Homeಮುಖಪುಟಪ್ಯಾಲೆಸ್ತೀನ್ ಪರ ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಪದವಿ ನಿರಾಕರಿಸಿದ ಹಾರ್ವರ್ಡ್ ವಿವಿ

ಪ್ಯಾಲೆಸ್ತೀನ್ ಪರ ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಪದವಿ ನಿರಾಕರಿಸಿದ ಹಾರ್ವರ್ಡ್ ವಿವಿ

- Advertisement -
- Advertisement -

ಪ್ಯಾಲೆಸ್ತೀನ್ ಪರ ಪ್ರತಿಭಟನೆಯಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಹಾರ್ವರ್ಡ್ ವಿಶ್ವ ವಿದ್ಯಾಲಯ ಪದವಿ ನೀಡಲು ನಿರಾಕರಿಸಿದೆ ಎಂದು ಅಲ್ ಜಝೀರಾ ವರದಿ ಮಾಡಿದೆ.

ವಿವಿಯ 2024ನೇ ಸಾಲಿನ ಘಟಿಕೋತ್ಸವ ಮುಗಿದು ಎರಡು ವಾರಗಳು ಕಳೆದಿದ್ದು, ಆದರೂ ಅಸ್ಮರ್ ಅಸ್ರಾರ್ ಸಫಿ (23) ಎಂಬ ವಿದ್ಯಾರ್ಥಿ ತಾನು ನಾಲ್ಕು ವರ್ಷಗಳ ಕಾಲ ಕಷ್ಟಪಟ್ಟು ಓದಿದ್ದಕ್ಕೆ ಪದವಿ ಸ್ವೀಕರಿಸಲು ಹೆಣಗಾಡುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ಮೂಲತಃ ಪಾಕಿಸ್ತಾನದ ಲಾಹೋರಿನವರಾದ ಸಫಿ ಜೊತೆ ಇನ್ನೂ 12 ವಿದ್ಯಾರ್ಥಿಗಳು ಇದೇ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇವರೆಲ್ಲರೂ ವಿಶ್ವದ ಅತ್ಯಂತ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾಗಿರುವ ಹಾರ್ವರ್ಡ್‌ನಲ್ಲಿ ತಮ್ಮ ವ್ಯಾಸಂಗವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಆದರೆ, ಕನಿಷ್ಠ ಒಂದು ವರ್ಷದವರಿಗೆ ಪದವಿಗಳನ್ನು ನೀಡಲಾಗುವುದಿಲ್ಲ ಎಂದು ಅಲ್ ಜಝೀರಾ ವರದಿ ಹೇಳಿದೆ.

ವಿಶ್ವ ವಿದ್ಯಾನಿಲಯದ ಉನ್ನತ ಆಡಳಿತ ಮಂಡಳಿಯಾದ ಹಾರ್ವರ್ಡ್ ಕಾರ್ಪೊರೇಷನ್, ಕಳೆದ ತಿಂಗಳು ವಿಶ್ವ ವಿದ್ಯಾನಿಲಯದಲ್ಲಿ ಮೂರು ವಾರಗಳ ಕಾಲ ನಡೆದ ಪ್ಯಾಲೆಸ್ತೀನ್ ಪರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕೆ ಮೇ 23 ರಂದು ನಡೆದ ಈ ವರ್ಷದ ಪದವಿ ಪ್ರಧಾನ ಸಮಾರಂಭದಲ್ಲಿ ಈ ವಿದ್ಯಾರ್ಥಿಗಳು ತಮ್ಮ ಪದವಿಗಳನ್ನು ಪಡೆಯುವುದನ್ನು ನಿಷೇಧಿಸಿತ್ತು.

“ಸಲ್ಲಿಸಿರುವ ಮೇಲ್ಮನವಿಯ ಕುರಿತು ನಿರ್ಧಾರ ಹೊರ ಬೀಳಲು ಕಾಯುತ್ತಿದ್ದೇನೆ” ಎಂದು ಹಾರ್ವರ್ಡ್ ಕಾಲೇಜಿನಲ್ಲಿ ಸಾಮಾಜಿಕ ಅಧ್ಯಯನಗಳು ಮತ್ತು ಜನಾಂಗೀಯತೆ, ವಲಸೆ, ಹಕ್ಕುಗಳ ಅಂತಾರಾಷ್ಟ್ರೀಯ ವಿದ್ಯಾರ್ಥಿ 23 ವರ್ಷದ ಸಫಿ ಹೇಳಿದ್ದಾರೆ.

“ನಾನು ರೋಡ್ಸ್ ಸ್ಕಾಲರ್ ಆಗಿದ್ದೇನೆ ಮತ್ತು ನನ್ನ ಹಾರ್ವರ್ಡ್ ಪದವಿಯನ್ನು ಒಂದು ವರ್ಷ ಕಾಲ ತಡೆಹಿಡಿದಿರುವುದರಿಂದ ಆಕ್ಸ್‌ಫರ್ಡ್ ವಿವಿಯಲ್ಲಿ ಮ್ಯಾಟ್ರಿಕ್ಯುಲೇಷನ್ ಮಾಡಬಹುದೇ ಎಂದು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೇನೆ” ಎಂದಿದ್ದಾರೆ.

ಶ್ರದ್ಧಾ ಜೋಶಿ ಹಾರ್ವರ್ಡ್ ಕಾಲೇಜಿನ ತನ್ನ ಬೋಧಕ ವೃಂದದ ಬೆಂಬಲದ ಹೊರತಾಗಿಯೂ ಇದೇ ಸ್ಥಿತಿಯನ್ನು ಎದುರಿಸುತ್ತಿರುವ ಇನ್ನೋರ್ವ ವಿದ್ಯಾರ್ಥಿನಿಯಾಗಿದ್ದಾರೆ.

“ನಾನು ಮೇಲ್ಮನವಿ ಸಲ್ಲಿಸಿದ್ದು, ವಿವಿಯಿಂದ ಪ್ರತಿಕ್ರಿಯೆ ಬರಲು ಕಾಯುತ್ತಿದ್ದೇನೆ. ನಾವು ತ್ರಿಶಂಕು ಸ್ಥಿತಿಯಲ್ಲಿದ್ದೇವೆ. ಪ್ರಕ್ರಿಯೆಯ ಅಸ್ಪಷ್ಟತೆಯಿಂದಾಗಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಗೊಂದಲದಲ್ಲಿದ್ದಾರೆ ಮತ್ತು ಮೇಲ್ಮನವಿಗಳಿಗೆ ಟೈಮ್‌ಲೈನ್ ಕೂಡ ಸ್ಪಷ್ಟವಿಲ್ಲ” ಎಂದು ಶ್ರದ್ಧಾ ತಿಳಿಸಿದ್ದಾರೆ.

ಟೆಕ್ಸಾಸ್‌ನಲ್ಲಿ ಹುಟ್ಟಿ ಬೆಳೆದ ಜೋಶಿ ಅವರು ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಸಮಾಜ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆಯಲು ಯೋಜಿಸುತ್ತಿದ್ದರು. ಆದರೆ, ಅವರ ಭವಿಷ್ಯವು ಈಗ ಅನಿಶ್ಚಿತವಾಗಿದೆ ಎಂದು ಹೇಳಿದ್ದಾರೆ.

“ಹಾರ್ವರ್ಡ್-ಯುಕೆ ಫೆಲೋಶಿಪ್‌ನೊಂದಿಗೆ ನಾನು ಕ್ಯಾಂಬ್ರಿಡ್ಜ್ ವಿವಿಯನ್ನು ಸೇರಬೇಕಿತ್ತು. ಆದರೆ, ಪದವಿ ಕೈಗೆ ಸಿಗದೆ ನನ್ನ ಸ್ಥಿತಿ ಡೋಲಾಯಮಾನವಾಗಿದೆ. ಪಾರದರ್ಶಕತೆಯ ಕೊರತೆ ಮತ್ತು ಆಡಳಿತದ ಕಳಪೆ ಸಂವಹನದಿಂದಾಗಿ ನಮ್ಮ ಮುಂದಿನ ಹೆಜ್ಜೆಗಳು ಹೇಗಿರಲಿವೆ ಎನ್ನುವುದನ್ನು ಊಹಿಸಲೂ ಕಷ್ಟವಾಗಿದೆ” ಎಂದು ಶ್ರದ್ಧಾ ಅಳಲು ತೋಡಿಕೊಂಡಿದ್ದಾರೆ ಎಂದು ಅಲ್‌ ಜಝೀರಾ ತಿಳಿಸಿದೆ.

ಯುಎಸ್‌ ಇತರ ಶೈಕ್ಷಣಿಕ ಕೇಂದ್ರಗಳಂತೆ ಹಾರ್ವರ್ಡ್ ವಿವಿಯು ಕೂಡ ಪ್ಯಾಲೆಸ್ತೀನ್ ಪರ ಪ್ರತಿಭಟನೆಯಿಂದ ಗಮನ ಸೆಳೆದಿದೆ. ಇಲ್ಲಿನ ವಿದ್ಯಾರ್ಥಿಗಳು ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ಆಕ್ರಮಣದ ವಿರುದ್ದ ಧ್ವನಿಯೆತ್ತಿದ್ದಾರೆ.

ಇದನ್ನೂ ಓದಿ : ಮಣಿಪುರ ಹಿಂಸಾಚಾರ: ಮುಖ್ಯಮಂತ್ರಿ ಬಿರೇನ್ ಸಿಂಗ್ ಬೆಂಗಾವಲು ಪಡೆಯ ಮೇಲೆ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...