ಚಾರಣಕ್ಕೆಂದು ತೆರಳಿದ್ದ ಕರ್ನಾಟಕದ ನಾಲ್ವರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಈ ಹಿನ್ನೆಲೆ ತಂಡದ ನೆರವಿಗಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಉತ್ತರಾಖಂಡಕ್ಕೆ ಪ್ರಯಾಣ ಬೆಳೆಸಿದ್ದಾರೆ.
ಘಟನೆಯ ಬಗ್ಗೆ ಮಾಹಿತಿ ನೀಡಿರುವ ಸಚಿವ ಕೃಷ್ಣ ಬೈರೇಗೌಡ, “ಕರ್ನಾಟಕದ 20 ಜನ ಚಾರಣಿಗರು ಹಾಗೂ ಓರ್ವ ಗೈಡ್ ಒಳಗೊಂಡ ತಂಡ ಉತ್ತರಾಖಂಡದ ಎತ್ತರದ ಶಾಸ್ತ್ರತಾಳ್ ಮಯಳಿ ಎಂಬ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಚಾರಣ ಆರಂಭಿಸಿದ್ದರು. ಗಮ್ಯಸ್ಥಾನ ತಲುಪಿದ ತಂಡ ಮತ್ತೆ ಶಿಬಿರಕ್ಕೆ ಹಿಂತಿರುಗಲು ಯತ್ನಿಸಿದೆ. ಆದರೆ, ಹಿಂತಿರುಗುವ ಮಾರ್ಗ ಮಧ್ಯೆ ನಿನ್ನೆ ಮಧ್ಯಾಹ್ನ 2 ಗಂಟೆಗೆ ಹಿಮಗಾಳಿಯಿಂದಾಗಿ ಹವಾಮಾನ ಸಂಪೂರ್ಣ ಹದಗೆಟ್ಟಿದೆ. ಹೀಗಾಗಿ ಎಲ್ಲಾ ಚಾರಣಿಗರು ಅದೇ ಸ್ಥಳದಲ್ಲಿ ಅಪಾಯಕ್ಕೆ ಸಿಲುಕಿದ್ದರು” ಎಂದು ತಿಳಿಸಿದ್ದಾರೆ.
Most of the survivors have reached Dehradun. (for privacy reasons, I am not posting their photos )
I spoke to one. 20 trekkers plus guides started yesterday morning. They reached the destination of yesterday’s trek and were on the way back to camp. At 2 pm weather deteriorated… https://t.co/0kT5o3oKt4— Krishna Byre Gowda (@krishnabgowda) June 5, 2024
“ಕರ್ನಾಟಕದ ಚಾರಣಿಗರು ಪ್ರತಿಕೂಲ ವಾತಾವರಣದಿಂದಾಗಿ ಅಪಾಯಕ್ಕೆ ಸಿಲುಕಿದೆ ಎಂಬ ಮಾಹಿತಿ ನಿನ್ನೆ ರಾತ್ರಿ ನಮಗೆ ತಿಳಿದು ಬಂದಿತ್ತು. ಕೂಡಲೇ ಜಿಲ್ಲಾಡಳಿತದ ಮುಖಾಂತರ ಉತ್ತರಾಖಂಡ ಸರ್ಕಾರ, ಭಾರತೀಯ ಪರ್ವತಾರೋಹಣ ಒಕ್ಕೂಟ ಮತ್ತು ಕೇಂದ್ರ ಸರ್ಕಾರದ ಗೃಹ ಇಲಾಖೆಯನ್ನು ಸಂಪರ್ಕಿಸಲಾಯಿತು. ಅವರ ಸಹಾಯದಿಂದ ಕರ್ನಾಟಕದ ಚಾರಣಿಗರ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ” ಎಂದು ಸಚಿವರು ತಿಳಿಸಿದ್ದಾರೆ.
ಇದನ್ನೂ ಓದಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೋಟಾ ಪರ 15,000ಕ್ಕೂ ಅಧಿಕ ಮತ ಚಲಾವಣೆ


