Homeಮುಖಪುಟಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಪ್ರದರ್ಶನ: ಡಿಸಿಎಂ ಸ್ಥಾನದಿಂದ ಕೆಳಗಿಳಿಯಲು ಮುಂದಾದ ಪಡ್ನಾವೀಸ್‌

ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಪ್ರದರ್ಶನ: ಡಿಸಿಎಂ ಸ್ಥಾನದಿಂದ ಕೆಳಗಿಳಿಯಲು ಮುಂದಾದ ಪಡ್ನಾವೀಸ್‌

- Advertisement -
- Advertisement -

ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಪ್ರದರ್ಶನದ ಹಿನ್ನೆಲೆ ನೈತಿಕ ಹೊಣೆಯನ್ನು ಹೊತ್ತ ಡಿಸಿಎಂ ದೇವೇಂದ್ರ ಪಡ್ನಾವೀಸ್‌ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಲು ಮುಂದಾಗಿದ್ದಾರೆ.

ನಾನು ಹೈಕಮಾಂಡ್‌ನ ಯಾವುದೇ ನಿರ್ಧಾರಕ್ಕೆ ಬದ್ಧ, ನನ್ನನ್ನು ಸರ್ಕಾರದ ಜವಾಬ್ದಾರಿಯಿಂದ ಮುಕ್ತಗೊಳಿಸುವಂತೆ ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡುತ್ತಿದ್ದೇನೆ. ಮುಂಬರುವ ಚುನಾವಣೆಯಲ್ಲಿ ಪಕ್ಷಕ್ಕಾಗಿ ಶ್ರಮಿಸಲು ನನಗೆ ಅದು ಸಹಾಯ ಮಾಡಲಿದೆ ಎಂದು ಹೇಳಿದ್ದಾರೆ.

ಮಹರಾಷ್ಟ್ರದಲ್ಲಿ ಏಕನಾಥ್‌ ಶಿಂಧೆ ನೇತೃತ್ವದ ಶಿವಸೇನೆ, ಬಿಜೆಪಿ, ಅಜಿತ್‌ ಪವಾರ್‌ ನೇತೃತ್ವದ ಸಮ್ಮಿಶ್ರ ಸರಕಾರವಿದೆ. ಆದರೆ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟವು ಕಳಪೆ ಪದರ್ಶನವನ್ನು ಮಾಡಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ 23 ಸ್ಥಾನಗಳನ್ನು ಗಳಿಸಿದ್ದ ಬಿಜೆಪಿ ಈ ಬಾರಿ  ರಾಜ್ಯದಲ್ಲಿ ಕೇವಲ 9 ಸ್ಥಾನಗಳಲ್ಲಿ ಮಾತ್ರ ಗೆಲುವನ್ನು ಸಾಧಿಸಿದೆ. ಎನ್‌ಡಿಎ ಮೈತ್ರಿ ಪಕ್ಷಗಳಾದ ಏಕನಾಥ್‌ ಶಿಂಧೆ ಶಿವಸೇನೆ 7, ಎನ್‌ಸಿಪಿ ಅಜಿತ್‌ ಪವಾರ್‌ ಬಣ 1 ಕ್ಷೇತ್ರಗಳಲ್ಲಿ ಮಾತ್ರ ಗೆಲುವನ್ನು ಕಂಡಿದೆ. ಇದು ಎನ್‌ಡಿಎ ಮೈತ್ರಿಕೂಟಕ್ಕೆ ದೊಡ್ಡ ಹೊಡೆತವನ್ನು ನೀಡಿದೆ. ಮಹರಾಷ್ಟ್ರದಲ್ಲಿ ಇಂಡಿಯಾ ಮೈತ್ರಿಕೂಟವು 30 ಕ್ಷೇತ್ರಗಳಲ್ಲಿ ಗೆಲುವನ್ನು ಸಾಧಿಸಿದೆ.

ಲೋಕಸಭೆ ಚುನಾವಣೆಯ ಟಿಕೆಟ್‌ ಹಂಚಿಕೆಯ ವೇಳೆ ಮಹರಾಷ್ಟ್ರದಲ್ಲಿ ಎನ್‌ಡಿಎ ಮೈತ್ರಿ ಪಕ್ಷಗಳಲ್ಲಿ ಭಾರೀ ಅಸಮಾಧಾನ ಭುಗಿಲೆದ್ದಿತ್ತು. ಕುದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಹಾರಾಷ್ಟ್ರಕ್ಕೆ ತೆರಳಿ ಪರಿಸ್ಥಿತಿ ನಿಯಂತ್ರಿಸಲು ಪ್ರಯತ್ನಿಸಿದ್ದರು. ಇದಲ್ಲದೆ ಮರಾಠ ಮೀಸಲಾತಿ ಹೋರಾಟ ದೊಡ್ಡ ಮಟ್ಟದಲ್ಲಿ ನಡೆದಿತ್ತು. ಇನ್ನೊಂದು ಕಡೆ ಮರಾಠರಿಗೆ ಒಬಿಸಿಯಡಿ ಮೀಸಲಾತಿಗೆ ಒಬಿಸಿಗಳು ವಿರೋಧವನ್ನು ವ್ಯಕ್ತಪಡಿಸಿದ್ದರು. ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಮಹಾರಾಷ್ಟ್ರ ಸರಕಾರಕ್ಕೆ ಎಚ್ಚರಿಕೆ ನೀಡಿದ್ದರು. ಮರಾಠರಿಗೆ ಕುಂಬಿ ಜಾತಿ ಪ್ರಮಾಣಪತ್ರಗಳನ್ನು ನೀಡುವ ಸರ್ಕಾರದ ಉದ್ದೇಶಿತ ಕ್ರಮದ ವಿರುದ್ಧ ನ್ಯಾಯಾಲಯದ ಮೊರೆ ಹೋಗುವುದಾಗಿ ಕೂಡ ಹೇಳಿದ್ದರು.

ಇದನ್ನು ಓದಿ: ವಾರಣಾಸಿ ಜನರ ವಿಶ್ವಾಸ ಕಳೆದುಕೊಳ್ಳುತ್ತಿರುವ ಮೋದಿ: ಕ್ಷೇತ್ರದಲ್ಲಿನ ಈ ಬಾರಿಯ ಫಲಿತಾಂಶ ಏನು ಹೇಳುತ್ತದೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...