Homeಮುಖಪುಟಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿಗೆ ವಾಪಾಸ್ಸಾಗಲು ಮುಂದಾದ ಅಜಿತ್‌ ಬಣದ ಬಹುಪಾಲು ಶಾಸಕರು!

ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿಗೆ ವಾಪಾಸ್ಸಾಗಲು ಮುಂದಾದ ಅಜಿತ್‌ ಬಣದ ಬಹುಪಾಲು ಶಾಸಕರು!

- Advertisement -
- Advertisement -

ಅಹ್ಮದ್‌ನಗರ ಮತ್ತು ಬೀಡ್ ಲೋಕಸಭಾ ಸ್ಥಾನಗಳನ್ನು ಎನ್‌ಸಿಪಿ(ಎಸ್‌ಸಿಪಿ) ಅಭ್ಯರ್ಥಿಗಳಾದ ನೀಲೇಶ್ ಲಂಕೆ ಮತ್ತು ಬಜರಂಗ್ ಸೋನಾವಾನೆ ಗೆದ್ದ ಬೆನ್ನಲ್ಲೇ ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿ ಜೊತೆಗೆ ಕೈಜೋಡಿಸಲು  ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯ ಕೆಲವು ಶಾಸಕರು ಮುಂದಾಗಿದ್ದಾರೆ ಎನ್ನಲಾಗಿದೆ.

ಲೋಕಸಭೆ ಚುನಾವಣೆಗೆ ಟಿಕೆಟ್ ಹಂಚಿಕೆ ವೇಳೆ ನೀಲೇಶ್ ಲಂಕೆ ಮತ್ತು ಬಜರಂಗ್ ಸೋನಾವಾನೆ ಅವರು ಅಜಿತ್ ಪವಾರ್‌ ಬಣ ತೊರೆದು ಶರದ್ ಪವಾರ್ ಅವರ ಪಾಲಯಕ್ಕೆ ಸೇರಿ ಚುನಾವಣೆಯಲ್ಲಿ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದಾರೆ.

ಕರ್ಜತ್-ಜಮಖೇಡ್ ಶಾಸಕ ರೋಹಿತ್ ಪವಾರ್ ಈ ಕುರಿತು ಹೇಳಿಕೆಯೊಂದನ್ನು ನೀಡಿದ್ದು, ಸುಮಾರು 18 ರಿಂದ 19 ಶಾಸಕರು ಶರದ್ ಪವಾರ್ ಪಕ್ಷಕ್ಕೆ ಮರಳಲು ಆಸಕ್ತಿ ಹೊಂದಿದ್ದಾರೆ. ಆದರೆ, ಪಕ್ಷಕ್ಕೆ ಕಷ್ಟದ ಸಮಯದಲ್ಲಿ ಶರದ್ ಪವಾರ್ ಅವರೊಂದಿಗೆ ಉಳಿದಿದ್ದ ಶಾಸಕರು ಅವರಿಗೆ ಮುಖ್ಯವಾಗಿದ್ದಾರೆ ಎಂದು ಹೇಳಿದ್ದಾರೆ.

ಎನ್‌ಸಿಪಿ(ಎಸ್‌ಸಿಪಿ) ರಾಜ್ಯಾಧ್ಯಕ್ಷ ಜಯಂತ್ ಪಾಟೀಲ್ ಈ ಕುರಿತು ಪ್ರತಿಕ್ರಿಯಿಸಿದ್ದು, ಶಾಸಕರನ್ನು ಮತ್ತೆ ಸೇರಿಸಿಕೊಳ್ಳುವ ಬಗ್ಗೆ ನಿರ್ಧಾರವನ್ನು ಶರದ್ ಪವಾರ್ ಅವರು ತೆಗೆದುಕೊಳ್ಳಲಿದ್ದಾರೆ. ಲೋಕಸಭೆ ಫಲಿತಾಂಶಗಳು ಹೊರ ಬಂದ ಬೆನ್ನಲ್ಲಿ ಕೆಲವು ಶಾಸಕರು ತಮ್ಮ ನಿರ್ಧಾರಗಳನ್ನು ಬದಲಿಸಿದ್ದಾರೆ. ಆದರೆ ನಾವು ಇನ್ನೂ ಶಾಸಕರ ವಾಪಸಾತಿ ಬಗ್ಗೆ ಚಿಂತನೆ ನಡೆಸಿಲ್ಲ. ಶರದ್ ಪವಾರ್ ಅವರೊಂದಿಗೆ ಸಮಾಲೋಚಿಸಿದ ನಂತರ ಪಕ್ಷವು ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ.

ಅಜಿತ್ ಅವರ ಎನ್‌ಸಿಪಿ ಕೇವಲ ಒಂದು ಸ್ಥಾನವನ್ನು ಮಾತ್ರ ಗೆದ್ದಿದೆ. ಮಹಾಯುತಿ ಸರ್ಕಾರಕ್ಕೆ ಸೇರಿದ ನಂತರ ಪಕ್ಷವು ಬೆಳೆಯುತ್ತದೆ ಎಂಬ ಭರವಸೆಯೊಂದಿಗೆ ನಾಯಕರು ಅಜಿತ್ ಪವಾರ್ ಅವರನ್ನು ಬೆಂಬಲಿಸಿದ್ದರು, ಆದರೆ ಲೆಕ್ಕಾಚಾರ ತಲೆಕೆಳಗಾಗಿದೆ ಎಂದು ಎನ್‌ಸಿಪಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಇದನ್ನು ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಸಚಿವ ಬಿ ನಾಗೇಂದ್ರ ರಾಜೀನಾಮೆ ಸಾಧ್ಯತೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರಂ-7: ಎಫ್‌ಐಆರ್ ಮುಂದುವರಿಸಿದರೆ ಪೊಲೀಸ್ ಠಾಣೆ ಮುತ್ತಿಗೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ಎಸ್ಐಆರ್ (SIR) ಫಾರಂ 7 ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರವು ವ್ಯವಸ್ಥಿತವಾಗಿ ಗೊಂದಲಗಳನ್ನು ಸೃಷ್ಟಿಸಿದ್ದು, ಬಿಜೆಪಿ ಕಾರ್ಯಕರ್ತರ ವಿರುದ್ಧ ಅನ್ಯಾಯವಾಗಿ ಎಫ್‌ಐಆರ್ ದಾಖಲಿಸುವುದನ್ನು ಮುಂದುವರಿಸಿದರೆ ಮುಂಬರುವ ದಿನಗಳಲ್ಲಿ ಪೊಲೀಸ್ ಠಾಣೆಗಳು ಹಾಗೂ ಎಸ್‌ಪಿ ಕಚೇರಿಗಳಿಗೂ...

ಗ್ಯಾನೇಶ್ ಅವರನ್ನು ರಕ್ಷಿಸಲು ಮೋದಿ-ಶಾ ಎಲ್ಲವನ್ನೂ ಮಾಡುತ್ತಾರೆ: ಸಿಜೆಪಿ

"ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಶಾಂತಿಯುತ ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ; ತನ್ನದೇ ನಾಗರಿಕರ ವಿರುದ್ಧ ಯುದ್ಧ ಸಾರಿದೆ" ಎಂದು ಪೊಲೀಸರ ಬಂಧನದಿಂದ ಬಿಡುಗಡೆಯಾದ ತಕ್ಷಣ ಮಾಧ್ಯಮಗಳೊಂದಿಗೆ ನಡೆಸಿದ ತಮ್ಮ ಮೊದಲ ಸಂವಾದದಲ್ಲಿ...

ದೆಹಲಿ ಪ್ರತಿಭಟನೆ ವೇಳೆ ಇಂಟರ್ನೆಟ್ ಸ್ಥಗಿತ : ನ್ಯಾಯಾಂಗ ಪರಿಶೀಲನೆ ಕೋರಿ ಸುಪ್ರೀಂ ಕೋರ್ಟ್‌ಗೆ ಪಿಐಎಲ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ, ಅಕ್ಟೋಬರ್ 9 ಮತ್ತು 10 ರಂದು ಮಧ್ಯ ದೆಹಲಿಯ ಜನಪಥ್-ಕರ್ತವ್ಯ ಪಥ್ ಜಂಕ್ಷನ್‌ನ ನಾಲ್ಕು ಕಿಲೋಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು...

ಸಿಜೆಪಿ ಪ್ರತಿಭಟನೆ: ‘ಬ್ಯಾರಿಕೇಡ್‌ ತೆರವುಗೊಳಿಸಿ, ಇಂಟರ್‌ನೆಟ್ ತಡೆಯಬೇಡಿ, ಮೆಟ್ರೋ ಸೇವೆ ಸಹಜವಾಗಿರಲಿ..’; ದೆಹಲಿ ಪೊಲೀಸರಿಗೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆಯ ಹಿನ್ನೆಲೆಯಲ್ಲಿ ಹಾಕಲಾಗಿರುವ ಎಲ್ಲಾ ಬ್ಯಾರಿಕೇಡ್‌ಗಳನ್ನು, ಅತ್ಯಂತ ಅಗತ್ಯವಿದ್ದ ಕಾರಣಕ್ಕೆ ಹೊರತುಪಡಿಸಿ ತಕ್ಷಣವೇ ತೆರವುಗೊಳಿಸಬೇಕು; ರಾಷ್ಟ್ರ ರಾಜಧಾನಿಯಲ್ಲಿ ಮೆಟ್ರೋ ಸೇವೆಗಳು ಸಹಜವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಹಾಗೂ ಇಂಟರ್‌ನೆಟ್...

‘ನನ್ನನ್ನು ಬಂಧಿಸಿರಲಿಲ್ಲ, ಕಿಡ್ನಾಪ್ ಮಾಡಿದ್ದರು’ ದೆಹಲಿ ಪೊಲೀಸರ ವಿರುದ್ಧ ಧೃವ್ ರಾಠೀ ಆರೋಪ

ಸಿಜೆಪಿ (CJP) ನೇತೃತ್ವದಲ್ಲಿ ದೆಹಲಿಯಲ್ಲಿ ನಡೆದ ಬೃಹತ್ ಪ್ರತಿಭಟನಾ ರ‍್ಯಾಲಿಯಲ್ಲಿ ಭಾಗವಹಿಸುವುದನ್ನು ತಡೆಯಲು ಶನಿವಾರ ಮುಂಜಾನೆ ಗುರುಗ್ರಾಮದ ನಿವಾಸದಿಂದಲೇ ಪೊಲೀಸರಿಂದ ಬಲವಂತವಾಗಿ ವಶಕ್ಕೆ ಪಡೆದುಕೊಳ್ಳಲ್ಪಟ್ಟಿದ್ದ ಖ್ಯಾತ ಯೂಟ್ಯೂಬರ್ ಧೃವ್ ರಾಠೀ ಅವರು ಭಾನುವಾರ...

ದೆಹಲಿ ಪ್ರತಿಭಟನೆ: ವಿದ್ಯಾರ್ಥಿಗಳು ಹಾಗೂ ಮಹಿಳೆಯರ ಮೇಲೆ ಹಲ್ಲೆ ನಡೆಸಿದ 4 ಹಿಂದುತ್ವವಾದಿಗಳ ಬಂಧನ!

ದೆಹಲಿಯಲ್ಲಿ ನಡೆದ ಪ್ರತಿಭಟನೆಯ ವೇಳೆ ಶಾಂತಿಯುತವಾಗಿ ಸಾಗುತ್ತಿದ್ದ ಯುವ ವಿದ್ಯಾರ್ಥಿಗಳು ಹಾಗೂ ಮಹಿಳೆಯರ ಮೇಲೆ ಭೀಕರವಾಗಿ ಹಲ್ಲೆ ನಡೆಸಿ, ಎಳೆದಾಡಿ ದೌರ್ಜನ್ಯ ಎಸಗಿದ ಗಂಭೀರ ಪ್ರಕರಣಕ್ಕೆ ಸಂಬಂಧಿಸಿದಂತೆ 'ಹಿಂದೂ ರಕ್ಷಾ ದಳ'ದ ನಾಲ್ವರು...

ಅಭಿಜಿತ್ ದೀಪ್ಕೆ, ಅಶುತೋಷ್ ರಂಕಾ ಹಾಗೂ ಸೌರವ್ ದಾಸ್ ಬಿಡುಗಡೆ: ಮಧ್ಯಾಹ್ನ 2ಕ್ಕೆ CJP ಪತ್ರಿಕಾಗೋಷ್ಠಿ

ಚುನಾವಣಾ ಆಯೋಗದ ವಿವಾದಾತ್ಮಕ ಧೋರಣೆ ಹಾಗೂ ಮತದಾರರ ಪಟ್ಟಿ ಅಕ್ರಮಗಳನ್ನು ಖಂಡಿಸಿ ದೆಹಲಿಯಲ್ಲಿ ನಿಗದಿತ ಪ್ರತಿಭಟನೆಗೂ ಮುನ್ನ ಮುನ್ನೆಚ್ಚರಿಕೆ ಕ್ರಮವೆಂಬ ನೆಪದಲ್ಲಿ ದೆಹಲಿ ಪೊಲೀಸರಿಂದ ವಶಕ್ಕೆ ಪಡೆಯಲ್ಪಟ್ಟಿದ್ದ ಸಿಜೆಪಿ ಸಂಘಟನೆಯ ಪ್ರಮುಖ...

ದೆಹಲಿ ಹೋರಾಟಕ್ಕೆ ಬೆಂಬಲ: ಫ್ರೀಡಂಪಾರ್ಕ್ನಲ್ಲಿ ಎಡ ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ

ಬೆಂಗಳೂರು, ಅ.10: ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿ ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಶನಿವಾರ ಎಐಡಿಎಸ್‌ಒ, ಕೆವಿಎಸ್, ಎಐಎಸ್‌ಎಫ್, ಎಸ್‌ಎಫ್‌ಐ, ಎಐಎಸ್‌ಎ ಸೇರಿದಂತೆ ಇನ್ನಿತರೆ ಎಡ ವಿದ್ಯಾರ್ಥಿ ಸಂಘಟನೆಗಳ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯ...

ಕೋರ್ಟ್ ಆದೇಶ ಉಲ್ಲಂಘಿಸಿ ದೆಹಲಿಯ ಮೆಟ್ರೋ ನಿಲ್ದಾಣಗಳು ಬಂದ್, ರೈಲು ರದ್ದು : ಸುಪ್ರೀಂ ಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿವಿಧ ಜಾತ್ಯತೀತ ಪಕ್ಷ ಮತ್ತು ಸಂಘಟನೆಗಳು ಇಂದು (ಅ.10) ದೆಹಲಿಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿವೆ. ಪೊಲೀಸರು...

ಸಿಜೆಪಿ ಪ್ರತಿಭಟನೆಗೆ ದೆಹಲಿ ಸ್ತಬ್ಧ: ಗುರುದ್ವಾರದಲ್ಲಿ ಆಶ್ರಯ ಪಡೆದ ಪ್ರತಿಭಟನಾಕಾರರು, ಜಿರಳೆ ಆಂಟೆನಾ ಹೆಲ್ಮೆಟ್ ಧರಿಸಿ ವಿನೂತನ ಪ್ರತಿರೋಧ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾದ ‘ಜಿರಳೆ ಜನತಾ ಪಾರ್ಟಿ’ (ಸಿಜೆಪಿ) ಮತ್ತು ಅದರ ಬೆಂಬಲಿಗರನ್ನು ತಡೆಯಲು ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಭದ್ರತಾ ವ್ಯವಸ್ಥೆ...