HomeUncategorizedಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ: ಬೆಂಗಳೂರು ಸಿವಿಲ್ ಕೋರ್ಟಿನಿಂದ ರಾಹುಲ್ ಗಾಂಧಿಗೆ ಜಾಮೀನು

ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ: ಬೆಂಗಳೂರು ಸಿವಿಲ್ ಕೋರ್ಟಿನಿಂದ ರಾಹುಲ್ ಗಾಂಧಿಗೆ ಜಾಮೀನು

- Advertisement -
- Advertisement -

2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಬಿಜೆಪಿಯ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ದಾಖಲಿಸಲಾಗಿರುವ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ ಇಂದು ‍ಷರತ್ತುಬದ್ದ ಜಾಮೀನು ನೀಡಿದೆ.

ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಎಸ್‌ ಕೇಶವಪ್ರಸಾದ್ ಸಲ್ಲಿಸಿರುವ ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸಿದ್ದ ಜನ ಪ್ರತಿನಿಧಿಗಳ ವಿಶೇಷ ಕೋರ್ಟ್, ರಾಹುಲ್ ಗಾಂಧಿ, ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಅವರಿಗೆ ಸಮನ್ಸ್ ನೀಡಿತ್ತು. ಹೀಗಾಗಿ, ಸಿದ್ದರಾಮಯ್ಯ ಮತ್ತು ಡಿಕೆಶಿ ಜೂನ್ 1ರಂದು ನ್ಯಾಯಾಲಯಕ್ಕೆ ಹಾಜರಾಗಿದ್ದರು. ನ್ಯಾಯಾಲಯ ಅವರಿಗೆ ಜಾಮೀನು ನೀಡಿತ್ತು.

ಮಾನನಷ್ಟ ಮೊಕದ್ದಮೆಯ ವಿಚಾರಣೆ ನಡೆಸಿದ್ದ ಬೆಂಗಳೂರಿನ 42 ನೇ ಎಸಿಎಂಎಂ ಪ್ರಕರಣದಲ್ಲಿ ಖುದ್ದು ಹಾಜರಾಗಲುಬ ಸಮನ್ಸ್ ನೀಡಿತ್ತು. ಹೀಗಾಗಿ ರಾಹುಲ್ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.ಈ ವೇಳೆ ರಾಹುಲ್ ಪರ ವಕೀಲರ ಜಾಮೀನು ನೀಡುವಂತೆ ಮನವಿ ಮಾಡಿದರು. ಇದನ್ನ ಮಾನ್ಯ ಮಾಡಿದ ನ್ಯಾಯಾಧೀಶರು ಷರತ್ತುಬದ್ದ ಜಾಮೀನು ನೀಡಿದ್ದಾರೆ. ರಾಹುಲ್ ಗಾಂಧಿ ಅವರಿಗೆ ಮಾಜಿ ಸಂಸದ ಡಿಕೆ ಸುರೇಶ್‌ ಶ್ಯೂರಿಟಿ ನೀಡಿದ್ದಾರೆ; ಅದನ್ನು ಪುರಸ್ಕಿಸಿದ ನ್ಯಾಯಾಲಯ ಜಾಮೀನು ನೀಡಿ ಜುಲೈ 30ಕ್ಕೆ ವಿಚಾರಣೆ ಮುಂದೂಡಿದೆ.

ಈ ಹಿಂದೆ ವಿಚಾರಣೆಗೆ ಎರಡು ಬಾರಿ ವಿನಾಯಿತಿ ನೀಡಲಾಗಿದ್ದು, ಮೂರನೇ ಬಾರಿ ಖುದ್ದು ಹಾಜರಾಗಲು ಸೂಚನೆ ನೀಡಿತ್ತು. ಹೀಗಾಗಿ ರಾಹುಲ್‌ ಗಾಂಧಿ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಜಾಮೀನು ಅರ್ಜಿ ವಿಚಾರಣೆ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ರಾಹುಲ್ ಗಾಂಧಿಗೆ ಸಾಥ್ ನೀಡಿದರು.

ರಾಹುಲ್ ಗಾಂಧಿ ಜೂನ್‌ 1ರಂದು ವಿಚಾರಣೆಗೆ ಹಾಜರಾಗುವುದರಿಂದ ವಿನಾಯಿತಿ ಕೋರಿದ್ದರು. ಈ ಮನವಿಯನ್ನು ತಿರಸ್ಕರಿಸಿದ ನ್ಯಾಯಾಲಯ, ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿ ಜೂನ್‌ 7ರೊಳಗೆ ಹಾಜರಾಗಬೇಕೆಂದು ಆದೇಶಿಸಿತ್ತು.

ಈ ಹಿನ್ನೆಲೆ, ಇಂದು ವಿಚಾರಣೆಗೆ ಹಾಜರಾಗಲು ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದರು. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಹುಲ್ ಗಾಂಧಿಯನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಬರಮಾಡಿಕೊಂಡಿದ್ದಾರೆ.

ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ಮೊದಲ ಆರೋಪಿಯಾದರೆ, ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಮತ್ತು ರಾಹುಲ್ ಗಾಂಧಿ ಕ್ರಮವಾಗಿ 2,3 ಮತ್ತು 4ನೇ ಆರೋಪಿಗಳಾಗಿದ್ದಾರೆ.

ಇದನ್ನೂ ಓದಿ; ಪ್ಯಾಲೆಸ್ತೀನ್ ಪರ ಜಾಗೃತಿ ಕಾರ್ಯಕ್ರಮದಲ್ಲಿದ್ದವರ ಮೇಲೆ ಪೊಲೀಸ್ ದೌರ್ಜನ್ಯ: ತನಿಖೆಗೆ ಆಗ್ರಹಿಸಿದ ನಾಗರಿಕ ಸಂಘಟನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...