Homeಮುಖಪುಟಲೋಕಸಭಾ ಚುನಾವಣಾ ಫಲಿತಾಂಶ: 2024ರ ಚುನಾವಣೆಯಲ್ಲಿ 'ಟ್ರಾನ್ಸ್‌ ಜೆಂಡರ್' ಮತದಾರರ ಸಂಖ್ಯೆಯಲ್ಲಿ ಹೆಚ್ಚಳ

ಲೋಕಸಭಾ ಚುನಾವಣಾ ಫಲಿತಾಂಶ: 2024ರ ಚುನಾವಣೆಯಲ್ಲಿ ‘ಟ್ರಾನ್ಸ್‌ ಜೆಂಡರ್’ ಮತದಾರರ ಸಂಖ್ಯೆಯಲ್ಲಿ ಹೆಚ್ಚಳ

- Advertisement -
- Advertisement -

ಚುನಾವಣಾ ಆಯೋಗದ (ಇಸಿ) ಅಂಕಿಅಂಶಗಳ ಪ್ರಕಾರ, 2019ರ ಸಾರ್ವತ್ರಿಕ ಚುನಾವಣೆಗಳಿಗೆ ಹೋಲಿಸಿದರೆ 2024 ರ ಲೋಕಸಭಾ ಚುನಾವಣೆಯಲ್ಲಿ ಟ್ರಾನ್ಸ್‌ ಜೆಂಡರ್ (ತೃತೀಯ ಲಿಂಗ) ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿದ್ದಾರೆ. 2024 ರಲ್ಲಿ, ತೃತೀಯ ಲಿಂಗದ ಮತದಾರರು ಶೇಕಡಾ 25 ರಷ್ಟಿದ್ದರೆ, ಕಳೆದ ಚುನಾವಣೆಯಲ್ಲಿ ಅದು ಶೇಕಡಾ 14.58 ರಷ್ಟಿತ್ತು.

ಈಗಷ್ಟೇ ಮುಗಿದಿರುವ ಏಳು ಹಂತದ ಲೋಕಸಭೆ ಚುನಾವಣೆಗೆ ಚುನಾವಣಾ ಆಯೋಗ ಹಂತ-ಹಂತದ ಡೇಟಾವನ್ನು ಬಿಡುಗಡೆ ಮಾಡಿದೆ. ಏಪ್ರಿಲ್ 19 ರಂದು ನಡೆದ 2024 ರ ಮೊದಲ ಹಂತದ ಚುನಾವಣೆಯಲ್ಲಿ ತೃತೀಯ ಲಿಂಗದ ಮತದಾರರು ಶೇಕಡಾ 31.32 ರಷ್ಟಿದ್ದರು. ಏಪ್ರಿಲ್ 26ರಂದು ನಡೆದ ಎರಡನೇ ಹಂತದಲ್ಲಿ ಶೇ.23.86, ಮೇ 7ರಂದು ನಡೆದ ಮೂರನೇ ಹಂತದಲ್ಲಿ ಶೇ.25.2, ಮೇ 13ರಂದು ನಡೆದ ನಾಲ್ಕನೇ ಹಂತದಲ್ಲಿ ಶೇ.34.23, ಮೇ 20ರಂದು ನಡೆದ ಐದನೇ ಹಂತದಲ್ಲಿ ಶೇ.21.96 ಮತ್ತು ಮೇ 25 ರಂದು ನಡೆದ ಆರನೇ ಹಂತದಲ್ಲಿ ಶೇ. 18.67 ರಷ್ಟು ಜನ ಮತದಾನ ಮಾಡಿದ್ದಾರೆ.

ಜೂನ್ 1 ರಂದು ನಡೆದ ಅಂತಿಮ ಮತ್ತು ಏಳನೇ ಹಂತದ ಮತದಾನದಲ್ಲಿ ಶೇ 22.33 ರಷ್ಟು ತೃತೀಯಲಿಂಗಿ ಮತದಾನವಾಗಿದೆ. 2011ರ ಜನಗಣತಿ ಪ್ರಕಾರ ದೇಶದಲ್ಲಿ 4,87,803 ತೃತೀಯಲಿಂಗಿಗಳಿದ್ದಾರೆ.

18ನೇ ಲೋಕಸಭೆಯಲ್ಲಿ ಬಿಜೆಪಿ 240 ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ನಂತರದ ದೊಡ್ಡ ಪಕ್ಷ ಕಾಂಗ್ರೆಸ್ 99 ಸ್ಥಾನಗಳೊಂದಿಗೆ, ಸಮಾಜವಾದಿ ಪಕ್ಷವು 37 ಸ್ಥಾನಗಳನ್ನು ಗಳಿಸಿದೆ.

ಒಟ್ಟು ಮತದಾನದ ಪ್ರಮಾಣ

2024 ರ ಲೋಕಸಭಾ ಚುನಾವಣೆಯ ಒಟ್ಟಾರೆ ಮತದಾನದ ಪ್ರಮಾಣವು ಶೇಕಡಾ 65.79 ರಷ್ಟಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಗುರುವಾರ (ಜೂನ್ 6) ಹೇಳಿಕೆಯಲ್ಲಿ ತಿಳಿಸಿದೆ. ರಾಜ್ಯಗಳ ಪೈಕಿ ಅಸ್ಸಾಂನಲ್ಲಿ ಶೇ.81.56ರಷ್ಟು ಮತದಾನವಾಗಿದೆ. ರಾಜ್ಯಗಳ ಪೈಕಿ ಶೇ.56.19 ರಷ್ಟು ಮತದಾನದಲ್ಲಿ ಬಿಹಾರ ಕಡಿಮೆ ಮತದಾನವಾಗಿದೆ ಎಂದು ಇಸಿ ಹೇಳಿದೆ.

“ಅಂಚೆ ಮತಗಳ ಸಂಖ್ಯೆ ಮತ್ತು ಒಟ್ಟು ಮತದಾನದ ಪ್ರಮಾಣ ಹೊಂದಿರುವ ವಿವರವಾದ ಅಂಕಿಅಂಶಗಳ ವರದಿಗಳು ವಿವರಗಳನ್ನು ಅಂತಿಮಗೊಳಿಸಿದ ನಂತರ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಲಭ್ಯವಾಗುವಂತೆ ಮಾಡಲಾಗುತ್ತದೆ” ಎಂದು ಆಯೋಗ ಹೇಳಿದೆ.

ಚುನಾವಣಾ ಆಯೋಗದ ಪ್ರಕಾರ, ಪುರುಷ ಮತದಾರರು ಶೇಕಡಾ 63.11 ರಷ್ಟಿದ್ದರೆ, ಶೇಕಡಾ 64.72 ರಷ್ಟು ಮಹಿಳಾ ಮತದಾರರು ಮತ ಚಲಾಯಿಸಿದ್ದಾರೆ. ತೃತೀಯ ಲಿಂಗದ ಮತದಾನದ ಪ್ರಮಾಣವು ಶೇಕಡಾ 22.33 ರಷ್ಟಿತ್ತು. ಈ ವಾರದ ಆರಂಭದಲ್ಲಿ, ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ 64.2 ಕೋಟಿ ಮತದಾರರೊಂದಿಗೆ ಭಾರತವು ಇತಿಹಾಸವನ್ನು ನಿರ್ಮಿಸಿದೆ ಎಂದು ಪ್ರತಿಪಾದಿಸಿದರು.

ಇದನ್ನೂ ಓದಿ; ‘ಸ್ಪೀಕರ್ ಸ್ಥಾನವನ್ನು ಪಡೆಯಿರಿ..’; ಬಿಜೆಪಿ ಮಿತ್ರಪಕ್ಷಗಳಿಗೆ ಎಚ್ಚರಿಕೆ ನೀಡಿದ ಆದಿತ್ಯ ಠಾಕ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...