Homeಮುಖಪುಟಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ: ಕ್ರಮಕ್ಕೆ ಕಾಂಗ್ರೆಸ್...

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ: ಕ್ರಮಕ್ಕೆ ಕಾಂಗ್ರೆಸ್ ಆಗ್ರಹ

- Advertisement -
- Advertisement -

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಟೆ, “ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಮಹಿಳೆಯರ ಲೈಂಗಿಕ ಶೋಷಣೆಯಲ್ಲಿ ತೊಡಗಿದ್ದಾರೆ. 5 ಸ್ಟಾರ್ ಹೋಟೆಲ್‌ಗಳು ಮಾತ್ರವಲ್ಲದೆ, ಪಶ್ಚಿಮ ಬಂಗಾಳದ ಬಿಜೆಪಿ ಕಚೇರಿಯಲ್ಲೂ ನೀಚ ಕೃತ್ಯವೆಸಗಿದ್ದಾರೆ ಎಂದು ಆರ್‌ಎಸ್‌ಎಸ್ ಸದಸ್ಯ ಶಾಂತನು ಸಿನ್ಹಾ ಆರೋಪಿಸಿದ್ದಾರೆ” ಎಂದು ತಿಳಿಸಿದ್ದಾರೆ.

“ನಾವು ಬಿಜೆಪಿಗೆ ಕೇಳುವ ಏಕೈಕ ವಿಷಯವೆಂದರೆ ಮಹಿಳೆಯರಿಗೆ ನ್ಯಾಯ. ಪ್ರಧಾನಿ ಮೋದಿ ಪ್ರಮಾಣವಚನ ಸ್ವೀಕರಿಸಿದ 24 ಗಂಟೆಯೊಳಗೆ ಬಿಜೆಪಿಯ ಪ್ರಮುಖ ಪದಾಧಿಕಾರಿಯ ವಿರುದ್ಧ ಲೈಂಗಿಕ ಶೋಷಣೆಯ ಗಂಭೀರ ಆರೋಪ ಕೇಳಿ ಬಂದಿದೆ. ನಾವು ಅಮಿತ್ ಮಾಳವೀಯಾ ಅವರನ್ನು ಅವರ ಹುದ್ದೆಯಿಂದ ವಜಾಗೊಳಿಸುವಂತೆ ಆಗ್ರಹಿಸುತ್ತಿದ್ದೇವೆ” ಎಂದು ಸುಪ್ರಿಯಾ ಶ್ರೀನಾಟೆ ಹೇಳಿದ್ದಾರೆ.

“ಇದು ಬಿಜೆಪಿಯ ಐಟಿ ಸೆಲ್ಲಾ..ಇಲ್ಲ ಅಪರಾಧಿಗಳ ಕೂಟವೇ? ಮಹಿಳೆಯರ ವಿರುದ್ಧದ ಯಾವುದೇ ಅಪರಾಧದಲ್ಲಿ ಬಿಜೆಪಿ ನಾಯಕರೇ ಯಾವಾಗಲೂ ಆರೋಪಿಯಾಗಿರುವುದು ಏಕೆ? ಬಿಜೆಪಿ ಪದಾಧಿಕಾರಿಯ ವಿರುದ್ಧ ಗಂಭೀರ ಆರೋಪಗಳು ಕೇಳಿ ಬಂದರೂ, ಇಡೀ ಬಿಜೆಪಿ ಮೌನವಾಗಿರುವುದು ಏಕೆ? ಇಂತಹ ಆರೋಪಗಳ ಬಗ್ಗೆ ಮೌನವಹಿಸುವುದರ ಹಿಂದಿನ ಸತ್ಯವೇನು, ಈ ಪದಾಧಿಕಾರಿಯನ್ನು ಏಕೆ ಮತ್ತು ಯಾರ ಇಚ್ಛೆಯಂತೆ ರಕ್ಷಿಸಲಾಗುತ್ತಿದೆ? ಸದಾ ಆರೋಪಿಗಳಿಗೆ ರಕ್ಷಣೆ ನೀಡುವ ನರೇಂದ್ರ ಮೋದಿಯವರು ಮಹಿಳಾ ರಕ್ಷಣೆಯ ಬಗ್ಗೆ ಯಾವ ಬಾಯಲ್ಲಿ ಮಾತನಾಡುತ್ತಾರೆ? ಎಂದು ಸುಪ್ರಿಯಾ ಪ್ರಶ್ನಿಸಿದ್ದಾರೆ.

ಮಾನನಷ್ಟ ಮೊಕದ್ದಮೆ ಹೂಡಿದ ಮಾಳವೀಯ

ಅಮಿತ್ ಮಾಳವೀಯಾ ಮಹಿಳೆಯರ ಲೈಂಗಿಕ ಶೋಷಣೆಯಲ್ಲಿ ತೊಡಗಿದ್ದಾರೆ ಎಂದು ಆರೆಸ್ಸೆಸ್ ಸದಸ್ಯ ಶಾಂತನು ಸಿನ್ಹಾ ಆರೋಪಿಸಿದ ಬೆನ್ನಲ್ಲೇ, ಮಾಳವೀಯ ಸೋಮವಾರ ಸಿನ್ಹಾ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ವರದಿಯಾಗಿದೆ. ಲೀಗಲ್ ನೋಟಿಸ್‌ನಲ್ಲಿ, ಸಾಮಾಜಿಕ ಮಾಧ್ಯಮದಿಂದ ಸಿನ್ಹಾ ಅವರ “ಸುಳ್ಳು ಮತ್ತು ಅವಹೇಳನಕಾರಿ” ಪೋಸ್ಟ್ ಅನ್ನು ತೆಗೆದುಹಾಕುವಂತೆಯೂ ಮಾಳವಿಯಾ ಕೋರಿದ್ದಾರೆ ಎಂದು ವರದಿ ಹೇಳಿದೆ.

ಇದನ್ನೂ ಓದಿ : ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ಬಿಭವ್ ಕುಮಾರ್ ವಿರುದ್ಧ ಹೆಚ್ಚುವರಿ ಸೆಕ್ಷನ್ ಸೇರಿಸಿದ ದೆಹಲಿ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...