Homeಕರ್ನಾಟಕಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ರಾಜ್ಯದ 9 ಮಂದಿ ಸಾವು: 13 ಜನರ ರಕ್ಷಣೆ

ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ರಾಜ್ಯದ 9 ಮಂದಿ ಸಾವು: 13 ಜನರ ರಕ್ಷಣೆ

- Advertisement -
- Advertisement -

ಉತ್ತರಾಖಂಡದ ಸಹಸ್ತ್ರತಾಲ್ ಚಾರಣಕ್ಕೆ ತೆರಳಿದ್ದ ರಾಜ್ಯದ 22 ಜನರ ಪೈಕಿ 9 ಮಂದಿ ಮೃತಪಟ್ಟಿದ್ದು, 13 ಜನರನ್ನು ರಕ್ಷಿಸಲಾಗಿದೆ.

ಅಪಾಯಕ್ಕೆ ಸಿಲುಕಿದ್ದ ಚಾರಣಿಗರ ಪೈಕಿ ನಾಲ್ವರು ಮೃತಪಟ್ಟಿದ್ದಾರೆ ಎಂದು ನಿನ್ನೆ (ಜೂನ್ 5) ವರದಿಯಾಗಿತ್ತು. ಇದೀಗ ಕಣ್ಮರೆಯಾದ ಎಲ್ಲರೂ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯದ ಚಾರಣಿಗರು ಅಪಾಯಕ್ಕೆ ಸಿಲುಕಿದ್ದ ಮಾಹಿತಿ ಸಿಗುತ್ತಿದ್ದಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ರಕ್ಷಣಾ ಕಾರ್ಯಾಚರಣೆಗೆ ನೆರವಾಗಲು ಡೆಹ್ರಾಡೂನ್‌ಗೆ ತೆರಳಿದ್ದರು.

ವರದಿಗಳ ಪ್ರಕಾರ, ಬುಧವಾರ ಬೆಳಿಗ್ಗೆ 5 ಗಂಟೆಗೆ ಪ್ರಾರಂಭಿಸಲಾಗಿದ್ದ ರಕ್ಷಣಾ ಕಾರ್ಯಾಚರಣೆಯನ್ನು ಮಧ್ಯಾಹ್ನ ನಿಲ್ಲಿಸಲಾಗಿದೆ. ರಕ್ಷಿಸಲಾಗಿರುವ ಚಾರಣಿಗರನ್ನು ಸಚಿವರು ಭೇಟಿಯಾಗಿದ್ದಾರೆ.

ಇಂದು ಬೆಳಿಗ್ಗೆ ಎಕ್ಸ್‌ ಮೂಲಕ ಮಾಹಿತಿ ನೀಡಿರುವ ಸಚಿವರು, “ಉತ್ತರಾಖಂಡದ ಮುಖ್ಯ ಕಾರ್ಯದರ್ಶಿ ರಾಧಾ ರಾತುರಿ ಮತ್ತು ವಿಪತ್ತು ನಿರ್ವಹಣೆಯ ಕಾರ್ಯದರ್ಶಿ ರಂಜಿತ್ ಸಿನ್ಹಾ ಅವರನ್ನು ನಾನು ಇಂದು ಭೇಟಿಯಾಗಿ ಈ ವಿಪತ್ತಿನ ಸಮಯದಲ್ಲಿ ಅವರ ತ್ವರಿತ ಪ್ರತಿಕ್ರಿಯೆಗಾಗಿ ಅವರಿಗೆ ಧನ್ಯವಾದ ಅರ್ಪಿಸಿದ್ದೇನೆ. ಶವಗಳನ್ನು ಬೆಂಗಳೂರಿಗೆ ಸಾಗಿಸಲು ವಿಮಾನದ ವ್ಯವಸ್ಥೆ ಮಾಡುವಂತೆಯೂ ನಾನು ಅವರ ಸಹಾಯವನ್ನು ಕೋರಿದೆ. ಅವರು ಸಹಾಯ ಮಾಡಲು ಒಪ್ಪಿಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

“ಎಲ್ಲಾ 9 ಮೃತದೇಹಗಳು ಮಧ್ಯಾಹ್ನ 12 ಗಂಟೆಗೆ ಡೆಹ್ರಾಡೂನ್ ತಲುಪುವ ಸಾಧ್ಯತೆಯಿದೆ. ಸ್ಥಳೀಯ ಆಸ್ಪತ್ರೆಯಲ್ಲಿ ಎಂಬಾಮ್ ಮಾಡಿದ ನಂತರ ನಾವು ಇಂದು ಎಲ್ಲಾ ಮೃತದೇಹಗಳನ್ನು ವಿಮಾನ ಮೂಲಕ ಬೆಂಗಳೂರಿಗೆ ರವಾನಿಸಲು ಯೋಜಿಸುತ್ತಿದ್ದೇವೆ” ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಶರದ್‌ ಪವಾರ್‌ ನೇತೃತ್ವದ ಎನ್‌ಸಿಪಿಗೆ ವಾಪಾಸ್ಸಾಗಲು ಮುಂದಾದ ಅಜಿತ್‌ ಬಣದ ಬಹುಪಾಲು ಶಾಸಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಪಡಿಸಿ, ನೇರ ವೇತನ ಪಾವತಿ ಜಾರಿಗೊಳಿಸಿ, ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಲು ಆಗ್ರಹಿಸಿ ಎಐಸಿಸಿಟಿಯು ಪ್ರತಿಭಟನೆ

ಬೆಂಗಳೂರು: ರಾಜ್ಯಾದ್ಯಂತ ವಿವಿಧ ವಲಯಗಳಲ್ಲಿ ದುಡಿಯುತ್ತಿರುವ ಗುತ್ತಿಗೆ, ಹೊರಗುತ್ತಿಗೆ, ದಿನಗೂಲಿ ಹಾಗೂ ತಾತ್ಕಾಲಿಕ ಕಾರ್ಮಿಕರ ಶೋಷಣೆ ತಡೆಗಟ್ಟಿ, ಅವರಿಗೆ ಉದ್ಯೋಗ ಭದ್ರತೆ ಮತ್ತು ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ...

ಯುಜಿಸಿ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ

ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟುವ ಕುರಿತಾದ 2026 ರ ವಿಶ್ವವಿದ್ಯಾಲಯ ಅನುದಾನ ಆಯೋಗದ ಇಕ್ವಿಟಿ ನಿಯಮಗಳು ಮರುಪರಿಶೀಲನೆಯಲ್ಲಿವೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಜನವರಿ 29 ರಂದು, ಸುಪ್ರೀಂ...

ಅಲ್ಪಸಂಖ್ಯಾತರ ಮೇಲಿನ ದಾಳಿ ಹಿನ್ನೆಲೆ: ಭಾಗವತ್ ಭೇಟಿಗೂ ಮುನ್ನ ಆರ್‌ಎಸ್‌ಎಸ್ ನಾಯಕರನ್ನು ದೂರವಿಡುವಂತೆ ವಾಷಿಂಗ್ಟನ್‌ಗೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ ಒತ್ತಾಯ

ವಾಷಿಂಗ್ಟನ್: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಅಮೆರಿಕ ಭೇಟಿಗೆ ಮುನ್ನ, ಅವರೊಂದಿಗೆ ಉನ್ನತ ಮಟ್ಟದ ರಾಜತಾಂತ್ರಿಕ ಮಾತುಕತೆಗಳನ್ನು ತಡೆಹಿಡಿಯಬೇಕು ಮತ್ತು ಸಂಘದ ಪ್ರಮುಖ ನಾಯಕರ ವಿರುದ್ಧ ನಿರ್ಬಂಧಗಳನ್ನು...

ಮೋಹನ್ ಭಾಗವತ್‌ ಅಮೆರಿಕ ಪ್ರವಾಸಕ್ಕೆ ವಿರೋಧ: RSSಗೆ ನಿರ್ಬಂಧದ ಭೀತಿ

ಆರ್‌ಎಸ್‌ಎಸ್ (RSS) ಸಂಘಟನೆಯ ವಿರುದ್ಧ ನಿರ್ಬಂಧಗಳನ್ನು ವಿಧಿಸುವಂತೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಕುರಿತ ಸಲಹಾ ಮಂಡಳಿಯ (USCIRF) ಅಧಿಕಾರಿಗಳು ಅಮೆರಿಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಶೀಘ್ರದಲ್ಲೇ ಅಮೆರಿಕಕ್ಕೆ ಭೇಟಿ ನೀಡಲಿರುವ RSS ಸರಸಂಘಚಾಲಕ ಮೋಹನ್ ಭಾಗವತ್...

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಕೇರಳದ ಟ್ರಾನ್ಸ್ ಜೆಂಡರ್ ಮೇಕಪ್ ಕಲಾವಿದೆ ಜಾನ್ಮೋನಿ ದಾಸ್ ಬಂಧನ

ಕೋಝಿಕ್ಕೋಡ್: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾರ್ವಜನಿಕವಾಗಿ ಅವಮಾನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇರೆಗೆ ಕೇರಳದ ಪ್ರಸಿದ್ಧ ಸೆಲೆಬ್ರಿಟಿ ಮೇಕಪ್ ಆರ್ಟಿಸ್ಟ್ ಹಾಗೂ ಬಿಗ್ ಬಾಸ್ ಮಾಜಿ...

ಎರಡು ಚರಣಗಳ ‘ವಂದೇ ಮಾತರಂ’ ನಿಲುವನ್ನು ಸಮರ್ಥಿಸಿಕೊಂಡ ಕಾಂಗ್ರೆಸ್

ವಂದೇ ಮಾತರಂ ವಿವಾದ ತೀವ್ರಗೊಳ್ಳುತ್ತಿರುವಂತೆಯೇ, ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ತೀವ್ರ ಟೀಕೆಗಳ ನಡುವೆಯೂ ಕಾಂಗ್ರೆಸ್ ಪಕ್ಷವು ತನ್ನ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆಯ ಮೊದಲ ಎರಡು ಚರಣಗಳನ್ನು ಹಾಡುವ ತನ್ನ ದೀರ್ಘಕಾಲದ ಪದ್ಧತಿಯನ್ನು...

31ನೇ ದಕ್ಷಿಣ ವಲಯ ಮಂಡಳಿ ಸಭೆ : ಕರ್ನಾಟಕ ಸೇರಿ ದಕ್ಷಿಣ ಭಾರತಕ್ಕೆ ನ್ಯಾಯಯುತ ಅನುದಾನ ನೀಡುವಂತೆ ಸಿಎಂ ಡಿ.ಕೆ ಶಿವಕುಮಾರ್ ಒತ್ತಾಯ

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಧಿಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ...

ರಾಯಚೂರು| ಬಾವಿಯಲ್ಲಿ ದಲಿತ ಯುವತಿ ಮೃತದೇಹ ಪತ್ತೆ; ಅತ್ಯಾಚಾರ-ಕೊಲೆ ಶಂಕೆ

ನಿನ್ನೆ ರಾತ್ರಿ ಬಯಲು ಶೌಚಾಲಯಕ್ಕೆಂದು ಮನೆಯಿಂದ ಹೊರಹೋಗಿದ್ದ ಯುವತಿಯೊಬ್ಬಳು ನಾಪತ್ತೆಯಾಗಿದ್ದು, ಇಂದು ಬೆಳಗ್ಗೆ ಜಮೀನಿನಲ್ಲಿದ್ದ ಬಾವಿಯಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಸಿರವಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಕ್ರಾಣಿ ಗ್ರಾಮದಲ್ಲಿ ಘಟನೆ ನಡೆಸಿದ್ದು, ಮೃತ...

ನಕಲಿ ಔಷಧ ಜಾಲದ ಸುಳಿವು ನೀಡಿದವರಿಗೆ ₹50,000 ನಗದು ಬಹುಮಾನ: ಆರೋಗ್ಯ ಇಲಾಖೆ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನಕಲಿ ಔಷಧ ಜಾಲದ ವಿರುದ್ಧ ಆರೋಗ್ಯ ಇಲಾಖೆ ಸಮರ ಸಾರಿದೆ. ರಾಜ್ಯದಲ್ಲಿ ನಕಲಿ ಔಷಧಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಹಾಗೂ ಪೂರೈಕೆ ಕುರಿತು ನಿಖರ ಮಾಹಿತಿ ನೀಡುವ...

ಎಬಿವಿಪಿ ಮತ್ತು ಎಡಪಂಥೀಯ ಗುಂಪುಗಳ ನಡುವೆ ವಾಗ್ವಾದ: ಮಧ್ಯರಾತ್ರಿ ಜಾದವ್‌ಪುರ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಳಿ ನಡೆಸಿದ ಹಿಂದುತ್ವವಾದಿ ಗುಂಪು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪ್ರತಿಷ್ಠಿತ ಜಾದವ್‌ಪುರ ವಿಶ್ವವಿದ್ಯಾಲಯದ (ಜೆ ಯು) ಕ್ಯಾಂಪಸ್‌ ಮೇಲೆ ತಡರಾತ್ರಿ ಹಿಂದುತ್ವವಾದಿ ಸಂಘಟನೆಗೆ ಸೇರಿದ ಗುಂಪೊಂದು ಭೀಕರ ದಾಳಿ ನಡೆಸಿದ್ದು, ವಿಶ್ವವಿದ್ಯಾಲಯದ ಆಸ್ತಿಪಾಸ್ತಿ ಧ್ವಂಸಗೊಳಿಸಿ ಹಲವು ವಿದ್ಯಾರ್ಥಿಗಳನ್ನು ತೀವ್ರವಾಗಿ...