್ನೆ ಮೂಡಿದೆ.

ಇದನ್ನು ಓದಿ: ಲೋಕಸಭೆ ಫಲಿತಾಂಶ: ಅಮೇಥಿಯಲ್ಲಿ ಸ್ಮೃತಿ ಇರಾನಿಗೆ ಹೀನಾಯ ಸೋಲು

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...