Homeಮುಖಪುಟಲೋಕಸಭೆ ಪ್ರವೇಶಿಸಿದ ಮುಸ್ಲಿಂ ಸಂಸದರ ಸಂಖ್ಯೆಯಲ್ಲಿ ಇಳಿಕೆ: ಈ ಭಾರಿ ಎಷ್ಟು ಮುಸ್ಲಿಂ ಅಭ್ಯರ್ಥಿಗಳು ಗೆಲುವು...

ಲೋಕಸಭೆ ಪ್ರವೇಶಿಸಿದ ಮುಸ್ಲಿಂ ಸಂಸದರ ಸಂಖ್ಯೆಯಲ್ಲಿ ಇಳಿಕೆ: ಈ ಭಾರಿ ಎಷ್ಟು ಮುಸ್ಲಿಂ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ? ಡಿಟೇಲ್ಸ್…

- Advertisement -
- Advertisement -

ಲೋಕಸಭೆ ಚುನಾವಣೆಯಲ್ಲಿ ದೇಶಾದ್ಯಂತ 24 ಮುಸ್ಲಿಂ ಅಭ್ಯರ್ಥಿಗಳು ಗೆಲುವನ್ನು ಸಾಧಿಸಿದ್ದು, ಕಳೆದ ಬಾರಿಗೆ ಹೋಲಿಕೆ ಮಾಡಿದರೆ ಈ ಬಾರಿ ಮುಸ್ಲಿಂ ಸಂಸದರು ಲೋಕಸಭೆಗೆ ಪ್ರವೇಶಿಸಿರುವ ಸಂಖ್ಯೆಯಲ್ಲಿ ಕುಸಿತ ಕಂಡು ಬಂದಿದೆ. ಕಳೆದ ಬಾರಿ 26 ಮಂದಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಸಂಸದರು ಲೋಕಸಭೆ ಪ್ರವೇಶಿಸಿದ್ದರು.

18ನೇ ಲೋಕಸಭೆಯಲ್ಲಿ ಮುಸ್ಲಿಂ ಸಮುದಾಯದ ಉಪಸ್ಥಿತಿಯು 2014ಕ್ಕೆ ಹೋಲಿಕೆ ಮಾಡಿದರೆ ಅಲ್ಪ ಚೇತರಿಕೆಯಾಗಿದ್ದು, 2014ರಲ್ಲಿ 23 ಮುಸ್ಲಿಂ ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆದ್ದು ಸಂಸತ್ತನ್ನು ಪ್ರವೇಶಿಸಿದ್ದರು. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ 78 ಮುಸ್ಲಿಂ ಅಭ್ಯರ್ಥಿಗಳು ಕಣದಲ್ಲಿದ್ದರು. ಕಳೆದ ಚುನಾವಣೆಗೆ ಹೋಲಿಕೆ ಮಾಡಿದರೆ ಇದು ಗಣನೀಯವಾಗಿ ಇಳಿಕೆಯಾಗಿದ್ದು, ವಿವಿಧ ಪಕ್ಷಗಳಿಂದ ಕಳೆದ ಬಾರಿ 115 ಮುಸ್ಲಿಂ ಅಭ್ಯರ್ಥಿಗಳು ಕಣಕ್ಕಿಳಿದಿದ್ದರು.

ಪಶ್ಚಿಮ ಬಂಗಾಳದ ಬಹರಂಪುರದಿಂದ ತೃಣಮೂಲ ಕಾಂಗ್ರೆಸ್‌ನ ಸಂಸದರಾಗಿ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಮತ್ತು ಅಸ್ಸಾಂನ ಧುಬ್ರಿಯಿಂದ ಕಾಂಗ್ರೆಸ್‌ನ ರಕಿಬುಲ್ ಹುಸೇನ್ ಗೆಲುವನ್ನು ಸಾಧಿಸಿದ್ದಾರೆ. ಈ ಬಾರಿ ಗೆದ್ದಿರುವ ಮುಸ್ಲಿಂ ಅಭ್ಯರ್ಥಿಗಳ ಪೈಕಿ ಧುಬ್ರಿಯಲ್ಲಿ ರಕಿಬುಲ್ ಹುಸೇನ್ ಅವರ ಗೆಲುವಿನ ಅಂತರ ಬಹಳ ಮಹತ್ವದ್ದಾಗಿದೆ. ಕಾಂಗ್ರೆಸ್ ಅಭ್ಯರ್ಥಿ 14.71 ಲಕ್ಷ ಮತಗಳನ್ನು ಗಳಿಸಿ ತಮ್ಮ ಸಮೀಪದ ಪ್ರತಿಸ್ಪರ್ಧಿ ಮೊಹಮ್ಮದ್ ಬದ್ರುದ್ದೀನ್ ಅಜ್ಮಲ್ ಅವರನ್ನು ಸುಮಾರು 10 ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದಾರೆ.

ಪಶ್ಚಿಮ ಬಂಗಾಳದ ಬಹರಂಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕರಾಗಿದ್ದ ಮತ್ತು ಆರು ಬಾರಿ ಸಂಸದರಾಗಿದ್ದ ಅಧೀರ್ ರಂಜನ್ ಚೌಧರಿ ಅವರನ್ನು ಮೊದಲ ಬಾರಿಗೆ ಸ್ಪರ್ಧಿಸಿದ ಯೂಸುಫ್ ಪಠಾಣ್ ಅವರು 85,022 ಮತಗಳಿಂದ ಸೋಲಿಸಿದ್ದಾರೆ.

ಉತ್ತರಪ್ರದೇಶದ ಸಹರಾನ್‌ಪುರದ ಕಾಂಗ್ರೆಸ್‌ ಅಭ್ಯರ್ಥಿ ಇಮ್ರಾನ್‌ ಮಸೂದ್‌ 64,542 ಮತಗಳ ಅಂತರದಿಂದ ಜಯಗಳಿಸಿದರೆ, ಕೈರಾನಾದಿಂದ ಸಮಾಜವಾದಿ ಪಕ್ಷದ 29 ವರ್ಷದ ಅಭ್ಯರ್ಥಿ ಇಕ್ರಾ ಚೌಧರಿ 69,116 ಮತಗಳಿಂದ ಬಿಜೆಪಿಯ ಪ್ರದೀಪ್‌ ಕುಮಾರ್‌ ವಿರುದ್ಧ ಗೆಲುವನ್ನು ಸಾಧಿಸಿದ್ದಾರೆ. ಘಾಜಿಪುರದ ಹಾಲಿ ಸಂಸದ ಅಫ್ಜಲ್ ಅನ್ಸಾರಿ 5.3 ಲಕ್ಷ ಮತಗಳನ್ನು ಪಡೆಯುವ ಮೂಲಕ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಸಮಾಜವಾದಿ ಪಕ್ಷದ ಮೊಹಿಬ್ಬುಲ್ಲಾ 4,81,503 ಮತಗಳನ್ನು ಪಡೆಯುವ ಮೂಲಕ ರಾಂಪುರ ಕ್ಷೇತ್ರವನ್ನು ಗೆದ್ದುಕೊಂಡರೆ, ಜಿಯಾ ಉರ್ ರೆಹಮಾನ್ ಸಂಭಾಲ್‌ನಲ್ಲಿ 1.2 ಲಕ್ಷ ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ.

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಬಿಜೆಪಿಯ ಮಾಧವಿ ಲತಾ ಕೊಂಪೆಲ್ಲಾ ವಿರುದ್ಧ 3,38,087 ಮತಗಳ ಅಂತರದಿಂದ ಹೈದರಾಬಾದ್ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ, ನ್ಯಾಷನಲ್ ಕಾನ್ಫರೆನ್ಸ್‌ನ ಶ್ರೀನಗರದ ಅಭ್ಯರ್ಥಿ ಅಗಾ ಸೈಯದ್ ರುಹುಲ್ಲಾ ಮೆಹದಿ 3,56,866 ಮತಗಳನ್ನು ಗಳಿಸಿದ್ದು, ಪ್ರತಿಸ್ಪರ್ಧಿ ಪಿಡಿಪಿಯ ವಹೀದ್-ಉರ್-ರೆಹಮಾನ್ ಪರ್ರಾ ವಿರುದ್ಧ 1.88 ಲಕ್ಷ ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್‌ನ ಮಿಯಾನ್ ಅಲ್ತಾಫ್ ಅಹ್ಮದ್ ಅವರು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ವಿರುದ್ಧ ಅನಂತನಾಗ್-ರಜೌರಿಯಲ್ಲಿ 2,81,794 ಮತಗಳಿಂದ ಗೆಲುವನ್ನು ಸಾಧಿಸಿದ್ದಾರೆ. ಲಡಾಖ್‌ನಲ್ಲಿ ಸ್ವತಂತ್ರ ಅಭ್ಯರ್ಥಿ ಮೊಹಮ್ಮದ್ ಹನೀಫಾ 27,862 ಮತಗಳ ಅಂತರದಿಂದ ಗೆಲುವು ಸಾಧಿಸಿದರೆ, ಮತ್ತೋರ್ವ ಸ್ವತಂತ್ರ ಅಭ್ಯರ್ಥಿ ಅಬ್ದುಲ್ ರಶೀದ್ ಶೇಖ್ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಬಿಹಾರದ ಕತಿಹಾರ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ತಾರಿಕ್ ಅನ್ವರ್ ಜೆಡಿಯು ಅಭ್ಯರ್ಥಿ ದುಲಾಲ್ ಚಂದ್ರ ಗೋಸ್ವಾಮಿ ವಿರುದ್ಧ 49,863 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಪಕ್ಷವಾರು ನೋಡಿದಾಗ ಕಾಂಗ್ರೆಸ್ ಈಗ ಅತಿ ಹೆಚ್ಚು ಅಂದರೆ 7 ಮುಸ್ಲಿಂ ಸಂಸದರನ್ನು ಹೊಂದಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ಐವರು ಮತ್ತು ಸಮಾಜವಾದಿ ಪಕ್ಷ ನಾಲ್ವರು ಸಂಸದರನ್ನು ಹೊಂದಿದೆ. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮಲಪ್ಪುರಂನಿಂದ ಟಿ ಮೊಹಮ್ಮದ್ ಬಶೀರ್, ಕೇರಳದ ಪೊನ್ನಾನಿಯಿಂದ ಎಂ ಪಿ ಅಬ್ದುರಸ್ಮದ್ ಸಮ್ದಾನಿ ಮತ್ತು ತಮಿಳುನಾಡಿನ ರಾಮನಾಥಪುರದಿಂದ ಕೆ ನವಾಸ್ಕಾನಿ ಸೇರಿ ಮೂವರು ಸಂಸದರನ್ನು ಹೊಂದಿದೆ.

ಇದನ್ನು ಓದಿ: ‘ಮೈತ್ರಿಯಿಂದ ಯಾವುದೇ ಪ್ರಯೋಜನವಾಗಿಲ್ಲ’: ಪ.ಬಂಗಾಳದಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಕೊನೆಗೊಳಿಸಿದ ಕೆಲವು ಎಡ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಪಡಿಸಿ, ನೇರ ವೇತನ ಪಾವತಿ ಜಾರಿಗೊಳಿಸಿ, ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಲು ಆಗ್ರಹಿಸಿ ಎಐಸಿಸಿಟಿಯು ಪ್ರತಿಭಟನೆ

ಬೆಂಗಳೂರು: ರಾಜ್ಯಾದ್ಯಂತ ವಿವಿಧ ವಲಯಗಳಲ್ಲಿ ದುಡಿಯುತ್ತಿರುವ ಗುತ್ತಿಗೆ, ಹೊರಗುತ್ತಿಗೆ, ದಿನಗೂಲಿ ಹಾಗೂ ತಾತ್ಕಾಲಿಕ ಕಾರ್ಮಿಕರ ಶೋಷಣೆ ತಡೆಗಟ್ಟಿ, ಅವರಿಗೆ ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ...

ಯುಜಿಸಿ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ

ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟುವ ಕುರಿತಾದ 2026 ರ ವಿಶ್ವವಿದ್ಯಾಲಯ ಅನುದಾನ ಆಯೋಗದ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಜನವರಿ 29 ರಂದು, ಸುಪ್ರೀಂ...

ಅಲ್ಪಸಂಖ್ಯಾತರ ಮೇಲಿನ ದಾಳಿ ಹಿನ್ನೆಲೆ: ಭಾಗವತ್ ಭೇಟಿಗೂ ಮುನ್ನ ಆರ್‌ಎಸ್‌ಎಸ್ ನಾಯಕರನ್ನು ದೂರವಿಡುವಂತೆ ವಾಷಿಂಗ್ಟನ್‌ಗೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ ಒತ್ತಾಯ

ವಾಷಿಂಗ್ಟನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಅಮೆರಿಕ ಭೇಟಿಗೆ ಮುನ್ನ, ಅವರೊಂದಿಗೆ ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆಗಳನ್ನು ತಡೆಹಿಡಿಯಬೇಕು ಮತ್ತು ಸಂಘದ ಪ್ರಮುಖ ನಾಯಕರ ವಿರುದ್ಧ ನಿರ್ಬಂಧಗಳನ್ನು...

ಮೋಹನ್ ಭಾಗವತ್‌ ಅಮೆರಿಕ ಪ್ರವಾಸಕ್ಕೆ ವಿರೋಧ: RSSಗೆ ನಿರ್ಬಂಧದ ಭೀತಿ

ಆರ್‌ಎಸ್‌ಎಸ್ (RSS) ಸಂಘಟನೆಯ ವಿರುದ್ಧ ನಿರ್ಬಂಧಗಳನ್ನು ವಿಧಿಸುವಂತೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಕುರಿತ ಸಲಹಾ ಮಂಡಳಿಯ (USCIRF) ಅಧಿಕಾರಿಗಳು ಅಮೆರಿಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿರುವ RSS ಸರಸಂಘಚಾಲಕ ಮೋಹನ್ ಭಾಗವತ್...

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಕೇರಳದ ಟ್ರಾನ್ಸ್ ಜೆಂಡರ್ ಮೇಕಪ್ ಕಲಾವಿದೆ ಜಾನ್ಮೋನಿ ದಾಸ್ ಬಂಧನ

ಕೋಝಿಕ್ಕೋಡ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾರ್ವಜನಿಕವಾಗಿ ಅವಮಾನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇರೆಗೆ ಕೇರಳದ ಪ್ರಸಿದ್ಧ ಸೆಲೆಬ್ರಿಟಿ ಮೇಕಪ್ ಆರ್ಟಿಸ್ಟ್ ಹಾಗೂ ಬಿಗ್ ಬಾಸ್ ಮಾಜಿ...

ಎರಡು ಚರಣಗಳ ‘ವಂದೇ ಮಾತರಂ’ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

ವಂದೇ ಮಾತರಂ ವಿವಾದ ತೀವ್ರಗೊಳ್ಳುತ್ತಿರುವಂತೆಯೇ, ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ತೀವ್ರ ಟೀಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷವು ತನ್ನ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಹಾಡುವ ತನ್ನ ದೀರ್ಘಕಾಲದ ಪದ್ಧತಿಯನ್ನು...

31ನೇ ದಕ್ಷಿಣ ವಲಯ ಮಂಡಳಿ ಸಭೆ : ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡುವಂತೆ ಸಿಎಂ ಡಿ.ಕೆ ಶಿವಕುಮಾರ್ ಒತ್ತಾಯ

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ...

ರಾಯಚೂರು| ಬಾವಿಯಲ್ಲಿ ದಲಿತ ಯುವತಿ ಮೃತದೇಹ ಪತ್ತೆ; ಅತ್ಯಾಚಾರ-ಕೊಲೆ ಶಂಕೆ

ನಿನ್ನೆ ರಾತ್ರಿ ಬಯಲು ಶೌಚಾಲಯಕ್ಕೆಂದು ಮನೆಯಿಂದ ಹೊರಹೋಗಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಇಂದು ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಕ್ರಾಣಿ ಗ್ರಾಮದಲ್ಲಿ ಘಟನೆ ನಡೆಸಿದ್ದು, ಮೃತ...

ನಕಲಿ ಔಷಧ ಜಾಲದ ಸುಳಿವು ನೀಡಿದವರಿಗೆ ₹50,000 ನಗದು ಬಹುಮಾನ: ಆರೋಗ್ಯ ಇಲಾಖೆ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನಕಲಿ ಔಷಧ ಜಾಲದ ವಿರುದ್ಧ ಆರೋಗ್ಯ ಇಲಾಖೆ ಸಮರ ಸಾರಿದೆ. ರಾಜ್ಯದಲ್ಲಿ ನಕಲಿ ಔಷಧಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ಪೂರೈಕೆ ಕುರಿತು ನಿಖರ ಮಾಹಿತಿ ನೀಡುವ...

ಎಬಿವಿಪಿ ಮತ್ತು ಎಡಪಂಥೀಯ ಗುಂಪುಗಳ ನಡುವೆ ವಾಗ್ವಾದ: ಮಧ್ಯರಾತ್ರಿ ಜಾದವ್‌ಪುರ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಳಿ ನಡೆಸಿದ ಹಿಂದುತ್ವವಾದಿ ಗುಂಪು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪ್ರತಿಷ್ಠಿತ ಜಾದವ್‌ಪುರ ವಿಶ್ವವಿದ್ಯಾಲಯದ (ಜೆ ಯು) ಕ್ಯಾಂಪಸ್‌ ಮೇಲೆ ತಡರಾತ್ರಿ ಹಿಂದುತ್ವವಾದಿ ಸಂಘಟನೆಗೆ ಸೇರಿದ ಗುಂಪೊಂದು ಭೀಕರ ದಾಳಿ ನಡೆಸಿದ್ದು, ವಿಶ್ವವಿದ್ಯಾಲಯದ ಆಸ್ತಿಪಾಸ್ತಿ ಧ್ವಂಸಗೊಳಿಸಿ ಹಲವು ವಿದ್ಯಾರ್ಥಿಗಳನ್ನು ತೀವ್ರವಾಗಿ...