Homeಮುಖಪುಟಕಲ್ಕತ್ತಾ: ಕಾನೂನು ಕಾಲೇಜಿನಲ್ಲಿ ಉಪನ್ಯಾಸಕಿಗೆ ಹಿಜಾಬ್‌ ಧರಿಸದಂತೆ ನಿರ್ಬಂಧ

ಕಲ್ಕತ್ತಾ: ಕಾನೂನು ಕಾಲೇಜಿನಲ್ಲಿ ಉಪನ್ಯಾಸಕಿಗೆ ಹಿಜಾಬ್‌ ಧರಿಸದಂತೆ ನಿರ್ಬಂಧ

- Advertisement -
- Advertisement -

ಕಲ್ಕತ್ತಾ ವಿಶ್ವವಿದ್ಯಾನಿಲಯಕ್ಕೆ ಸಂಯೋಜಿತವಾಗಿರುವ ಖಾಸಗಿ ಕಾನೂನು ಕಾಲೇಜಿನ ಆಡಳಿತ ವರ್ಗ ಉಪನ್ಯಾಸಕಿಯೊಬ್ಬರಿಗೆ ಕಾಲೇಜಿಗೆ ಹಿಜಾಬ್ ಧರಿಸಿಕೊಂಡು ಬರದಂತೆ ಸೂಚಿಸಿದ್ದು, ಶಿಕ್ಷಕಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ತರಗತಿಗಳಿಗೆ ಹಾಜರಾಗುವುದನ್ನು ನಿಲ್ಲಿಸಿದ್ದಾರೆ.

ಈ ವಿಷಗಳ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಈ ಆದೇಶ ತಪ್ಪು ಸಂವಹನದಿಂದ ಉಂಟಾಗಿದೆ ಎಂದು ಕಾಲೇಜು ಆಡಳಿತ ಮಂಡಳಿ ಹೇಳಿಕೊಂಡಿದ್ದು, ಶಿಕ್ಷಕಿ ರಾಜೀನಾಮೆ ಹಿಂಪಡೆದು ತರಗತಿಗೆ ಹಾಜರಾಗುವುದನ್ನು ಮುಂದುವರಿಸಿದ್ದಾರೆ.

ಕೆಲಸದ ಸ್ಥಳದಲ್ಲಿ ಹಿಜಾಬ್ ಧರಿಸದಂತೆ ಕಾಲೇಜು ಅಧಿಕಾರಿಗಳು ಸೂಚನೆ ನೀಡಿದ್ದಾರೆ ಎಂದು ಆರೋಪಿಸಿ ಮೇ 31ರ ನಂತರ ಉಪನ್ಯಾಸಕಿ ಸಂಜಿದಾ ಖಾದರ್ ಎಲ್‌ಜೆಡಿ ಕಾನೂನು ಕಾಲೇಜಿಗೆ ತೆರಳುವುದನ್ನು ನಿಲ್ಲಿಸಿದ್ದರು. ಕಾಲೇಜು ಆಡಳಿತ ಮಂಡಳಿಯ ಆದೇಶವು ನನ್ನ ಮೌಲ್ಯಗಳು ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಅವರು ಆರೋಪಿಸಿದ್ದರು.

ಶಿಕ್ಷಕಿಯೊಂದಿಗೆ ಒಗ್ಗಟ್ಟು ವ್ಯಕ್ತಪಡಿಸಿದ ಪಶ್ಚಿಮ ಬಂಗಾಳದ ಸಚಿವ ಮತ್ತು ಜಮೀಯತ್ ಉಲೇಮಾ-ಎ-ಹಿಂದ್ ಅಧ್ಯಕ್ಷ ಸಿದ್ದಿಕುಲ್ಲಾ ಚೌಧರಿ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಕಾಲೇಜು ಅಧಿಕಾರಿಗಳು ಆರೆಸ್ಸೆಸ್‌ ಮತ್ತು ಬಿಜೆಪಿಯ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆಯೇ ಎಂದು ಅವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಶಿಕ್ಷಕಿ ಸಂಜಿದಾ ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ತೆರಳುತ್ತಿದ್ದರು. ಕಾಲೇಜು ಅಧಿಕಾರಿಗಳು ಮತ್ತೆ ಅವರನ್ನು ಸಂಪರ್ಕಿಸಿ ಇದು ಕೇವಲ ತಪ್ಪು ಸಂವಹನದಿಂದ ನಡೆದಿದೆ ಎಂದು ಹೇಳಿದ್ದಾರೆ. ಕೆಲಸದ ಸಮಯದಲ್ಲಿ ಬಟ್ಟೆಯಿಂದ ತಲೆ ಮುಚ್ಚುವುದನ್ನು ನಾವು ಎಂದಿಗೂ ನಿಷೇಧಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಗೋಪಾಲ್ ದಾಸ್ ಈ ಕುರಿತು ಪಿಟಿಐ ಜೊತೆ ಮಾತನಾಡಿದ್ದು, ಇಂತಹ ಯಾವುದೇ ನಿರ್ದೇಶನವನ್ನು ನೀಡಲಾಗಿಲ್ಲ ಎಂದು ಹೇಳಿದ್ದಾರೆ. ಕಾಲೇಜು ಆಡಳಿತಾಧಿಕಾರಿಗಳು ಪ್ರತಿಯೊಬ್ಬರ ಧಾರ್ಮಿಕ ಭಾವನೆಗಳನ್ನು ಗೌರವಿಸುತ್ತಾರೆ. ಅವರು ತರಗತಿಗೆ ಮತ್ತೆ ಹಾಜರಾಗುತ್ತಾರೆ ಎಂದು ಹೇಳಿದ್ದಾರೆ.

ಸೋಮವಾರ ಕಚೇರಿಯಿಂದ ನನಗೆ ಇಮೇಲ್ ಬಂದಿದೆ, ನನ್ನ ಮುಂದಿನ ಕ್ರಮಗಳನ್ನು ವಿಶ್ಲೇಷಿಸಿ ನಂತರ ನಿರ್ಧರಿಸುತ್ತೇನೆ. ಆದರೆ ನಾನು ಮಂಗಳವಾರ ಕಾಲೇಜಿಗೆ ಹೋಗುತ್ತಿಲ್ಲ ಎಂದು ಶಿಕ್ಷಕಿ ಹೇಳಿದ್ದಾರೆ.

ಕಾನೂನು ಕಾಲೇಜಿನ ಆಡಳಿತ ಮಂಡಳಿಯ ಮುಖ್ಯಸ್ಥರು ಇಂತಹ ಆದೇಶವನ್ನು ಹೇಗೆ ಹೊರಡಿಸುತ್ತಾರೆ? ಅಂತಹ ಸಂಸ್ಥೆಯಲ್ಲಿ ಮಕ್ಕಳು ಸಂವಿಧಾನ ಮತ್ತು ಕಾನೂನುಗಳ ಬಗ್ಗೆ ಹೇಗೆ ಕಲಿಯುತ್ತಾರೆ ಎಂದು ಯೋಚಿಸಿ. ಸಿಖ್ ಪುರುಷರು ಪೇಟ ಧರಿಸುವುದಕ್ಕೆ ಅವರಿಗೆ ಯಾವುದೇ ಅಭ್ಯಂತರವಿಲ್ಲ ಎಂದು ನಾವು ಕೇಳಿದ್ದೇವೆ. ಹೀಗಿರುವಾಗ ಮುಸಲ್ಮಾನರನ್ನು ಏಕೆ ಗುರಿಯಾಗಿಸಿಕೊಳ್ಳಲಾಗುತ್ತಿದೆ. ರಾಜ್ಯದ ಜಾತ್ಯತೀತ, ಬಹುತ್ವ ಮತ್ತು ಸಹಿಷ್ಣು ಮೌಲ್ಯಗಳನ್ನು ನಾಶಮಾಡಲು ಹೊರಟಿರುವ ಇಂತಹ ವ್ಯಕ್ತಿಗಳನ್ನು ಬಂಗಾಳದ ಜನರು ಕ್ಷಮಿಸುವುದಿಲ್ಲ ಎಂದು ಚೌಧರಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಹೇಳಿದ್ದಾರೆ.

ಇದನ್ನು ಓದಿ: ಪಂಜಾಬ್‌ನಲ್ಲಿ 128 ಸಾವುಗಳು, ನಾಪತ್ತೆಗಳಿಗೆ ಕಾರಣನಾಗಿದ್ದ ನಿಜ್ಜರ್‌ ಹತ್ಯೆ ಪ್ರಕರಣದಲ್ಲಿ ಆರೋಪಿತ ಅಧಿಕಾರಿ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...