Homeಮುಖಪುಟವಿಭಜನೆಯಾಗಿದ್ದ ಎನ್‌ಸಿಪಿ ಮತ್ತೆ ಒಂದಾಗುತ್ತಾ?

ವಿಭಜನೆಯಾಗಿದ್ದ ಎನ್‌ಸಿಪಿ ಮತ್ತೆ ಒಂದಾಗುತ್ತಾ?

- Advertisement -
- Advertisement -

ಮೋದಿ ನೇತೃತ್ವದ ನೂತನ ಎನ್‌ಡಿಎ ಸರಕಾರದಲ್ಲಿ ಎನ್‌ಸಿಪಿ ಬಣಕ್ಕೆ ಸಂಪುಟ ದರ್ಜೆಯ ಸ್ಥಾನಮಾನ ಸಿಗಲಿಲ್ಲ ಎಂದು ಅಸಮಾಧಾನಗೊಂಡಿದ್ದ ಅಜಿತ್‌ ಪವಾರ್‌, ಇದೀಗ ಮಾವ ಶರದ್‌ ಪವಾರ್‌ಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ. ಕಳೆದ 24 ವರ್ಷಗಳಿಂದ ಎನ್‌ಸಿಪಿ ಪಕ್ಷವನ್ನು ಮುನ್ನಡೆಸಿದ್ದಕ್ಕಾಗಿ ಚಿಕ್ಕಪ್ಪ ಶರದ್‌ ಪವಾರ್‌ ಅವರನ್ನು ಅಭಿನಂದಿಸಿದ್ದಾರೆ. ಅಜಿತ್‌ ಬಣದಿಂದ ಶರದ್‌ ಬಣಕ್ಕೆ 18ಕ್ಕೂ ಅಧಿಕ ಶಾಸಕರು ತೆರಳಲು ಮುಂದಾಗಿದ್ದಾರೆ ಎಂಬ ಸುದ್ದಿಗಳ ಮಧ್ಯೆ ಈ ಬೆಳವಣಿಗೆ ನಡೆದಿದೆ.

2023ರಲ್ಲಿ ಶರದ್ ಪವಾರ್ ಸ್ಥಾಪಿಸಿದ ಎನ್‌ಸಿಪಿಯಿಂದ ಬೆಂಬಲಿಗ ಶಾಸಕರ ಜೊತೆ ತೆರಳಿದ್ದ ಅಜಿತ್‌ ಪವಾರ್‌ ಶಿಂಧೆ ಸರಕಾರದಲ್ಲಿ ಡಿಸಿಎಂ ಹುದ್ದೆಯನ್ನು ಪಡೆದುಕೊಂಡಿದ್ದರು. ಆ ಬಳಿಕ ಎನ್‌ಡಿಎ ಬಣದ ಭಾಗವಾಗಿದ್ದ ಅಜಿತ್‌ ಬಣ ಚುನಾವಣೆಯಲ್ಲಿನ ಹೀನಾಯ ಸೋಲು, ಕ್ಯಾಬಿನೆಟ್‌ ದರ್ಜೆಯ ಸ್ಥಾನಮಾನ ಸಿಗದ  ಹಿನ್ನೆಲೆ ಮತ್ತೆ ಚಿಕ್ಕಪ್ಪನ ಜೊತೆ ಅಜಿತ್‌ಗೆ ಪ್ರೀತಿ ಹುಟ್ಟಿದ್ದು, ವಿಭಜಿತ ಎನ್‌ಸಿಪಿ ಮತ್ತೆ ಒಂದಾಗುತ್ತಾ ಎಂಬ ಪ್ರಶ್ನೆ ಮೂಡಿದೆ.

ಲೋಕಸಭೆ ಚುನಾವಣೆಯಲ್ಲಿ ಎನ್‌ಸಿಪಿ ಕೇವಲ ಒಂದು ಸ್ಥಾನವನ್ನು ಗಳಿಸುವ ಮೂಲಕ ಹೀನಾಯ ಸೋಲನುಭವಿದೆ. ಎನ್‌ಡಿಎ ಮಿತ್ರಪಕ್ಷವಾಗಿರುವ ಎನ್‌ಸಿಪಿ ಮೋದಿ 3.0 ಸರ್ಕಾರದಲ್ಲಿ ಕ್ಯಾಬಿನೆಟ್ ಸ್ಥಾನಕ್ಕಿಂತ ಕಡಿಮೆ ಇರುವ ಯಾವುದೇ ಸ್ಥಾನಕ್ಕೆ ಒಪ್ಪಿಕೊಳ್ಳುವುದಿಲ್ಲ ಎಂದು ಪುನರುಚ್ಚರಿಸಿದೆ.

ಇತ್ತೀಚಿನ ಸಾರ್ವತ್ರಿಕ ಚುನಾವಣೆಯಲ್ಲಿ, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ತಾನು ಸ್ಪರ್ಧಿಸಿದ ನಾಲ್ಕು ಸ್ಥಾನಗಳಲ್ಲಿ ಒಂದನ್ನು ಮಾತ್ರ ಗಳಿಸುವಲ್ಲಿ ಯಶಸ್ವಿಯಾಗಿದ್ದರೆ, ಶರದ್ ಪವಾರ್ ನೇತೃತ್ವದ ಪ್ರತಿಸ್ಪರ್ಧಿ ಬಣವು ಸ್ಪರ್ಧಿಸಿದ ಹತ್ತು ಕ್ಷೇತ್ರಗಳಲ್ಲಿ ಎಂಟನ್ನು ಗೆದ್ದುಕೊಂಡಿದೆ. ಅಜಿತ್ ಪತ್ನಿ ಸುನೇತ್ರಾ ಪವಾರ್, ಸೊಸೆ ಸುಪ್ರಿಯಾ ಸುಳೆ ವಿರುದ್ಧ ಬಾರಾಮತಿಯಲ್ಲಿ ಹೀನಾಯ ಸೋಲು ಅನುಭವಿಸಿದ್ದರು.

ಕಳೆದ 24 ವರ್ಷಗಳಿಂದ ಪಕ್ಷವನ್ನು ಮುನ್ನಡೆಸಿದ್ದಕ್ಕಾಗಿ ಶರದ್ ಪವಾರ್ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಅಜಿತ್ ಪವಾರ್ ಹೇಳಿದ್ದಾರೆ.

ಅಜಿತ್ ಪವಾರ್ ಅವರು ಮಹಾರಾಷ್ಟ್ರದಲ್ಲಿ ಶಿವಸೇನೆ-ಬಿಜೆಪಿ ಸರ್ಕಾರಕ್ಕೆ ಸೇರಿದ ಕಾರಣ ಜುಲೈ 2023ರಲ್ಲಿ ಶರದ್ ಪವಾರ್ ಸ್ಥಾಪಿಸಿದ ಎನ್‌ಸಿಪಿಯಿಂದ ಹೊರ ನಡೆದಿದ್ದರು. ಬಳಿಕ ಕೋರ್ಟ್‌ ಮೂಲಕ ತಮ್ಮದೇ ನೈಜ ಎನ್‌ಸಿಪಿ ಎಂದು ಮಾನ್ಯತೆ ಪಡೆದುಕೊಂಡಿದ್ದರು.

ಪಕ್ಷದ ನಾಯಕ ಸುನಿಲ್ ತಟ್ಕರೆ ಅವರು ರಾಯಗಡ ಲೋಕಸಭಾ ಸ್ಥಾನದಲ್ಲಿ ಗೆಲುವನ್ನು ಸಾಧಿಸುವ ಮೂಲಕ ಎನ್‌ಸಿಪಿಯ ಇಮೇಜ್‌ನ್ನು ಉಳಿಸಿಕೊಂಡಿದ್ದಾರೆ. ಎನ್‌ಸಿಪಿಗೆ ಉಂಟಾದ ಚುನಾವಣಾ ಹಿನ್ನಡೆಯಿಂದ ಆಂತರಿಕ ಸಮಸ್ಯೆಗಳನ್ನು ಪರಿಹರಿಸಬೇಕಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮೂಲಭೂತ ಹಕ್ಕುಗಳಷ್ಟೇ ಗೌರವಯುತ ಅಂತ್ಯಕ್ರಿಯೆ ಮೃತ ವ್ಯಕ್ತಿಯ ಹಕ್ಕು: ಮುಂಬೈ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...