Homeಮುಖಪುಟಮೂಲಭೂತ ಹಕ್ಕುಗಳಷ್ಟೇ ಗೌರವಯುತ ಅಂತ್ಯಕ್ರಿಯೆ ಮೃತ ವ್ಯಕ್ತಿಯ ಹಕ್ಕು: ಮುಂಬೈ ಹೈಕೋರ್ಟ್‌

ಮೂಲಭೂತ ಹಕ್ಕುಗಳಷ್ಟೇ ಗೌರವಯುತ ಅಂತ್ಯಕ್ರಿಯೆ ಮೃತ ವ್ಯಕ್ತಿಯ ಹಕ್ಕು: ಮುಂಬೈ ಹೈಕೋರ್ಟ್‌

- Advertisement -
- Advertisement -

ಗೌರವಯುತ ಅಂತ್ಯಕ್ರಿಯೆ ಮೃತ ವ್ಯಕ್ತಿಯ ಹಕ್ಕು, ಇದು ಇತರ ಮೂಲಭೂತ ಹಕ್ಕುಗಳಷ್ಟೇ ಮುಖ್ಯವಾಗಿದೆ ಎಂದು ಮುಂಬೈ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಪೂರ್ವ ಉಪನಗರಗಳಿಗೆ ಹೆಚ್ಚುವರಿ ಸ್ಮಶಾನ ಸ್ಥಳಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನಡೆಸಿದ ಬಾಂಬೆ ಹೈಕೋರ್ಟ್, ಈ ಮಹತ್ವದ ಅಂಶಗಳನ್ನು ಗಮನಿಸಿದೆ.

ಜನರು ಸಮಾಧಿ ಮಾಡಲು ಮಂಗಳ ಗ್ರಹಕ್ಕೆ ಹೋಗಬೇಕೇ?, ಬೃಹತ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್‌ಗೆ(BMC) ಸ್ಮಶಾನಕ್ಕಾಗಿ ಕಳೆದ ನವೆಂಬರ್‌ನಿಂದ ಸ್ಥಳವನ್ನು ಕುಂಡು ಹಿಡಿಯಲಾಗಲಿಲ್ಲ ಎಂದು ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ.

ಈ ವೇಳೆ ಕಳೆದ ಎರಡು ವರ್ಷಗಳಿಂದ ಪೂರ್ವ ಉಪನಗರಗಳಿಗೆ ಹೆಚ್ಚುವರಿ ರುದ್ರಭೂಮಿಯನ್ನು ಒದಗಿಸದ ಮುಂಬೈ ಮಹಾನಗರ ಪಾಲಿಕೆಯ ಉಡಾಫೆ ಧೋರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ಕೆ.ಉಪಾಧ್ಯಾಯ ಹಾಗೂ ನ್ಯಾ. ಅಮಿತ್ ಬೋರ್ಕರ್ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠವು ತರಾಟೆಗೆ ತೆಗೆದುಕೊಂಡಿದೆ.

ಮಹಾನಗರ ಪಾಲಿಕೆಗೆ ಮೃತ ವ್ಯಕ್ತಿಗಳನ್ನು ಗೌರವಯುತವಾಗಿ ಅಂತ್ಯಕ್ರಿಯೆ ನಡೆಸಲು ಸಾಕಷ್ಟು ಜಾಗ ಒದಗಿಸಬೇಕಾದುದು ಶಾಸನಾತ್ಮಕ ಕರ್ತವ್ಯ ಹಾಗೂ ಅನಿವಾರ್ಯತೆ ಇದೆ. ಈ ಬಾಧ್ಯತೆಯ ವಿಚಾರದಲ್ಲಿ ಸ್ಥಳೀಯ ಸಂಸ್ಥೆಗಳು ತಮ್ಮ ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಪೀಠವು ಹೇಳಿದೆ.

ಮುಂಬೈನ ಪೂರ್ವ ಉಪನಗರಗಳಿಗೆ ಹೆಚ್ಚುವರಿ ಸ್ಮಶಾನ ಭೂಮಿಯನ್ನು ಕೋರಿ ಉಪನಗರದ ಗೋವಂಡಿ-ಶಂಶೇರ್ ಅಹ್ಮದ್, ಅಬ್ರಾರ್ ಚೌಧರಿ ಮತ್ತು ಅಬ್ದುಲ್ ರೆಹಮಾನ್ ಶಾ ಎಂಬ ಮೂವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸಿದ್ದು, ಮೃತ ವ್ಯಕ್ತಿಯ ಯೋಗ್ಯ ಮತ್ತು ಗೌರವಾನ್ವಿತ ಅಂತ್ಯಕ್ರಿಯೆಯ ಹಕ್ಕು ಇತರ ಮೂಲಭೂತ ಹಕ್ಕುಗಳಷ್ಟೇ ಮುಖ್ಯವಾಗಿದೆ ಎಂದು ಕೋರ್ಟ್‌ ಹೇಳಿದೆ.

ಸ್ಮಶಾನಕ್ಕಾಗಿ ಮೂರು ಸ್ಥಳಗಳನ್ನು ಉಲ್ಲೇಖಿಸಿ ಅರ್ಜಿಯಲ್ಲಿ ಹೇಳಲಾಗಿದೆ. ಆದರೆ ಆ ಸ್ಥಳಗಳು ಸ್ಮಶಾನಕ್ಕೆ ಯೋಗ್ಯವಾಗಿಲ್ಲ ಎಂದು ಬಿಎಂಸಿ ಈ ಹಿಂದೆ ನ್ಯಾಯಾಲಯಕ್ಕೆ ತಿಳಿಸಿತ್ತು. ಆಗ ಜನರು ಸಮಾಧಿ ಮಾಡಲು ಮಂಗಳ ಗ್ರಹಕ್ಕೆ ಹೋಗಬೇಕೇ ಎಂದು ಪೀಠವು ತರಾಟೆಗೆ ತೆಗೆದುಕೊಂಡಿದೆ. ಅವರು ಮಂಗಳ ಗ್ರಹಕ್ಕೆ ಹೋಗಬೇಕೇ? ನವೆಂಬರ್‌ನಿಂದ ನಿಮಗೆ ಸ್ಥಳ ಸಿಗಲಿಲ್ಲ. ಸತ್ತವರು ಈಗ ಎಲ್ಲಿಗೆ ಹೋಗುತ್ತಾರೆ? ಸಿಜೆ ಉಪಾಧ್ಯಾಯ ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಜಾರ್ಖಂಡ್: ವಿಧಾನಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಕಲ್ಪನಾ ಸೊರೇನ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...