Homeಕರ್ನಾಟಕವಿಧಾನಪರಿಷತ್ ಚುನಾವಣೆ: ಮೂರು ಪಕ್ಷಗಳಿಂದ 11 ಮಂದಿ ಅವಿರೋಧ ಆಯ್ಕೆ

ವಿಧಾನಪರಿಷತ್ ಚುನಾವಣೆ: ಮೂರು ಪಕ್ಷಗಳಿಂದ 11 ಮಂದಿ ಅವಿರೋಧ ಆಯ್ಕೆ

ಕಾಂಗ್ರೆಸ್‌ನಿಂದ 7, ಬಿಜೆಪಿಯಿಂದ 3 ಹಾಗೂ ಜೆಡಿಎಸ್‌ನಿಂದ ಓರ್ವ ಸದಸ್ಯ ಆಯ್ಕೆಯಾಗಿದ್ದಾರೆ

- Advertisement -
- Advertisement -

ವಿಧಾನಸಭೆಯಿಂದ ವಿಧಾನಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಮೂರು ಪಕ್ಷಗಳ 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಕುರಿತು ಚುನಾವಣಾಧಿಕಾರಿಯಾಗಿರುವ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್‌ನಿಂದ ಎನ್‌.ಎಸ್‌ ಭೋಸರಾಜು, ಐವನ್ ಡಿಸೋಜ, ಕೆ.ಗೋವಿಂದರಾಜ್, ಜಗದೇವ ಗುತ್ತೇದಾರ್, ಡಾ.ಯತೀಂದ್ರ, ಎ.ವಸಂತಕುಮಾರ್, ಬಿಲ್ಕಿಸ್ ಭಾನು, ಬಿಜೆಯಿಂದ ಸಿ.ಟಿ ರವಿ, ಎನ್‌.ರವಿಕುಮಾರ್ ಮತ್ತು ಎಂ.ಜಿ ಮುಳೆ, ಜೆಡಿಎಸ್‌ನಿಂದ ಟಿ.ಎನ್‌.ಜವರಾಯಿಗೌಡ ಅವರು ಆಯ್ಕೆಯಾಗಿದ್ದಾರೆ.

ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ತಿನ 11 ಸ್ಥಾನಗಳಿಗೆ ಜೂ.13ರಂದು ಚುನಾವಣೆ ನಡೆಯಬೇಕಿತ್ತು. 11 ಸ್ಥಾನಗಳಿಗೆ ಒಟ್ಟು 12 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ಆಸಿಫ್ ಪಾಷಾ ಎಂಬವರು ಸಲ್ಲಿಕೆ ಮಾಡಿದ್ದ ನಾಮಪತ್ರದಲ್ಲಿ ಸೂಚಕರಿಲ್ಲದ ಕಾರಣ ತಿರಸ್ಕೃತಗೊಂಡಿತ್ತು. ಗುರುವಾರ (ಜೂ.6) ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿತ್ತು. ಆದರೆ, ಯಾರೊಬ್ಬರೂ ನಾಮಪತ್ರ ಹಿಂಪಡೆಯದೆ ಇದ್ದುದ್ದರಿಂದ ಕಣದಲ್ಲಿದ್ದ ಎಲ್ಲ 11 ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ರಾಜ್ಯದ 9 ಮಂದಿ ಸಾವು: 13 ಜನರ ರಕ್ಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...