Homeಫ್ಯಾಕ್ಟ್‌ಚೆಕ್FACT CHECK : ಯಾದಗಿರಿಯಲ್ಲಿ ರೈತನ ಜಮೀನನ್ನು ವಕ್ಫ್ ಬೋರ್ಡ್ ಕಿತ್ತುಕೊಂಡಿದೆ ಎಂಬುವುದು ಸುಳ್ಳು

FACT CHECK : ಯಾದಗಿರಿಯಲ್ಲಿ ರೈತನ ಜಮೀನನ್ನು ವಕ್ಫ್ ಬೋರ್ಡ್ ಕಿತ್ತುಕೊಂಡಿದೆ ಎಂಬುವುದು ಸುಳ್ಳು

- Advertisement -
- Advertisement -

ಕರ್ನಾಟಕದ ಯಾದಗಿರಿ ಜಿಲ್ಲೆಯ ಶಾಬಾದ್ ಗ್ರಾಮದಲ್ಲಿ ರೈತರೊಬ್ಬರ ಜಮೀನನನ್ನು ವಕ್ಫ್ ಬೋರ್ಡ್‌ ಕಿತ್ತುಕೊಂಡಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯೊಂದು ಹಬ್ಬಿದೆ.

ಡಿಜಿಟಲ್ ನ್ಯೂಸ್ ಆಪ್‌ ಒಂದರಲ್ಲಿ ತೆಲುಗು ಭಾಷೆಯಲ್ಲಿ ಪ್ರಕಟಗೊಂಡ ಸುದ್ದಿಯನ್ನು ಹಲವು ಬಲಪಂಥೀಯ ಎಕ್ಸ್‌ ಬಳಕೆದಾರರು ಹಂಚಿಕೊಂಡಿದ್ದಾರೆ.

Tathvam-asi(@ssaratht) ಎಂಬ ಎಕ್ಸ್ ಬಳಕೆದಾರೊಬ್ಬರು ಸುದ್ದಿಯ ಸ್ಕ್ರೀನ್ ಶಾಟ್ ಹಂಚಿಕೊಂಡು ” ಮತ್ತೊಂದು ಲ್ಯಾಂಡ್ ಜಿಹಾದ್. ಕರ್ನಾಟಕದ ಯಾದಗಿರಿ ಜಿಲ್ಲೆಯ ಶಾಬಾದ್ ಗ್ರಾಮದಲ್ಲಿ ರೈತ ಅರ್ಜುನಪ್ಪ ತಮ್ಮ ಜಮೀನು ವಕ್ಫ್ ಮಂಡಳಿ ಸ್ವಾಧೀನಪಡಿಸಿಕೊಂಡಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ”

“ಅವರ ಜಮೀನಿನಲ್ಲಿ ಬಹಳ ಹಿಂದೆಯೇ ದರ್ಗಾ ನಿರ್ಮಿಸಲಾಗಿದ್ದು, ಮಗಳ ಮದುವೆಗಾಗಿ ಜಮೀನು ಮಾರಾಟ ಮಾಡಲು ಮುಂದಾದಾಗ ಅಧಿಕಾರಿಗಳು ಈ ಜಮೀನು ವಕ್ಫ್ ಮಂಡಳಿಗೆ ಸೇರಿದ್ದು, ಅದರ ಮೇಲೆ ತನಗೆ ಯಾವುದೇ ಹಕ್ಕಿಲ್ಲ ಎಂದು ತಿಳಿಸಿದ್ದಾರೆ.”

“ಒಂದು ವೇಳೆ ಭೂಮಿಯನ್ನು ಮರಳಿ ಪಡೆಯಲು ಸಾಧ್ಯವಾಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದೊಂದೇ ರೈತನ ಆಯ್ಕೆಯಾಗಿದೆ. ಅವರು 3 ವರ್ಷಗಳಿಂದ ಇದಕ್ಕಾಗಿ ಹೋರಾಡುತ್ತಿದ್ದಾರೆ. ಇದು ಹಿಂದೂಗಳ ಭವಿಷ್ಯ. ಇದು ಎಲ್ಲೆಡೆ ನಡೆಯುತ್ತಿದೆ. ತಮಿಳುನಾಡು, ತೆಲಂಗಾಣ ಅಥವಾ ಕರ್ನಾಟಕವಾಗಲಿ ವಕ್ಫ್ ಭೂ ಕಬಳಿಕೆ ನಿಜ.”

“ಇತ್ತೀಚೆಗೆ ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿ ದೊಡ್ಡ ಸಂಸ್ಥೆಗಳಿಗೂ ಈ ತೊಂದರೆ ಎದುರಾಗಿದೆ ಎಂಬುವುದನ್ನು ನೆನಪಿಸಿಕೊಳ್ಳಿ. ಅವರು ಶ್ರೀಮಂತರು ಮತ್ತು ಪ್ರಸಿದ್ಧರು, ಅವರು ನ್ಯಾಯಾಲಯಗಳಿಗೆ ಹೋಗಿ ವಕ್ಫ್ ವಿರುದ್ದ ಹೋರಾಡಿದು. ಆದರೆ, ಒಬ್ಬ ಬಡ ಹಿಂದೂ 3 ವರ್ಷಗಳಿಂದ ಯಾವುದೇ ಬೆಂಬಲವಿಲ್ಲದೆ ಹೋರಾಡುತ್ತಿದ್ದಾನೆ. ಕಾನೂನು ಶ್ರೀಮಂತರಿಗೆ ಮಾತ್ರ ಎಂಬುವುದು ಇದರಿಂದ ಸಾಬೀತಾಗಿದೆ.” ಎಂದು ಬರೆದುಕೊಂಡಿದ್ದಾರೆ.

‘My India My Pride'(@munothbharath) ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ ಅದೇ ರೀತಿ ಪೋಸ್ಟ್ ಹಾಕಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ಸುದ್ದಿಯ ಸತ್ಯಾಸತ್ಯತೆ ತಿಳಿಯಲು ನಾವು ಮೊದಲು ಯಾದಗಿರಿ ಜಿಲ್ಲೆಯಲ್ಲಿ ವಕ್ಫ್ ಬೋರ್ಡ್ ರೈತನಿಂದ ಜಮೀನು ವಾಪಸ್ ಪಡೆದುಕೊಂಡಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಆಗಿದೆಯಾ? ಎಂದು ಪರಿಶೀಲಿಸಿದ್ದೇವೆ. ಈ ವೇಳೆ ಅಂತಹ ಯಾವುದೇ ಸುದ್ದಿ ನಮಗೆ ಕಂಡು ಬಂದಿಲ್ಲ.

ಯಾದಗಿರಿ ಜಿಲ್ಲೆಯಲ್ಲಿ ಶಾಬಾದ್‌ ಎಂಬ ಗ್ರಾಮ ಇದೆಯೇ ಎಂಬ ಬಗ್ಗೆ ನಾವು ಪರಿಶೀಲಿಸಿದ್ದೇವೆ. ಯಾದಗಿರಿ ಜಿಲ್ಲಾಡಳಿತದ ಅಧಿಕೃತ ವೆಬ್‌ ಸೈಟ್‌ನಲ್ಲಿ ‘ಶಾಬಾದ್‌’ ಎಂಬ ಗ್ರಾಮದ ಹೆಸರು ಕಂಡು ಬಂದಿಲ್ಲ.

ವೈರಲ್ ಸುದ್ದಿಯಲ್ಲಿರುವ ದರ್ಗಾ ಎನ್ನಲಾದ ಕಟ್ಟಡದ ಫೋಟೋವನ್ನು ನಾವು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ಅದು ‘ನಾಗ್ಪುರದಲ್ಲಿರುವ ಬಾಬಾ ಆಶಿಕ್‌ ಶಾಲ ಮಶೂಕ್‌ ಶಾ ರಹ್ಮತುಲ್ಲಾ ಅಲೈಹಿ ಇಸಾಸನಿ ತೆಕ್ಡಿ’ ಹೆಸರಿನ ದರ್ಗಾ ಎಂದು ಕಂಡು ಬಂದಿದೆ. ಈ ಕುರಿತ ಫೇಸ್‌ಬುಕ್‌ ಪೇಜ್ ಕೂಡ ಲಭ್ಯವಾಗಿದೆ.

ಗೂಗಲ್ ಮ್ಯಾಪ್‌ನಲ್ಲಿ ಸರ್ಚ್ ಮಾಡಿದಾಗ ನಾಗ್ಪುರದ ಇಸಸಾನಿಯಲ್ಲಿ ‘ಬಾಬಾ ಆಶಿಕ್‌ ಶಾಲ ಮಶೂಕ್‌ ಶಾ ರಹ್ಮತುಲ್ಲಾಹಿ ಅಲೈಹಿ’ ದರ್ಗಾ ಇದೆ ಎಂದು ಕಂಡುಕೊಂಡಿದ್ದೇವೆ.

 

ಗೂಗಲ್ ಮ್ಯಾಪ್ ಫೋಟೋ                                  ವೈರಲ್ ಸುದ್ದಿಯಲ್ಲಿರುವ ಫೋಟೋ

ವೈರಲ್‌ ಸುದ್ದಿಯಲ್ಲಿರುವ ಫೋಟೋ ಮತ್ತು ಗೂಗಲ್‌ ಮ್ಯಾಪ್‌ ಫೋಟೋ ಎರಡನ್ನೂ ಪರಿಶೀಲಿಸಿದ ವೇಳೆ ಎರಡರಲ್ಲೂ ಸಾಮ್ಯತೆ ಕಂಡು ಬಂದಿದೆ.

ಈ ಕುರಿತು ಇನ್ನಷ್ಟು ಖಚಿತಪಡಿಸಿಕೊಳ್ಳಲು ಯಾದಗಿರಿ ಜಿಲ್ಲೆಯ ವಕ್ಫ್ ಅಧಿಕಾರಿಯೊಬ್ಬರ ಜೊತೆ ನಾವು ದೂರವಾಣಿ ಮೂಲಕ ಮಾತನಾಡಿದ್ದೇವೆ. ಅವರು “ಈ ಬಗ್ಗೆ ನಮಗೆ ಯಾವುದೇ ಮಾಹಿತಿಯಿಲ್ಲ. ವೈರಲ್ ಸುದ್ದಿಯಲ್ಲಿರುವ ಜಮೀನಿನ ಸರ್ವೆ ನಂಬರ್ ಕೊಟ್ಟರೆ ನಾವು ಪರಿಶೀಲನೆ ನಡೆಸುತ್ತೇವೆ” ಎಂದು ಹೇಳಿದ್ದಾರೆ.

ವೈರಲ್ ಸುದ್ದಿಯಲ್ಲಿ ವಕ್ಫ್ ಇಲಾಖೆ ರೈತನ ಜಮೀನು ಕಿತ್ತುಕೊಂಡಿದೆ ಎಂದು ಹೇಳಲಾಗಿದೆ. ಆದರೆ, ವಕ್ಫ್ ಅಧಿಕಾರಿ ಈ ಬಗ್ಗೆ ನಮಗೆ ಮಾಹಿತಿಯೇ ಇಲ್ಲ ಎಂದಿದ್ದಾರೆ. ಅಲ್ಲದೆ, ವೈರಲ್ ಸುದ್ದಿಯಲ್ಲಿರುವ ದರ್ಗಾ ಎನ್ನಲಾದ ಕಟ್ಟಡದ ಫೋಟೋವನ್ನು ಗೂಗಲ್‌ನಲ್ಲಿ ಹುಡುಕಿದಾಗ, ಅದು ನಾಗ್ಪುರದ ಒಂದು ದರ್ಗಾವನ್ನು ತೋರಿಸುತ್ತಿದೆ. ಆದ್ದರಿಂದ ವೈರಲ್ ಸುದ್ದಿ ಸುಳ್ಳು ಎಂದು ಹೇಳಬಹುದು.

ಇದನ್ನೂ ಓದಿ : FACT CHECK : ಮುಸ್ಲಿಂ ವ್ಯಕ್ತಿ ಹಿಂದೂಗಳನ್ನು ನಿಂದಿಸಿದ್ದಾರೆ ಎನ್ನಲಾದ ವಿಡಿಯೋ ನಕಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...