Homeಕರ್ನಾಟಕಪ್ಯಾಲೆಸ್ತೀನ್ ಪರ ಜಾಗೃತಿ ಕಾರ್ಯಕ್ರಮದಲ್ಲಿದ್ದವರ ಮೇಲೆ ಪೊಲೀಸ್ ದೌರ್ಜನ್ಯ: ತನಿಖೆಗೆ ಆಗ್ರಹಿಸಿದ ನಾಗರಿಕ ಸಂಘಟನೆಗಳು

ಪ್ಯಾಲೆಸ್ತೀನ್ ಪರ ಜಾಗೃತಿ ಕಾರ್ಯಕ್ರಮದಲ್ಲಿದ್ದವರ ಮೇಲೆ ಪೊಲೀಸ್ ದೌರ್ಜನ್ಯ: ತನಿಖೆಗೆ ಆಗ್ರಹಿಸಿದ ನಾಗರಿಕ ಸಂಘಟನೆಗಳು

- Advertisement -
- Advertisement -

ಪ್ಯಾಲೆಸ್ತೀನ್ ಪರ ಜಾಗೃತಿ ಕಾರ್ಯಕ್ರಮಕ್ಕೆ ಆಗಮಿಸಿದ್ದವರ ಮೇಲೆ ನಡೆದ ಪೊಲೀಸ್ ದೌರ್ಜನ್ಯದ ಕುರಿತು ತನಿಖೆಯಾಗಬೇಕು ಮತ್ತು ಈ ಸಂಬಂಧ ದಾಖಲಾಗಿರುವ ಎರಡು ಎಫ್‌ಐಆರ್‌ಗಳನ್ನು ರದ್ದುಗೊಳಿಸಬೇಕು ಎಂದು ನಾಗರಿಕ ಸಂಘಟನೆಗಳ ಪ್ರತಿನಿಧಿಗಳು ಆಗ್ರಹಿಸಿದ್ದಾರೆ.

ಬೆಂಗಳೂರು ಪೂರ್ವ ವಿಭಾಗದ ಡಿಸಿಪಿಯನ್ನು ಭೇಟಿಯಾಗಿರುವ ಪೀಪಲ್ಸ್‌ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್, ಆಲ್ ಇಂಡಿಯಾ ಸ್ಟೂಡೆಂಟ್ ಅಸೋಸಿಯೇಶನ್, ಕಲೆಕ್ಟಿವ್ ಬೆಂಗಳೂರು, ಸ್ಟೂಡೆಂಟ್ಸ್ ಫಾರ್ ಪೀಪಲ್ಸ್‌ ಡೆಮಾಕ್ರಸಿ, ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ ಸ್ಟೂಡೆಂಟ್ ಯೂನಿಯನ್, ಆಲ್‌ ಇಂಡಿಯಾ ಲಾಯರ್ಸ್ ಅಸೋಸಿಯೇಶನ್ ಫಾರ್ ಜಸ್ಟೀಸ್, ಅಡ್ವಕೇಟ್ಸ್ ಅಂಡ್ ಆಕ್ಟಿವಿಸ್ಟ್ ಸಂಘಟನೆಗಳ ಸದಸ್ಯರು ಮನವಿ ಪತ್ರ ಸಲ್ಲಿಸಿದ್ದಾರೆ.

ಮನವಿ ಪತ್ರದ ಲಿಂಕ್ ಇಲ್ಲಿದೆ

ಪ್ಯಾಲೆಸ್ತೀನ್‌ಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣ ಕುರಿತು ಜಾಗೃತಿ ಮೂಡಿಸಲು ಬೆಂಗಳೂರಿನ ಫ್ರೇಝರ್ ಟೌನ್‌ನಲ್ಲಿ ಜೂನ್‌ 2ರಂದು ‘ಬೆಂಗಳೂರು ವಿಥ್ ಗಾಝಾ’ ಎಂಬ ಹೆಸರಿನಲ್ಲಿ ಸಣ್ಣ ಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ನೆರೆದಿದ್ದ ಮಹಿಳೆಯರು, ವಿದ್ಯಾರ್ಥಿಗಳನ್ನು ಎಳೆದುಕೊಂಡು ಹೋಗಿದ್ದಾರೆ. ಕೇವಲ ಪುರುಷ ಪೊಲೀಸರು ಆಗಮಿಸಿ ಮಹಿಳೆಯರನ್ನೂ ಬಲವಂತವಾಗಿ ವಾಹನಕ್ಕೆ ಹತ್ತಿಸಿದ್ದಾರೆ. ಅಲ್ಲಿದ್ದವರಿಗೆ ಏನು ನಡೆಯುತ್ತಿದೆ ಎಂದು ವಿವರಿಸಲೂ ಸಮಯ ನೀಡಿಲ್ಲ ಎಂದು ಮನವಿ ಪತ್ರದಲ್ಲಿ ಆರೋಪಿಸಲಾಗಿದೆ.

ಗಾಝಾದಲ್ಲಿ ನಡೆಯುತ್ತಿರುವ ಹತ್ಯಾಕಾಂಡದ ಕುರಿತು ಜಾಗೃತಿ ಕಾರ್ಯಕ್ರಮ ಮಾತ್ರ ಆಯೋಜಿಸಲಾಗಿತ್ತು. ಅಲ್ಲಿ ಯಾವುದೇ ಪ್ರತಿಭಟನೆ ನಡೆಯುತ್ತಿರಲಿಲ್ಲ. ಹಾಗಾಗಿ, ಪ್ರತಿಭಟನೆಯ ಅನುಮತಿ ಪಡೆಯುವ ಅಗತ್ಯವಿರಲಿಲ್ಲ. ನೆರೆದಿದ್ದ ಜನರು ಯಾವುದೇ ಘೋಷಣೆಗಳನ್ನೂ ಕೂಗಿರಲಿಲ್ಲ. ಪೊಲೀಸರು ಯಾವುದೇ ಮಾಹಿತಿ ನೀಡದೆ ಏಕಾಏಕಿ ದೌರ್ಜನ್ಯ ನಡೆಸಿದ್ದಾರೆ. ಈ ವೇಳೆ ಪ್ರತಿರೋಧ ಒಡ್ಡುವ ಸಲುವಾಗಿ ಘೋಷಣೆ ಕೂಗಿದ್ದಾರೆ. ಘಟನೆಯ ವಿಡಿಯೋ ಮಾಡಲು ಮುಂದಾದಾಗ, ಅದಕ್ಕೂ ತಡೆಯೊಡ್ಡಿದ್ದ ಪೊಲೀಸರು, ಮೊಬೈಲ್ ಕಿತ್ತುಕೊಳ್ಳುವುದಾಗಿ ಹೆದರಿಸಿದ್ದಾರೆ ಎಂದು ಮನವಿ ಪತ್ರದಲ್ಲಿ ವಿವರಿಸಲಾಗಿದೆ.

ಪೊಲೀಸರ ಕ್ರಮ ಖಂಡನೀಯ ಮಾತ್ರವಲ್ಲದೆ, ನಾಗರಿಕರ ಅಭಿವ್ಯಕ್ತಿ ಹಕ್ಕಿನ ಉಲ್ಲಂಘನೆಯಾಗಿದೆ. ಭಾರತ ದೇಶ ಅಧಿಕೃವಾಗಿ ಪ್ಯಾಲೆಸ್ತೀನ್‌ಗೆ ಬೆಂಬಲ ಸೂಚಿಸಿರುವಾಗ, ಸಿಎಂ ಸಿದ್ದರಾಮಯ್ಯ ಜನರ ಅಭಿವ್ಯಕ್ತಿ ಸ್ವಾತಂತ್ರ್ಯದಲ್ಲಿ ಮಧ್ಯ ಪ್ರವೇಶಿಸುದಿಲ್ಲ ಎಂದು ಹೇಳಿರುವಾಗ ಪೊಲೀಸರು ನಡೆದುಕೊಂಡಿರುವ ರೀತಿ ಖಂಡನೀಯ. ಘಟನೆಗೆ ಸಂಬಂಧಿಸಿದಂತೆ ನಾಗರಿಕರ ಮೇಲೆ ಪೊಲೀಸರು ಎರಡು ಎಫ್‌ಐಆರ್ ದಾಖಲಿಸಿದ್ದಾರೆ. ಅವುಗಳನ್ನು ರದ್ದುಗೊಳಿಸಬೇಕು ಮತ್ತು ಪೊಲೀಸ್ ದೌರ್ಜನ್ಯದ ಕುರಿತು ತನಿಖೆಯಾಗಬೇಕು ಎಂದು ನಾಗರಿಕ ಸಂಘಟನೆಗಳ ಪ್ರತಿನಿಧಿಗಳು ಡಿಸಿಪಿಗೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ : ಕರ್ನಾಟಕದಲ್ಲಿ ವಿವಾದಿತ ‘ಹಮಾರೆ ಬಾರಹ್’ ಸಿನಿಮಾ ಬಿಡುಗಡೆ ನಿಷೇಧಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...